Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.24:‌ ಎಐಸಿಸಿ ಪ್ರಧಾನ ಕಾರ್ಯದರ್ಶಿ...

ಸೆ.24:‌ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮಂಗಳೂರಿಗೆ : ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Sept 2025 9:35 PM IST
share
ಸೆ.24:‌ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮಂಗಳೂರಿಗೆ : ಹರೀಶ್ ಕುಮಾರ್
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

ಮಂಗಳೂರು, ಸೆ.17: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮತ ಕಳ್ಳತನ ದೇಶದ ಅತಿ ದೊಡ್ಡ ಚುನಾವಣಾ ಹಗರಣವಾಗಿದ್ದು, ಇದರ ವಿರುದ್ಧ ಎಐಸಿಸಿ ಅ.15ರ ವರೆಗೆ ದೇಶವ್ಯಾಪಿ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ’ ಅಭಿಯಾನ ಆಯೋಜಿಸಿದೆ. ಈ ಅಭಿಯಾನವು ರಾಜಕೀಯ ಕಾರ್ಯಕ್ರಮವಲ್ಲ. ಸಂವಿಧಾನ ರಕ್ಷಣೆ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 5000 ಸಹಿ ಸಂಗ್ರಹಿಸಿ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಸೆ.24ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಂಗಳೂರಿಗೆ ಆಗಮಿಸಲಿದ್ದು, ಅವರನ್ನು ಎಲ್ಲ ಮುಖಂಡರು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಬೇಕು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲೆಯ ಬಿ.ಎಲ್.ಎ-2ಗಳ ಸಮಾವೇಶ ನಡೆಸಲಿದ್ದಾರೆ. ಇದರ ಪೂರ್ವಭಾವಿಯಾಗಿ ಸೆಪ್ಟೆಂಬರ್ ತಿಂಗಳ ಒಳಗಾಗಿ ಆಯಾ ವಿಧಾನಸಭಾ ಕ್ಷೇತ್ರಗಳ ಬಿಎಲ್‌ಎಗಳಿಗೆ ತರಬೇತಿ ಶಿಬಿರ ಆಯೋಜಿಸಲು ಬ್ಲಾಕ್ ಅಧ್ಯಕ್ಷರು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಈ ವೇಳೆ ಇತ್ತೀಚಿಗೆ ನಡೆದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ ಮುಖಂಡರನ್ನು ಅಭಿನಂದಿಸಲಾಯಿತು.

ಸಭೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜ , ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X