Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿಸೆಂಬರ್ ತಿಂಗಳೊಳಗೆ ಉಳ್ಳಾಲ ತಾಲೂಕಿಗೆ...

ಡಿಸೆಂಬರ್ ತಿಂಗಳೊಳಗೆ ಉಳ್ಳಾಲ ತಾಲೂಕಿಗೆ 24ಗಂಟೆಯೂ ಕುಡಿಯುವ ನೀರು ಪೂರೈಕೆ : ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ14 May 2025 2:09 PM IST
share
ಡಿಸೆಂಬರ್ ತಿಂಗಳೊಳಗೆ ಉಳ್ಳಾಲ ತಾಲೂಕಿಗೆ 24ಗಂಟೆಯೂ ಕುಡಿಯುವ ನೀರು ಪೂರೈಕೆ : ಯು.ಟಿ.ಖಾದರ್

ಉಳ್ಳಾಲ : ಮುಂದಿನ ಡಿಸೆಂಬರ್ ತಿಂಗಳೊಳಗಡೆ 24 ಗಂಟೆ ಕುಡಿಯುವ ನೀರನ್ನು ಉಳ್ಳಾಲ ತಾಲೂಕಿನ ಜನತೆಗೆ ಪುರೈಸಲಾಗುವುದು. ಈಗಾಗಲೇ ಪ್ರತಿ ಮನೆಗಳಿಗೆ ಮೀಟರ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ. ಹಾಗೆಯೇ ಪೈಪ್ ಲೈನ್ ಕಾಮಗಾರಿ ಕೈಗೊಳ್ಳುವಾಗ ಹಣ ಪಡೆದುಕೊಂಡಲ್ಲಿ ನೇರವಾಗಿ ದೂರು ನೀಡಿ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಅವರು ಕೋಟೆಕಾರು ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಜಲಾಲ್ ಬಾಗ್ ಪಾನೀರು ಸಂಪರ್ಕಿಸುವ ಕಾಂಕ್ರೀಟಿಕೃತ ರಸ್ತೆಯನ್ನು ಉದ್ಘಾಟಿಸಿದರು

ಕೋಟೆಕಾರು ಪ.ಪಂ ವ್ಯಾಪ್ತಿಯ ಜಲಾಲ್‌ಬಾಗ್ ನಿಂದ ಪನೀರ್ ಸೈಟ್ ಸಂಪರ್ಕಿಸುವ ರಸ್ತೆಗೆ ಬಹಳಷ್ಟು ಬೇಡಿಕೆಯಿತ್ತು. ತೊಕ್ಕೊಟ್ಟು, ದೇರಳಕಟ್ಟೆ, ಮೆಲ್ಕಾರ್, ನಾಟೆಕಲ್ ಸಂಪರ್ಕಿಸುವ ಲಿಂಕ್ ರಸ್ತೆಯೂ ಇದು ಆಗಿರುವುದರಿಂದ ಹೆಚ್ಚಿನ ಒತ್ತು ನೀಡಿ ಪಟ್ಟಣ ಪಂಚಾಯತ್ ನಲ್ಲಿ ಆಡಳಿತವಿಲ್ಲದ ಸಂದರ್ಭ ತಾನು ವಿಶೇಷ ಅನುದಾನವನ್ನು ಒದಗಿಸಿದ್ದೆನು. ಆದರೆ ಜಾಗದ ತಕರಾರಿನಿಂದ ಕಾಮಗಾರಿ ವಿಳಂಬವಾಯಿತು. ಆದರೆ ಕಣಚೂರು ಮೋನು ಹಾಗೂ ಲವೀನಾ ಕುಟುಂಬಸ್ಥರ ಸಹಕಾರದಿಂದಾಗಿ ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಅಲ್ಲದೆ ಹೆಚ್ಚುವರಿ ರೂ. 3ಲಕ್ಷ ಅನುದಾನವನ್ನು ಪೂರೈಸಲಾಗಿದೆ ಎಂದು ಹೇಳಿದರು.

ಜಲಾಲ್ ಬಾಗ್ ಪ್ರದೇಶವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗಿದ್ದು, ಮೊದಲ ಹಂತವಾಗಿ ಮಸೀದಿ ಕ್ರಾಸ್, ದ್ವಿತೀಯ ಹಂತವಾಗಿ ಟರ್ನಿಂಗ್ ನಿಂದ ಆರೀಫ್ ಮನೆವರೆಗೆ ಅಭಿವೃದ್ಧಿ ಕಡೆಯದಾಗಿ ರಸ್ತೆಯ ಕೊನೆಯವರೆಗೂ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಮುಂದಿನ ದಿನಗಳಲ್ಲಿಯೂ ಜಲಾಲ್ ಬಾಗ್ ಪಾನೀರು ವಾರ್ಡಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು . ಡಿಸೆಂಬರ್ ತಿಂಗಳೊಳಗೆ ಉಳ್ಳಾಲ ತಾಲೂಕಿನ ಉದ್ದಕ್ಕೂ 24 ಗಂಟೆ ಕುಡಿಯುವ ನೀರಿನ ಯೋಜನೆ ಆರಂಭವಾಗುವುದು. ಪ್ರತಿಯೊಂದು ಮನೆಗಳಿಗೂ ಮೀಟರ್ ಅಳವಡಿಕೆ ಮಾಡಲಾಗಿದೆ. ಬಡವರಿಗೂ ಅನುಕೂಲಕರವಾಗುವ ಉದ್ದೇಶದಿಂದ ಮೀಟರ್ ಅಳವಡಿಸಲಾಗಿದ್ದು, ಪೈಪ್ ಲೈನ್ ಫಿಟಿಂಗ್ ಕಾಮಗಾರಿ ಸಂಪೂರ್ಣ ಉಚಿತವಾಗಿದೆ. ಕಾಮಗಾರಿ ನಡೆಸುವವರು ಹಣ ಕೇಳುತ್ತಿರುವ ದೂರು ಕೇಳಿಬಂದಿದೆ ಎಂದರು.

ಈ ಸಂದರ್ಭ ಮುಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಕೋಟೆಕಾರ್ ಪ. ಪಂಚಾಯತ್ ಮಾಜಿ ಕೌನ್ಸಿಲರ್ ಡಿ.ಎಮ್ ಮಹಮ್ಮದ್, ಕೌನ್ಸಿಲರ್ ಆಯಿಶಾ ಡಿ ಅಬ್ಬಾಸ್, ಜಲಾಲ್ ಬಾಗ್ ಅರಫಾ ಮಸೀದಿ ಅಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಜಲಾಲ್ ಬಾಗ್ ಫ್ರೆಂಡ್ಸ್ ಅಸೋಸಿಯೇಷನ್ ಅಧ್ಯಕ್ಷ ಅಲಿ ಹಸನ್, ಸಫಿಯ ಪನೀರ್, ಹಮೀದ್ ಪಜೀರ್, ಹಮೀದ್ ಜಲಾಲ್ ಬಾಗ್, ಸಾಮಾಜಿಕ ಮುಖಂಡ ಇಬ್ರಾಹಿಂ ಕತಾರ್ ಹಾಗೂ ಜಲಾಲ್ ಬಾಗ್ ನಾಗರಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X