ಆ.31: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಮಂಗಳೂರು,ಆ.30:ದ.ಕ.ಜಿಲ್ಲಾಡಳಿತ,ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೂಡುಬಿದಿರೆ ತಾಪಂ, ಮೂಡುಬಿದಿರೆ ಪುರಸಭೆ, ಯುವಜನ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು 2025ರಆ.31ರಂದು ಬೆಳಗ್ಗೆ 9ಕ್ಕೆ ಮೂಡುಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.
*ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಮಂಗಳೂರು ಮಹಾನಗರಪಾಲಿಕೆ, ಮಂಗಳೂರು ತಾಪಂ, ಮೈ ಭಾರತ್ ದ.ಕ., ಯುವಜನ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆ.31ರಂದು ಬೆಳಗ್ಗೆ 9ಕ್ಕೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
*ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಬೆಳ್ತಂಗಡಿ ತಾಪಂ, ಮಡಂತ್ಯಾರು ಗ್ರಾಪಂ, ಶಾಲಾ ಶಿಕ್ಷಣ ಇಲಾಖೆ ಮತ್ತು ತಾಲೂಕು ಆಡಳಿತ ಬೆಳ್ತಂಗಡಿ, ತಾಲೂಕು ಯುವಜನ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳು ಹಾಗೂ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪದವಿ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆ.31ರಂದು ಬೆಳಗ್ಗೆ 10:30ಕ್ಕೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.





