Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.25: ಆಶಾ ಪ್ರಕಾಶ್ ಶೆಟ್ಟಿ ಸಹಾಯ...

ಡಿ.25: ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ; 7ನೇ ವರ್ಷದ ನೆರವು-2025

ವಾರ್ತಾಭಾರತಿವಾರ್ತಾಭಾರತಿ23 Dec 2025 3:20 PM IST
share

ಮಂಗಳೂರು,ಡಿ.23;ಪ್ರತೀ ವರ್ಷ ಡಿಸೆಂಬರ್ 25 ರಂದು ನಾವು ಗೋಲ್ಡ್ ಫಿಂಚ್ ಮೈದಾನದಲ್ಲಿ ಅಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ "ನೆರವು" ಕಾರ್ಯಕ್ರಮವನ್ನು ಅಯೋಜಿಸುತ್ತಿದ್ದು, 7ನೇ ವರ್ಷದಲ್ಲಿ 100ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ನೆರವು ವಿತರಣೆಯಾಗಲಿದೆ. ಸರಿಸುಮಾರು 4 ಸಾವಿರ ಕುಟುಂಬಗಳು ಈ ಕಾರ್ಯಕ್ರಮದಲ್ಲಿ "ನೆರವು" ಬೆಂಬಲ ಪಡೆಯಲಿವೆ. 9.5 ಕೋ.ರೂ. ಗಳಿಗೂ ಅಧಿಕ ಮೊತ್ತ ವಿತರಿಸಲಾಗುತ್ತಿದೆ ಎಂದು ಎಂಆರ್ ಜಿ ಸಮೂಹ ಸಂಸ್ಥೆ ಗಳ ಅಧ್ಯಕ್ಷ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ವೈದ್ಯಕೀಯ ಚಿಕಿತ್ಸೆ ಸುಲಭವಾಗಿದೆ ಎಂಬುದೇನೋ ನಿಜ. ಆದರೆ ಆ ಸವಲತ್ತುಗಳಿಗೆ ಎಲ್ಲರಿಗೂ ಪ್ರವೇಶ ಸಾಧ್ಯವಾಗುತ್ತಿಲ್ಲ ಎಂಬುದೂ ಅಷ್ಟೇ ಸತ್ಯ. ನಮ್ಮ ನೆರವಿನ ಮೊತ್ತದಲ್ಲಿ ದೊಡ್ಡ ಭಾಗ ಇದಕ್ಕೆ ಮೀಸಲಾಗಿದೆ. ಜಾತಿ, ಧರ್ಮ, ಪಂಗಡ ಎಂಬ ಯಾವ ಮನುಷ್ಯ ನಿರ್ಮಿತ ಗಡಿಗಳಿಲ್ಲದೆ ಅವಶ್ಯಕತೆ ಇರುವವರನ್ನು ನಮ್ಮ ತಂಡ ಹುಡುಕಿ, ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿ ಗಳನ್ನು ಆಯ್ಕೆ ಮಾಡಿದೆ. ಇಲ್ಲಿ ಅವಶ್ಯಕತೆಯೇ ಮಾನದಂಡವಾಗಿದೆ. ನಮಗೆ ವಿಶ್ವಾಸವಿದೆ -ಅನಿವಾರ್ಯತೆ ಇಲ್ಲದಿದ್ದರೆ ಯಾರೂ ಅರ್ಜಿ ಹಾಕುವುದಿಲ್ಲ ಎಂದರು.

ದೈಹಿಕ ಸಮಸ್ಯೆ ಇರುವ ದಿವ್ಯಾಂಗರು, ಡಯಾಲಿಸ್ ಸಹಿತ ನಿರಂತರ ಚಿಕಿತ್ಸೆಯನ್ನು ಪಡೆಯಬೇಕಾದ ಅನಿವಾರ್ಯತೆ ಇರುವವರು, ಶಿಕ್ಷಣ ಮುಂದುವರಿಕೆಗೆ ನೆರವು ಬೇಕಾದವರು, ಸಿಂಗಲ್ ಪೇರೆಂಟ್ ಮಕ್ಕಳು, ಸಾಂಸ್ಕೃತಿಕ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ನೆರವಿನ ಬೆಂಬಲ ಪಡೆಯಲಿದ್ದಾರೆ. ಮನೆ ಕಟ್ಟಿ ಅದರ ಗೃಹ ಪ್ರವೇಶಕ್ಕಾಗಿ ಕಾಯುತ್ತಿರುವವರಿಗೂ ಅವರ ಭಾವನಾತ್ಮಕ ಮತ್ತು ಹಣಕಾಸಿನ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿ ನೆರವು ಕೊಡಲಾಗುತ್ತಿದೆ. ಮನೆ ಕಟ್ಟಲು ಸಹಾಯ ಕೋರಿದ ಅರ್ಜಿಗಳನ್ನು ಪುರಸ್ಕರಿಸಲಾಗಿದೆ ಎಂದು ತಿಳಿಸಿದರು.

ಈ ಯೋಜನೆಯನ್ನು ಆರಂಭಮಾಡಿದ ಮೊದಲ ವರ್ಷ ಒಟ್ಟು 1.25 ಕೋ.ರೂ. ನೆರವು ವಿತರಿಸಿದ್ದೇವೆ.ಆಗ 28 ಸಂಘ ಸಂಸ್ಥೆಗಳು ಪ್ರಯೋಜನ ಪಡೆದಿವೆ.ಫಲಾನುಭವಿಗಳ ಆಯ್ಕೆಯಲ್ಲಿ ಪ್ರಾದೇಶಿಕತೆಯನ್ನೂ ಗಮನಿಸಲಾಗಿದೆ. ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಕೊಪ್ಪ, ಸಕಲೇಶಪುರ ಮತ್ತು ನಮ್ಮ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಮಾಡಲಾಗಿದೆ. ನಾವು ಆಯ್ಕೆಗೆ ಸಂಬಂಧಿಸಿ ಸ್ವಾಯತ್ತ ಸಮಿತಿಯನ್ನು ಹೊಂದಿದ್ದೇವೆ, ಎಲ್ಲ ಜವಾಬ್ದಾರಿಯನ್ನೂ ಅದು ನಿಭಾಯಿಸುತ್ತದೆ. ವರ್ಷಂಪ್ರತಿಯಂತೆ ಈ ವರ್ಷವೂ ಸಾಧಕರನ್ನು ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪಾಲ್ಗೊಳ್ಳುತ್ತಾರೆ. ಚಲನ ಚಿತ್ರ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗವಹಿಸುತ್ತಾರೆ. ಮೂಡಬಿದ್ರೆಯ ಆಳ್ವಾಸ್ ಎಜುಕೇಷನ್ ಟ್ರಸ್ಟ್‌ನ ಡಾ. ಮೋಹನ್ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ. ಗ್ರೂಪಿನ ಗೌರವ್ ಪಿ. ಶೆಟ್ಟಿ ಅಂದಿನ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

* ಯೋಜನೆ ಆರಂಭವಾದ ವರ್ಷ 2019. ಕಳೆದ ವರ್ಷ 3000 ಕುಟುಂಬಗಳಿಗೆ ಆರು ಕೋಟಿ ನೆರವು ವಿತರಿಸಲಾಗಿತ್ತು.

* ಕಳೆದ ವರ್ಷದವರೆಗೆ ಪ್ರಧಾನವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದ ಯೋಜನೆಯ ಭೌಗೋಳಿಕ ವ್ಯಾಪ್ತಿ ಶಿವಮೊಗ್ಗ, ಚಿಕ್ಕಮಗಳೂರು ಭಾಗಶಃ ಉತ್ತರ ಕನ್ನಡ ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ.

* ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ಅಥವಾ ಕೆಲವು ಸಂದರ್ಭಗಳಲ್ಲಿ ಚೆಕ್ ಮೂಲಕ ಪಾವತಿಸಲಾಗುತ್ತದೆ.

ಸಮುದಾಯದ ಅಸ್ತಿಗಳನ್ನು ಸೃಷ್ಟಿಸುವ ಧಾರ್ಮಿಕ ಕ್ಷೇತ್ರ, ಪರಂಪರೆಯ ಕ್ಷೇತ್ರಗಳಿಗೆ ನೆರವು ನೀಡಲಾಗಿದೆ.

* ಫಲಾನುಭವಿಗಳನ್ನು ಕರೆತರಲು ವಾಹನ ವ್ಯವಸ್ಥೆಯನ್ನು ಎಂ.ಆರ್.ಜಿ.ಗ್ರೂಪ್ ಮಾಡುತ್ತದೆ. ಉಪಾಹಾರದ ವ್ಯವಸ್ಥೆ ಎಲ್ಲರಿಗೂ ಇರುತ್ತದೆ.

ಯೋಜನೆಯ ಸಂಕ್ಷಿಪ್ತ ಫಲಶ್ರುತಿ:

ಶಿಕ್ಷಣಕ್ಕೆ ಪ್ರೋತ್ಸಾಹ ಶೀರ್ಷಿಕೆಯಡಿ ನೆರವು ಪಡೆದವರು ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಿ ಉದ್ಯೋಗಿಗಳಾಗಿದ್ದಾರೆ, ಅವರ ಕುಟುಂಬಗಳಿಗೆ ಅಧಾರ ಸ್ತಂಭವಾಗಿದ್ದಾರೆ. ಕ್ರೀಡಾ ಶೀರ್ಷಿಕೆಯಡಿ ಯೋಜನೆಯ ಬೆಂಬಲ ಪಡೆದವರು ಸಾಧನೆಯ ಪಥದಲ್ಲಿ ಸಾಗುತ್ತಿದ್ದಾರೆ.

ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ನೀಡಿರುವ ಬೆಂಬಲದಿಂದ ಬಾಲಕ ಮತ್ತು ಬಾಲಕಿಯರಿಗೆ ನೈರ್ಮಲ್ಯಯುಕ್ತ ಶೌಚಾಲಯಗಳ ಸೌಲಭ್ಯ ಒದಗಿದೆ. ಪರೋಕ್ಷ ಪರಿಣಾಮ ಎಂದರೆ ಶಾಲಾ ಮಕ್ಕಳಲ್ಲಿ ನೈರ್ಮಲ್ಯದ ಕಾಳಜಿ ಹೆಚ್ಚಿದೆ, ಜೊತೆಗೆ ಆರೋಗ್ಯರಕ್ಷಣೆಯ ಕವಚವೂ ಬಲಗೊಂಡಿದೆ.

ಯೋಜನೆಯು ಶಿಕ್ಷಕರ ಕೊರತೆ ಇರುವ ಅನುದಾನಿತ/ಸರಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸುವ ಆಡಳಿತ ಮಂಡಳಿಗಳನ್ನು ಬೆಂಬಲಿಸಿದೆ. ಇದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಗ್ರಾಮೀಣ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳವಾಗಿದೆ.

ದಿವ್ಯಾಂಗರಿಗೆ ಅವರ ಅವಶ್ಯಕತೆಗಳಿಗೆ ಅನುಗುಣವಾಗಿ ಸಾಧನ ಸಲಕರಣೆಗಳನ್ನು ಖರೀದಿಸಲು ನೆರವು ಸಹಾಯ ಮಾಡಿದೆ. ಅನೇಕ ದಿವ್ಯಾಂಗರು ಚಲನೆಯ ಸ್ವಾತಂತ್ರ್ಯವನ್ನು ಪಡೆದಿದ್ದಾರೆ ಎಂದು ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X