Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.25ರಂದು ಉಪ್ಪಿನಂಗಡಿ ಸರಕಾರಿ ಪದವಿ...

ಫೆ.25ರಂದು ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ23 Feb 2025 9:23 PM IST
share
ಫೆ.25ರಂದು ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಲೋಕಾರ್ಪಣೆ

ಉಪ್ಪಿನಂಗಡಿ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಖಾಸಗಿ ಕಾಲೇಜುಗಳಿಗೆ ಸರಿಸಾಟಿಯಾಗಿ ಬೆಳೆದು ನಿಂತಿರುವ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರವು ವಿವೇಕ ಯೋಜನೆಯಡಿ ಮೂರು ಕೋಟಿ ಅರುವತ್ತು ಸಾವಿರ ಅನುದಾನ ನೀಡಿದ್ದು, ಇದರಿಂದ 12 ತರಗತಿ ಕೊಠಡಿಗಳನ್ನು ನಿರ್ಮಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಫೆ.25ರಂದು ನಡೆಯಲಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಅಝೀಝ್ ಬಸ್ತಿಕಾರ್ ತಿಳಿಸಿದರು.

ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9:30ಕ್ಕೆ ಉದ್ಘಾಟನೆ ನಡೆಯಲಿದ್ದು, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕರಾದ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪ ಗೌರವ ಉಪಸ್ಥಿತಿ ಇರಲಿದ್ದಾರೆ. ‌

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ವಿವಿಧ ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಗಳ, ಪ್ರಾಧಿಕಾರ, ಅಕಾಡಮಿಗಳ ಅಧ್ಯಕ್ಷರುಗಳು ಹಾಗೂ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಲಲಿತಾ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯದ ಧರ್ಮಗುರು ಫಾ. ಜೆರಾಲ್ಡ್ ಡಿಸೋಜ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾ ಕೃಷ್ಣ ನಾಯ್ಕ್, ಉಪ್ಪಿನಂಗಡಿ ಮಾಲೀಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷರಾದ ಎಚ್. ಯೂಸುಫ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಶಿಲೆಗಳನ್ನು ಸುಂದರ ಶಿಲ್ಪಗಳನ್ನಾಗಿ ಅರಳಿಸುವ ಕೆಲಸ: ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಳು ಯಾವುದೇ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಕಡಿಮೆಯಿಲ್ಲದಂತೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ. ಪ್ರಸ್ತುತ ಇಲ್ಲಿ 804 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದು, ಕೊಠಡಿಗಳ ಸಮಸ್ಯೆಯಿಂದ ಕಳೆದ ಶೈಕ್ಷಣಿಕ ಅವಧಿಯಲ್ಲಿ ಸುಮಾರು 150 ವಿದ್ಯಾರ್ಥಿಗಳನ್ನು ಕಾಲೇಜಿಗೆ ದಾಖಲಾತಿ ಮಾಡಿಕೊಳ್ಳದೇ, ಹಿಂದಕ್ಕೆ ಕಳುಹಿಸಲಾಗಿದೆ. ಶಾಸಕರಾದ ಅಶೋಕ್ ಕುಮಾರ್ ರೈಯವರ ವಿಶೇಷ ಮುತುವರ್ಜಿ ಯಿಂದಾಗಿ ನಮಗೆ 3.06 ಕೋ. ರೂ. ಅನುದಾನದಲ್ಲಿ 12 ಕೊಠಡಿಗಳ ನಿರ್ಮಾಣವಾಗಿದ್ದು, ಶೇ.90ರಷ್ಟು ಕೊಠಡಿಗಳ ಅವಶ್ಯಕತೆ ನೀಗಿದೆ. ಇನ್ನು ಇದಕ್ಕೆ ಬೇಕಾದ ಬೆಂಚ್, ಡೆಸ್ಕ್‍ಗಳ ಅವಶ್ಯಕತೆಗಳಿದ್ದು, ಇದಕ್ಕಾಗಿ ದಾನಿಗಳ ಮೊರೆ ಹೋಗಲಾಗುವುದು. ಮುಂದಿನ ಶೈಕ್ಷಣಿಕ ಅವಧಿಯಲ್ಲಿ 1000ಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ದಾಖಲಾತಿ ಮಾಡಿ ಕೊಳ್ಳುವ ನಿರೀಕ್ಷೆಯಿದೆ. ದ.ಕ. ಜಿಲ್ಲೆಯ ಗಡಿಭಾಗವಾದ ಶಿರಾಡಿ ಸೇರಿದಂತೆ ಇಲ್ಲಿ ವಸತಿ ನಿಲಯ ಇರುವುದರಿಂದ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ಇಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ನಾಲ್ಕು ಮಹಡಿಗಳಲ್ಲಿ ಈಗ 12 ನೂತನ ತರಗತಿ ಕೊಠಡಿಗಳು ನಿರ್ಮಾಣಗೊಂಡಿದ್ದು, ನಾಲ್ಕು ಮಹಡಿಗಳ ಸರಕಾರಿ ಕಾಲೇಜೊಂದು ಇರುವುದು ಈ ಭಾಗದಲ್ಲಿ ಇದೇ ಮೊದಲೆನ್ನಬಹುದು. ಇದರೊಂದಿಗೆ ಇಲ್ಲಿ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಕೋಚಿಂಗ್ ಕೂಡಾ ನೀಡಲಾಗುತ್ತದೆ. ಖಾಸಗಿ ಶಾಲೆಗಳಂತೆ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಇಲ್ಲಿ ದಾಖಲಾತಿ ಮಾಡಿಕೊಳ್ಳದೇ, ಎಸೆಸ್ಸೆಲ್ಸಿಯಲ್ಲಿ ತೇರ್ಗಡೆಹೊಂದಿದ ಪ್ರತಿಯೋರ್ವ ವಿದ್ಯಾರ್ಥಿಗಳನ್ನು ಇಲ್ಲಿ ದಾಖಲಾತಿ ಮಾಡಿಕೊಂಡು ಶಿಲೆಗಳನ್ನು ಸುಂದರ ಶಿಲ್ಪಗಳನ್ನಾಗಿ ರೂಪಿಸುವಂತೆ ಆ ವಿದ್ಯಾರ್ಥಿಗಳನ್ನು ಉತ್ತಮ ಸಾಧಕರನ್ನಾಗಿ ಮಾಡುವ ಕೆಲಸ ಈ ಕಾಲೇಜಿನಲ್ಲಿ ನಡೆಯುತ್ತಿದ್ದು, ಉತ್ತಮ ಉಪನ್ಯಾಸಕ ವೃಂದ ಈ ಕೆಲಸಗಳಲ್ಲಿ ಶ್ರಮಿಸುತ್ತಿದೆ ಎಂದರು.

ಕಾಲೇಜಿನ ಪ್ರಾಚಾರ್ಯರಾದ ಇಬ್ರಾಹೀಂ ಎಂ. ಮಾತನಾಡಿ, ಪ್ರಸ್ತುತ ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ 92 ಹಾಗೂ ದ್ವಿತೀಯ ಪಿಯುಸಿಯಲ್ಲಿ 88, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿಯಲ್ಲಿ 194, ದ್ವಿತೀಯ ಪಿಯುಸಿಯಲ್ಲಿ 196 ವಿದ್ಯಾರ್ಥಿಗಳಿದ್ದಾರೆ. ಕಲಾ ವಿಭಾಗದಲ್ಲಿ ಪ್ರಥಮ ಪಿಯುಸಿಯಲ್ಲಿ 133 ಮತ್ತು ದ್ವಿತೀಯ ಪಿಯುಸಿಯಲ್ಲಿ 127 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 804 ವಿದ್ಯಾರ್ಥಿಗಳು ವಿದ್ಯಾರ್ಜನೆಗೈಯುತ್ತಿದ್ದಾರೆ. ಇಲ್ಲಿ ಕೇವಲ ಪಠ್ಯಕಲ್ಲದೇ, ಎನ್‍ಎಸ್‍ಎಸ್ ಘಟಕ, ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗೂ ಆದ್ಯತೆ ನೀಡಲಾಗುತ್ತಿದೆ. ಕಾಲೇಜಿಗೊಂದು ಆವರಣ ಗೋಡೆಯ ಅಗತ್ಯತೆಯಿದ್ದು, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಅನ್ನು ನಿರ್ಮಿಸುವ ಯೋಜನೆ ಇದೆ. ಇದರೊಂದಿಗೆ ಪ್ರತಿ ವಿದ್ಯಾರ್ಥಿಯ ಹುಟ್ಟು ಹಬ್ಬಕ್ಕೆ ಒಂದು ಗಿಡವನ್ನು ನೆಡುವ ಮೂಲಕ ಗ್ರೀನ್ ಕ್ಯಾಂಪಸ್ ಅನ್ನು ನಿರ್ಮಾಣ ಮಾಡುವ ಪರಿಕಲ್ಪನೆ ಇದೆ. ಈ ಸರಕಾರಿ ಕಾಲೇಜಿನ ಅಭಿವೃದ್ಧಿಗೆ ಶೈಕ್ಷಣಿಕ ಪ್ರೇಮಿಗಳ ಸಹಕಾರ ಅಗತ್ಯವಿದೆ ಎಂದರು.

ಕಾಲೇಜು ಅಬಿವೃದ್ಧಿ ಸಮಿತಿಯ ಸದಸ್ಯ ಆದಂ ಕೊಪ್ಪಳ ಮಾತನಾಡಿ, ಕಾಲೇಜು ಸ್ವಾಧೀನದಲ್ಲಿರುವ 60 ಸೆಂಟ್ಸ್ ಜಾಗ ಸರಕಾರದ ಹೆಸರಿನಲ್ಲಿದ್ದು, ಅದನ್ನು ಕಾಲೇಜಿನ ಹೆಸರಿನಲ್ಲಿ ಮಾಡಿಕೊಳ್ಳುವ ಕೆಲಸ ನಡೆಯುತ್ತಿದ್ದು, ಈ ಕೆಲಸ ಶೇ.80ರಷ್ಟು ಆಗಿದೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಅನಿ ಮಿನೇಜಸ್, ಇಬ್ರಾಹೀಂ ಕೆ., ಉಪನ್ಯಾಸಕರಾದ ಉಷಾ ಎ.ಎಸ್., ರಮೇಶ್ ಎಚ್.ಜೆ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X