ಜ.28: ಎಸ್‌ಎಸ್‌ಎಲ್‌ಸಿ ಫಲಿತಾಂಶ ಉನ್ನತೀಕರಣ ಕಾರ್ಯಾಗಾರ
ಮಂಗಳೂರು: ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಲ್ಲೆ ಇದರ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ. ಜಿಲ್ಲಾ ಪಂಚಾಯತ್ ಇದರ ಸಹಕಾರದೊಂದಿಗೆ ಜ.28ರಂದು ಜಮೀಯ್ಯತುಲ್ ಫಲಾಹ್ ವತಿಯಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉನ್ನತೀಕರಣ ಕಾರ್ಯಾಗಾರ ಪ್ರೇರಣಾ - 2025 ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಉದ್ಥಾಟಿಸಲಿದ್ದು, ದ.ಕ. ಮತ್ತು ಉಡುಪಿ ಜಿಲ್ಲೆ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನಪರಿಷತ್ ಸದಸ್ಯ ಐವನ್ ಡಿ.ಸೋಜ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ದ.ಕ.ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ. ಆನಂದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಗೋವಿಂದ ಮಡಿವಾಳ, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹಾ, ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್, ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕದ ಅಧ್ಯಕ್ಷ ಹಾಜಿ ಬಿ.ಎಸ್. ಮುಹಮ್ಮದ್ ಬಶೀರ್, ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಹಾಜಿ ಮುಹಮ್ಮದ್ ಬಪ್ಪಳಿಗೆ, ಗ್ರೀನ್ ವ್ಯೂ ವಿದ್ಯಾ ಸಂಸ್ಥೆಯ ಸಂಚಾಲಕ ಅಬ್ದುಲ್ ನಾಸಿರ್ ಕೆ.ಕೆ., ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕ ಯಾಕೂಬ್ ನಡ, ಅಂತರ್‌ರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್, ಸ.ಪ.ಪೂ ಕಾಲೇಜು ಸಜೀಪಮೂಡದ ವೆಂಕಟರಮಣ ಆಚಾರ್ಯ ಕಾರ್ಯಾಗಾರ ನಡೆಸಿಕೊಡಲಿ ದ್ದಾರೆ. ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮತ್ತು ದಕ್ಷಿಣ ವಲಯದ ಎಸ್‌ಎಸ್‌ಎಲ್‌ಸಿಯ ಪರೀಕ್ಷೆಗೆ ಹಾಜರಾಗುವ ಸುಮಾರು 800 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿಯ ಪತ್ರಿಕಾ ಕಾರ್ಯದರ್ಶಿ ಮನ್ಸೂರು ಇಬ್ರಾಹೀಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







