Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 40 ಕೆ.ವಿ ವಿದ್ಯುತ್ ಲೈನ್ ಕಾಮಗಾರಿಯಿಂದ...

40 ಕೆ.ವಿ ವಿದ್ಯುತ್ ಲೈನ್ ಕಾಮಗಾರಿಯಿಂದ ಕೃಷಿ ನಾಶ: ರೈತರಿಂದ ಪ್ರತಿಭಟನಾ ಜಾಥಾ, ಸಭೆ

ವಾರ್ತಾಭಾರತಿವಾರ್ತಾಭಾರತಿ1 Nov 2025 8:30 PM IST
share
40 ಕೆ.ವಿ ವಿದ್ಯುತ್ ಲೈನ್ ಕಾಮಗಾರಿಯಿಂದ ಕೃಷಿ ನಾಶ: ರೈತರಿಂದ ಪ್ರತಿಭಟನಾ ಜಾಥಾ, ಸಭೆ

ಮೂಡುಬಿದಿರೆ: ಉಡುಪಿ - ಕಾಸರಗೋಡು 440 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿಯ ಸಂದರ್ಭದಲ್ಲಿ ರೈತರ ಕೃಷಿ ನಾಶ ಮಾಡಿದ್ದಲ್ಲದೆ ಪೊಲೀಸ್ ಬಲವನ್ನು ಬಳಸಿಕೊಂಡು ರೈತರ ಮೇಲೆ ದೌರ್ಜನ್ಯವೆಸಗಿದ ಸ್ಟೆರ್ ಲೈಟ್ ವಿದ್ಯುತ್ ಕಂಪೆನಿ ವಿರುದ್ಧ ಬೃಹತ್ ಸಂಖ್ಯೆಯಲ್ಲಿ ಸೇರಿದ ರೈತರು ಶನಿವಾರ ಕಂಪೆನಿ ವಿರುದ್ಧ ಪ್ರತಿಭಟನಾ ಜಾಥಾ, ಸಭೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಕ್ರೋಶಭರಿತ ರೈತರು ಅಶ್ವತ್ಥಪುರ ಸೀತಾರಾಮ ದೇವಸ್ಥಾನದ ಬಳಿ ಬೃಹತ್ ಸಂಖ್ಯೆಯಲ್ಲಿ ಜಮಾವಣೆಗೊಂಡು ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಒಂಟಿಮಾರ್ ಪ್ರದೇಶದ ಬೆಳೆ ಹಾನಿಗೆ ಒಳಳಗಾದ ರೈತ ಭಾಸ್ಕರ ಶೆಟ್ಟಿ ಅವರ ಜಮೀನಿನಿವರೆಗೂ ಜಾಥಾ ನಡೆಸಿದರು. ಬಳಿಕ ಅವರ ನಿವಾಸದಲ್ಲಿ ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ, ಅವಿಭಜಿತ ದ.ಕ - ಉಡುಪಿ ಜಿಲ್ಲೆಯಲ್ಲಿ ಆರಂಭವಾಗುವ ಜನವಿರೋಧಿ, ರೈತ ವಿರೋಧಿ ಕಂಪೆನಿಗಳ ವಿರುದ್ಧ ಹೋರಾಟಗಳು ಫ್ರಾಥಮಿಕ ಹಂತದಲ್ಲಿ ಆರಂಭವಾಗುತ್ತದೆ. ಹೋರಾಟಗಳನ್ನು ಹತ್ತಿಕ್ಕಲು ಕಂಪೆನಿ ಹೋರಾಟದ ಮುಂಚೂಣಿಯಲ್ಲಿರುವ ನಾಯಕರನ್ನು ಹಣ, ಭೂಮಿ ಇಂತಹಾ ಆಮಿಗಳನ್ನು ಒಡ್ಡಿ ಬದಿಗೆ ಸರಿಸುತ್ತದೆ. ಹಾಗಾಗಿ ಹೋರಾಟಗಳು ಕೊನೆಯಾಗುವುದಿಲ್ಲ. ಹಾಗಾಗಿಯೇ ಸರಕಾರಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಕಸದ ಬುಟ್ಟಿಯಂತೆ ಭಾವಿಸಿ ಇಲ್ಲಿನ ಜನರಿಗೆ ಅಗತ್ಯವೇ ಇಲ್ಲದ ಕಾರ್ಖಾನೆಗಳನ್ನು ಇಲ್ಲಿಗೆ ತಂದು ಹಾಕಿ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಇದು ನಮ್ಮ ದುರಾದೃಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಕೋಟಿ ವಿದ್ಯೆಗಿಂತ ಲೂಟಿ ವಿಧ್ಯೆಯೇ ಮೇಲು ಎಂಬಂತಾಗಿದೆ. ರೈತರಿಗೆ ಅನ್ಯಾಯವಾಗು ತ್ತಿದೆ. ರೈತನ ಅಭಿವೃದ್ಧಿಯೇ ದೇಶದ ಅಭಿವೃದ್ಧಿ. ಕೃಷಿ ಅಭಿವೃದ್ಧಿಯಾದರೆ ಮಾತ್ರ ಮಮುಷ್ಯ ಪಾಣಿ ಪಕ್ಷಿ ಸಂಕುಲ ಗಳೂ ಅಭಿವೃದ್ಧಿಯಾಗುತ್ತದೆ. ಕೃಷಿ ನಾಶವಾದರೆ ಮನುಕುಲದ ಜೊತೆಗೆ ಸಂಬಂಧ ಹೊಂದಿರುವ ಎಲ್ಲವೂ ನಾಶವಾಗಲಿದೆ ಎಂದು ಆತಂಕವ್ಯಕ್ತಪಡಿಸಿದರು. ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕರಾದ ಅನಂತ ಅಸ್ರಣ್ಣ ಮಾತನಾಡಿದರು.

ಜಾಥದ ಬಳಿಕ ಬೆಳೆಹಾನಿ ನಡೆದ ರೈತ ಭಾಸ್ಕರ ಶೆಟ್ಟಿ ಅವರ ನಿವಾಸದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡದ ರೈತ ಮುಖಂಡರಾದ ನಾರಾಯಣ ಸ್ವಾಮಿ ಅವರು, ಒಬ್ಬ ರೈತನ ಸಮಸ್ಯೆ ಎಲ್ಲ ರೈರಮತರ ಸಮಸ್ಯೆ. ಒಬ್ಬರ ಸಮಸ್ಯೆಗೆ ಎಲ್ಲರೂ ಒಗ್ಗೂಡಿ ಹೋರಾಡಬೇಕಿದೆ. ಸರಕಾರಗಳು ರೈತರ ಅನುಮತಿ ಇಲ್ಲದೆ ಆಕ್ರಮಿಸಿಕೊಂಡು ಬೆಳೆ ನಾಶ ಮಾಡಿಕೊಂಡು ತಮ್ಮ ಕಾರ್ಯಸಾಧನೆ ಮಾಡುತ್ತಿದೆ. ಕಂಪೆನಿಗೆ ರೈತರ ಜಮೀನಿಗೆ ಅನಧೀಕೃತ ದಾಳಿ ಮಾಡಿ ಬೆಳೆ ಹಾನಿ ಮಾಡಲು ಪರವಾನಿಗೆ ನೀಡಿದವರು ಯಾರು ಎಂದು ಪ್ರಶ್ನಿಸಿದರು.

ರೈತ ಏನನ್ನೂ ಬೆಳೆಯದಿದ್ದರೆ ಜನರು ತಿನ್ನುವುದಾದರೂ ಏನು ಎಂದ ಅವರು, ರೈತರನ್ನು ತುಳಿದು ಅಭಿವೃದ್ಧಿ ಬೇಡ ಎಂದ ಅವರು, ಸರಕಾರದ ಅವೈಜ್ಞಾನಿಕ ನಿರ್ಧಾರಗಳಿಂದ ರೈತರು ಕೃಷಿಬಿಟ್ಟು ಕಾರ್ಮಿಕರಾಗುತ್ತಿದ್ದಾರೆ. ಆದಷ್ಟು ಕೃಷಿಭೂಮಿಗಳಿಂದ ದೂರದಿಂದ ಈ ಕಾಮಗಾರಿ ನಡೆಸಬೇಕು. ಈ ಕಾಮಗಾರಿಗೆ ರೈತರು ಒಂದು ಇಂಚೂ ಜಾವನ್ನು ನೀಡುವುವುದಿಲ್ಲ ಎಂದು ಕಂಪೆನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ರೈತ ಸಂಘದ ರಾಜ್ಯ ಮುಖಂಡ ನಾರಾಯಣ ಸ್ವಾಮಿ, ಸುಚರಿತ ಶೆಟ್ಟಿ, ಕೃಷ್ಣ ಪ್ರಸಾದ್ ತಂತ್ರಿ, ಗ್ರಾ.ಪಂ. ಅಧ್ಯಕ್ಷೆ ಶಾಲಿನಿ, ಪ್ರವೀಣ್ ಭಂಡಾರಿ, ವಸಂತ ಭಟ್, ರವಿರಾಜ್, ಸುರೇಶ್ ಶೆಟ್ಟಿ ದೋಟ, ಬಾಲಕೃಷ್ಣ ದೇವಾಡಿಗ, ಭಾಸ್ಕರ ಶೆಟ್ಟಿ, ಅಲ್ಫೋನ್ಸ್ ನಿಡ್ಡೋಡಿ, ಇನ್ನಾ ಚಂದ್ರಹಾಸ ಶೆಟ್ಟಿ, ಹೊನ್ನಪ್ಪಗೌಡ, ಕೃಷ್ಣಮೂರ್ತಿ, ಜಾಕಿಂ ಪಿಂಟೊ, ಸುದೇಶ್ ದೇವಾಡಿಗ, ಹರೀಶ್ ಉಳ್ಳಾಲ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X