Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.30: ಪುತ್ತೂರಿನಲ್ಲಿ ದ.ಕ ಜಿಲ್ಲಾ...

ನ.30: ಪುತ್ತೂರಿನಲ್ಲಿ ದ.ಕ ಜಿಲ್ಲಾ ಮಟ್ಟದ ಸಹಕಾರ ಸಂಘ ಮತ್ತು ನವೋದಯ ಸ್ವಸಹಾಯ ಸಂಘಗಳ ಸದಸ್ಯರ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ28 Nov 2023 7:35 PM IST
share
ನ.30: ಪುತ್ತೂರಿನಲ್ಲಿ ದ.ಕ ಜಿಲ್ಲಾ ಮಟ್ಟದ ಸಹಕಾರ ಸಂಘ ಮತ್ತು ನವೋದಯ ಸ್ವಸಹಾಯ ಸಂಘಗಳ ಸದಸ್ಯರ ಕ್ರೀಡಾಕೂಟ

ಮಂಗಳೂರು: ಸಹಕಾರ ಸಂಘಗಳ ಸದಸ್ಯರುಗಳನ್ನು, ಸಿಬ್ಬಂದಿ ವರ್ಗವನ್ನು ಹಾಗೂ ನವೋದಯ ಸ್ವ- ಸಹಾಯ ಸಂಘಗಳ ಸದಸ್ಯರುಗಳನ್ನು, ಪ್ರೇರಕರನ್ನು ಮತ್ತು ಬ್ಯಾಂಕಿನ ಸಿಬ್ಬಂದಿಗಳು ಸೇರಿದಂತೆ ಎಲ್ಲರನ್ನೂ ಒಂದೇ ಕಡೆ ಒಗ್ಗೂಡಿ ಸುವ ಉದ್ದೇಶವನ್ನಿಟ್ಟುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ (ರಿ.), ಮಂಗಳೂರು ಇದರ ಸಹಭಾಗಿತ್ವದಲ್ಲಿ ‘‘ಜಿಲ್ಲಾ ಮಟ್ಟದ ಕ್ರೀಡಾಕೂಟ’’ವನ್ನುನ.30ನೇ ಗುರುವಾರ ಪೂರ್ವಾಹ್ನ 9 ಗಂಟೆಗೆ ಪುತ್ತೂರು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜುನಲ್ಲಿ ಹಮ್ಮಿಕೊಂಡಿದೆ ಎ೦ದುಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಈ ಕ್ರೀಡಾಕೂಟದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಸಹಕಾರ ಸಚಿವ ಕೆ. ಎನ್. ರಾಜಣ್ಣರವರು ನೆರವೇರಿಸಲಿರುವರು. ಕರ್ನಾಟಕ ಸರಕಾರದ ಮಾನ್ಯ ಆರೋಗ್ಯಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿರುವರು. ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಇವರು ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡಲಿರುವರು. ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ಕುಮಾರ್ ಕಟೀಲು ಇವರು ಮೆರವಣಿಗೆಯ ಉದ್ಘಾಟನೆ ಮಾಡಲಿರುವರು ಎಂದವರು ವಿವರಿಸಿದರು.

ಗ್ರಾಮೀಣಾಭಿವೃದ್ಧಿಯ ಮೂಲ ಸೆಲೆಯಾಗಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವನವೋದಯ ಸ್ವ-ಸಹಾಯ ಸಂಘಗಳ ಸದಸ್ಯರುಗಳ ಕ್ರೀಡಾ ವಿಕಸನಕ್ಕೆ ಪ್ರ್ರೇತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ 100 ಮೀಟರ್ ಓಟ, ಗುಂಡು ಎಸೆತ ಹಾಗೂ ಹಗ್ಗ-ಜಗ್ಗಾಟ ಸ್ಪರ್ಧೆಗಳು ನಡೆಯಲಿದೆ. ಸಹಕಾರಿ ಸಂಘಗಳ ಸದಸ್ಯರು, ಸಿಬ್ಬಂದಿಗಳು, ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಪ್ರೇರಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ಸಿಬ್ಬಂದಿ ವರ್ಗದವರು ಒಳಗೊಂಡಂತೆ ಜಿಲ್ಲೆಯ ವಿವಿಧ ತಾಲೂಕಿನಿಂದ ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವರು ಎಂದವರು ವಿವರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್. ರಾಜೇಂದ್ರ ಕುಮಾರ್‌ರವರು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭಾಗವಹಿಸಲಿರುವರು.

ಸಮಾರೋಪ ಸಮಾರಂಭ

ನ.30 ರಂದು ಅಪರಾಹ್ನ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರ ಸಂಘ ನಿ., ಇದರ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿಗಳಾದ ಕೆ. ಸೀತಾರಾಮ ರೈ ಸವಣೂರು ಇವರು ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ರಾಮಕೃಷ್ಣ ಸರಕಾರಿ ಪ್ರೌಢಶಾಲೆ, ಪುತ್ತೂರು ಇದರ ಸಂಚಾಲಕ ಹೇಮನಾಥ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭೆಯ ಮಾಜಿಅಧ್ಯಕ್ಷ ಜೀವಂಧರ ಜೈನ್ ಮತ್ತು ಪುತ್ತೂರು ನಗರಸಭೆಯ ಸದಸ್ಯ ಪಿ. ಜಿ. ಜಗನ್ನಿವಾಸ್ ರಾವ್ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶ ಕರಾದ ಭಾಸ್ಕರ್‌ ಎಸ್‌. ಕೋಟ್ಯಾನ್‌, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್‌ ರೈ ಬಿ., ಎಸ್‌.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ. ಜೈರಾಜ್‌ ಬಿ.ರೈ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ , ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಗೋಪಾಲಕೃಷ್ಣ ಭಟ್ , ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X