ಆ.31ರಂದು ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉಳ್ಳಾಲ ತಾಲೂಕು ಆಡಳಿತ, ಉಳ್ಳಾಲ ನಗರಸಭೆ, ಕೋಟೆಕಾರ್ ಪಟ್ಟಣ ಪಂಚಾಯಿತಿ ಹಾಗೂ ಸೋಮೇಶ್ವರ ಪುರಸಭೆಯ ಸಂಯುಕ್ತ ಆಶಯದಲ್ಲಿ 2025- 26 ನೇ ಸಾಲಿನ ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆ.31ರಂದು ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಳ್ಳಾಲ ತಾಲೂಕು ದಸರಾ ಕ್ರೀಡಾಕೂಟದ ನೋಡಲ್ ಅಧಿಕಾರಿ ತ್ಯಾಗಮ್ ಹರೇಕಳ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪುರುಷರಿಗೆ ವಾಲಿಬಾಲ್, ಕಬಡ್ಡಿ, ಖೋ ಖೋ, ಪುಟ್ಬಾಲ್, ತ್ರೋಬಾಲ್, ಯೋಗಾಸನ ಮತ್ತು ಅಥ್ಲೆಟಿಕ್ಸ್ ನಲ್ಲಿ 100ಮೀ, 200 ಮೀ, 400 ಮೀ, 800 ಮೀ, 1500ಮೀ, 5,000ಮೀ, 10,000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ತ್ರಿವಿಧ ಜಿಗಿತ, ಜಾವಲಿನ್ ಎಸೆತ, ಚಕ್ರ ಎಸೆತ 110 ಮೀ ಹರ್ಡಲ್ಸ್, 4*100ಮೀ ರಿಲೇ, 4*400 ರಿಲೇ ಸ್ಪರ್ಧೆಗಳು ನಡೆಯಲಿದೆ.
ಮಹಿಳೆಯರಿಗೆ ವಾಲಿಬಾಲ್, ಕಬಡ್ಡಿ, ಖೋ ಖೋ, ತ್ರೋಬಾಲ್, ಯೋಗಾಸನ, ಅಥ್ಲೆಟಿಕ್ಸ್ ನಲ್ಲಿ 100ಮೀ, 200 ಮೀ, 400ಮೀ, 800ಮೀ, 1500ಮೀ, 3000ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ತ್ರಿವಿಧ ಜಿಗಿತ, ಜಾವಲಿನ್ ಎಸೆತ, ಚಕ್ರ ಎಸೆತ, 100 ಮೀ ಹರ್ಡಲ್ಸ್, 4*100ಮೀ ರಿಲೇ, 4*400 ರಿಲೇ ಸ್ಪರ್ಧೆಗಳು ನಡೆಯಲಿದೆ ಎಂದು ಹೇಳಿದರು.
ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆ ಗಳಲ್ಲಿ ಪ್ರಥಮ ಸ್ಥಾನ ಪಡೆದವರು ಸೆ.7ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ ಎಂದರು
ಇದೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಮೊಬೈಲ್ ಆಪ್/ವೆಬ್ ಪೋರ್ಟಲ್ ವ್ಯವಸ್ಥೆ ಮಾಡಲಾಗಿದ್ದು https:11dasaracmcup. 2025.etrpindia.Com/ KA - Sports ಅಥವಾ QR Code ನಲ್ಲಿ ಭರ್ತಿ ಮಾಡಬಹುದು.
ಸ್ಪರ್ಧಾಳುಗಳು ಸ್ಪರ್ಧಾ ದಿನದಂದು ಬೆಳಗ್ಗೆ ಗಂಟೆ 8:30ಕ್ಕೆ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಕಚೇರಿ ದೂರವಾಣಿ 0824-2451264, ಉಳ್ಳಾಲ ತಾಲೂಕು ಕ್ರೀಡಾಕೂಟ ನೋಡಲ್ ಅಧಿಕಾರಿ 9448529524 ಇವರನ್ನು ಸಂಪರ್ಕಿಸಬಹುದು ಎಂದು ಹೇಳಿದರು.
ಉಳ್ಳಾಲ ತಾಲೂಕು ತಹಸೀಲ್ದಾರರು ಪ್ರಶಾಂತ್ ಪಾಟೀಲ್ ಮಾತನಾಡಿ, ದಸರಾ ಕ್ರೀಡಾಕೂಟ ಮುಕ್ತ ಸ್ಪರ್ಧೆಯಾಗಿದ್ದು ತಮ್ಮ ಪ್ರತಿಭೆ ತೋರ್ಪಡಿಸಲು ವೇದಿಕೆಯಾಗಿದೆ ಎಂದರು.
ಉಳ್ಳಾಲ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಗುರುದತ್ ಎಂ.ಎನ್, ಉಳ್ಳಾಲ ನಗರಸಭೆ ಪೌರಾಯುಕ್ತ ನವೀನ್ ಹೆಗ್ಡೆ, ಬೆಲ್ಮ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಮೇಶ್ ನಾಯಕ್ ಸುದ್ದಿಗೋಷ್ಟಿಯಲ್ಲಿದ್ದರು.







