Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎ.27ರಂದು ಕುಡುಬಿ ಜಾನಪದ ಸಮಾವೇಶ

ಎ.27ರಂದು ಕುಡುಬಿ ಜಾನಪದ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ24 April 2025 6:11 PM IST
share

ಮಂಗಳೂರು, ಎ. 24: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ದ.ಕ. ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಕುಡುಬಿ ಜಾನಪದ ಸಮಾವೇಶ ಎ.27ರಂದು ಬೆಳಗ್ಗೆ 10 ಗಂಟೆಗೆ ಮಿಜಾರಿನಲ್ಲಿರುವ ಮಿಜಾರು ಅಣ್ಣಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಕೊಂಕಣಿ ಭಾಷಿಕ ಒಟ್ಟು 42 ಪಂಗಡಗಳಲ್ಲಿ ಕುಡುಬಿ ಸಮುದಾಯವೂ ಸೇರಿದೆ. ಈ ಸಮಾಜವನ್ನು ಒಗ್ಗೂಡಿಸಿ ಅವರ ಕಲೆ, ಆಚಾರ-ವಿಚಾರ, ಸಂಸ್ಕೃತಿ, ಪರಂಪರೆ ಬಿಂಬಿಸುವಂತಹ ಜಾನಪದ ಸಮಾವೇಶ ಇದಾಗಿದೆ ಎಂದರು.

ಬೆಳಗ್ಗೆ 10 ಗಂಟೆಗೆ ಮಂಗಳೂರು- ಮೂಡುಬಿದಿರೆ ಮುಖ್ಯ ರಸ್ತೆಯ ಮಿಜಾರು ದೂಮಚಡವು ಜಂಕ್ಷನ್‌ ನಿಂದ ಮಿಜಾರು ಅಣ್ಣಪ್ಪ ಸಭಾಂಗಣವರೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಮೆರವಣಿಗೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಉದ್ಘಾಟಿಸುತ್ತಾರೆ. ನಂತರ ನಡೆಯಲಿ ರುವ ಸಮಾವೇಶವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಉದ್ಘಾಟಿಸುತ್ತಾರೆ. ಮೂಡುಬಿದಿರೆಯ ಧನಲಕ್ಷ್ಮೀ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲೀಕ ಶ್ರೀಪತಿ ಭಟ್, ದ.ಕ. ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕೃಷ್ಣ ಕೊಂಪದವು ಮತ್ತಿತರರು ಹಾಜರಿರುತ್ತಾರೆ ಎಂದು ಸ್ಟ್ಯಾನಿ ಆಲ್ವಾರಿಸ್ ತಿಳಿಸಿದರು.

ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಐವನ್ ಡಿಸೋಜ, ಮಂಜುನಾಥ ಭಂಡಾರಿ ಮತ್ತಿತರರು ಭಾಗವಹಿಸಲಿದ್ದಾರೆ. ಎರಡೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಲಿದ್ದಾರೆ ಎಂದರು.

ಕಲಾ ಪ್ರದರ್ಶನ:

ಕೋಲಾಟ ಮತ್ತು ಗುಮಟೆ ಬಾರಿಸುವ 22 ಕುಡುಬಿ ಜಾನಪದ ಕಲಾ ತಂಡಗಳಿಂದ ಕಲಾ ಪ್ರದರ್ಶನ, 8 ಕಲಾ ತಂಡಗಳಿಂದ ಜಾನಪದ ರೂಪಕ ನೃತ್ಯ ಪ್ರದರ್ಶನವಿದೆ. ಸಭಾಂಗಣದ ಹೊರಾಂಗಣದಲ್ಲಿ ಕುಡುಬಿ ಸಮಾಜದ ಕಲೆ, ಸಂಸ್ಕೃತಿ ಆಚಾರ ವಿಚಾರಗಳನ್ನು ಬಿಂಬಿಸುವ ಸಾಂಪ್ರದಾಯಿಕ ಮಳಿಗೆಗಳು, ಕೊಂಕಣಿ ಪುಸ್ತಕಗಳ ಮಾರಾಟ ಮತ್ತು ಪ್ರದರ್ಶನ ಮಳಿಗೆಗಳು ಇರಲಿವೆ ಎಂದು ಮಾಹಿತಿ ನೀಡಿದರು.

ದ.ಕ. ಜಿಲ್ಲಾ ಕುಡುಬಿ ಸಮಾಜಸೇವಾ ಸಂಘದ ಅಧ್ಯಕ್ಷ ಕೃಷ್ಣ ಕೊಂಪದವು, ಅಕಾಡೆಮಿ ಸ್ಥಾಯಿ ಸಮಿತಿ ಸದಸ್ಯರಾದ ನವೀನ್ ಲೋಬೊ, ಸಮರ್ಥ ಭಟ್, ರೊನಾಲ್ಡ್ ಕ್ರಾಸ್ತಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X