ಅ.27-ನ.2: ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ ನ್ಯಾಶನಲ್ ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿ

ಪ್ರಾತಿನಿಧಿಕ ಚಿತ್ರ (Meta AI)
ಮಂಗಳೂರು, ಅ.11: ಪ್ರಥಮ ಬಾರಿಗೆ ಮಂಗಳೂರಿನಲ್ಲಿ ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ ನ್ಯಾಶನಲ್ ಚಾಲೆಂಜ್ ಬ್ಯಾಡ್ಮಿಂಟನ್ ಕ್ರೀಡಾಕೂಟವು ಅ.27ರಿಂದ ನವೆಂಬರ್ 2ರವರೆಗೆ ನಡೆಯಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಪಂದ್ಯಾವಳಿಯಲ್ಲಿ ನಮ್ಮ ದೇಶದಿಂದ 350 ಸ್ಪರ್ಧಿಗಳು ಹಾಗೂ ಹೊರದೇಶಗಳಿಂದ 100 ಮಂದಿ ಸೇರಿ ಒಟ್ಟು 400 ರಾಷ್ಟ್ರೀಯ, ಅಂತಾರಾಷ್ಟ್ರೀಯ ಆಟಗಾರರು ಭಾಗವಹಿಸಲಿದ್ದಾರೆ. ಟೂರ್ನಿಗೆ ಒಂದು ಕೋಟಿ ರೂ. ಅನುದಾನವನ್ನು ಸರಕಾರ ನೀಡಿದೆ. ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಸಚಿವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ, ಐವನ್ ಡಿಸೋಜ, ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಬ್ಯಾಂಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುಪ್ರೀತ್ ಆಳ್ವ ಹಾಗೂ ಇತರರು ಉಪಸ್ಥಿತರಿದ್ದರು.
Next Story





