ಪಿ.ಎ. ಇಂಜಿನಿಯರಿಂಗ್ ಕಾಲೇಜಿನ 24ನೇ ವಾರ್ಷಿಕೋತ್ಸವ

ಮಂಗಳೂರು, ಮೇ 10: ನಡುಪದವಿನಲ್ಲಿರುವ ಪಿ.ಎ. ಕಾಲೇಜು ಆಫ್ ಇಂಜಿನಿಯರಿಂಗ್ ನ 24ನೇ ವಾರ್ಷಿಕೋತ್ಸವ 'ಪೇಸ್ ಡೇ' ಕಾಲೇಜಿನ ಸಭಾಂಗಣದಲ್ಲಿ ಮೇ 9ರಂದು ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ಉಪ ವೈದ್ಯಕೀಯ ಅಧೀಕ್ಷಕ ಡಾ.ಶಹನ್ ವಾಸ್ ಮಣಿಪಾಡಿ ಮಾತನಾಡಿ, ಪಿ.ಎ. ತಾಂತ್ರಿಕ ಮಹಾವಿದ್ಯಾಲಯದ ವಿವಿಧ ಸಾಧನೆಗಳನ್ನು ಗುರುತಿಸಿ ಪ್ರಶಂಸಿದರು. ಇನ್ನೋರ್ವ ಅತಿಥಿ ಕಣ್ಣೂರು ಹಾಗೂ ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಡಾ.ಅಬ್ದುಲ್ ರಹ್ಮಾನ್ ಮಾತನಾಡಿ ಶುಭ ಹಾರೈಸಿದರು.
ಇದೇವೇಳೆ ಶಿಕ್ಷಣ, ಸಂಶೋಧನೆ ಹಾಗೂ ಆಡಳಿತ ವಿಭಾಗದಲ್ಲಿ ಸಲ್ಲಿಸಿದ ಸೇವೆಗಾಗಿ ಡಾ .ಅಬ್ದುಲ್ ರಹ್ಮಾನ್ ರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಪಿಎಚ್ ಡಿ ಪದವಿ ಗಳಿಸಿದ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು. ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ರಮೀಝ್ ಎಂ.ಕೆ. 23-24ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು.
ವೇದಿಕೆಯಲ್ಲಿ ಪಿ.ಎ. ಕ್ಯಾಂಪಸ್ ಎಜಿಎಂ ಶರ್ಫುದ್ದೀನ್, ಕಾಲೇಜಿನ ಡೀನ್(ವಿದ್ಯಾರ್ಥಿ ವ್ಯವಹಾರ) ಡಾ.ಸೈಯದ್ ಅಮೀನ್ ಅಹ್ಮದ್, ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸರ್ಫ್ರಾಝ್ ಹಾಶಿಂ, ಪಿಎ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಸಲೀಮುಲ್ಲಾ ಖಾನ್, ಪ್ರೊ. ಪಿಎ ಪಾಲಿಟೆಕ್ನಿಕ್ ಪ್ರಾಂಶುಪಾಲ ಸೂಫಿ, ಪಿಎ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ.ಸಜೀಶ್ ರಘುನಾಥನ್, ಹ್ಯಾರಿಸ್ ಟಿ.ಡಿ.ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕಾಲೇಜಿನ ಭೌತವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಇಸ್ಮಾಯೀಲ್ ಶಾಫಿ ಸ್ವಾಗತಿಸಿದರು.
ಕಾರ್ಯಕ್ರಮದ ಸಂಯೋಜಕ ಪ್ರೊ.ವಿಠ್ಠಲ್ ಭಟ್ ವಂದಿಸಿದರು. ವಿದ್ಯಾರ್ಥಿನಿಯರಾದ ಸುಝಾನ್ ಹಾಗೂ ರುಶ್ದ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಇಕ್ಬಾಲ್, ಪ್ರೊ.ಕಾವ್ಯಾ ಹಾಗೂ ಪ್ರೊ.ವಸೀಮ್ ಸಹಕರಿಸಿದರು.







