Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಜೆ ಮೆಡಿಕಲ್ ಕಾಲೇಜಿನಲ್ಲಿ 45ನೇ...

ಎಜೆ ಮೆಡಿಕಲ್ ಕಾಲೇಜಿನಲ್ಲಿ 45ನೇ ಐಎಬಿಎಂಎಸ್ ವಾರ್ಷಿಕ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ7 Nov 2024 11:07 PM IST
share
ಎಜೆ ಮೆಡಿಕಲ್ ಕಾಲೇಜಿನಲ್ಲಿ 45ನೇ ಐಎಬಿಎಂಎಸ್ ವಾರ್ಷಿಕ ಸಮ್ಮೇಳನ

ಮಂಗಳೂರು, ನ.7: ಲಕ್ಷ್ಮೀ ಮೆಮೋರಿಯಲ್ ಎಜುಕೇಷನ್ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಎಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ಇದರ ಸಹಯೋಗದೊಂದಿಗೆ ಭಾರತೀಯ ಜೈವಿಕ ವೈದ್ಯಕೀಯ ವಿಜ್ಞಾನಿ ಗಳ ಸಂಘದ 45ನೇ ವಾರ್ಷಿಕ ಸಮ್ಮೇಳನಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಎಜೆ ಮೆಡಿಕಲ್ ಕಾಲೇಜಿನ ಆಡಿಟೋರಿಯಂನಲ್ಲಿ ಆರಂಭಗೊಂಡ ಮೂರು ದಿನಗಳ ಸಮ್ಮೇಳನವನ್ನು ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಮಾಜಿ ಹಿರಿಯ ಸಲಹೆಗಾರ ಡಾ.ಟಿ.ಎಸ್. ರಾವ್ ಉದ್ಘಾಟಿಸಿದರು.

ಈ ಸಂದರ್ಭ ಮಾತಾಡಿದ ಅವರು, ‘‘ಜೈವಿಕ ವೈದ್ಯಕೀಯ ಕ್ಷೇತ್ರದಲ್ಲಿ ಇಂದು ಬಹಳಷ್ಟು ಸವಾಲುಗಳಿವೆ. ಈ ಸವಾಲು ಗಳನ್ನು ಮೆಟ್ಟಿನಿಂತು ನಾವು ಕೋವಿಡ್ -19 ಸಂದರ್ಭದಲ್ಲಿ ಸಕಾಲದಲ್ಲಿ ವ್ಯಾಕ್ಸಿನ್ ತಯಾರಿ ಮಾಡುವ ಮೂಲಕ ಗೆಲು ವನ್ನು ಸಾಧಿಸಿದ್ದೇವೆ. ನಾವು ಪ್ರತೀಯೊಬ್ಬರು ಇಂತಹ ಅವಕಾಶವನ್ನು ಬಳಸಿಕೊಂಡು ದೇಶ ಹೆಮ್ಮೆ ಪಡುವಂತೆ ಮಾಡ ಬೇಕು. ಇಂತಹ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ’’ಎಂದು ಶುಭ ಹಾರೈಸಿದರು.

ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಇದರ ರಿಜಿಸ್ಟ್ರಾರ್ ಡಾ.ರಿಯಾಜ್ ಭಾಷಾ ಎಸ್. ಮಾತನಾಡಿ, ‘‘ಜೈವಿಕ ವೈದ್ಯಕೀಯ ಸಂಘಟನೆ ಸಮಾಜದಲ್ಲಿ ಬಹಳಷ್ಟು ಉತ್ತಮ ಕಾರ್ಯಗಳನ್ನು ಮಾಡುತ್ತಾ ಬಂದಿದೆ. 2020ರ ಮಾರ್ಚ್ ತಿಂಗಳಲ್ಲಿ ಕೋವಿಡ್ ಆರಂಭವಾದಾಗ ನಮಗೆ ಕೇವಲ 2 ಲ್ಯಾಬ್ ಗಳು ಮಾತ್ರ ಲಭ್ಯವಿತ್ತು. ನಂತರ ಜುಲೈ 2020ರಲ್ಲಿ 100ಕ್ಕೂ ಹೆಚ್ಚು ಲ್ಯಾಬ್ ಗಳನ್ನು ವ್ಯವಸ್ಥೆ ಮಾಡಲಾಯಿತು. 2000ಕ್ಕೂ ಹೆಚ್ಚು ಐಸಿಯು ಬೆಡ್ ಸಕಾಲಕ್ಕೆ ಸಿಕ್ಕಿದ್ದು ಈಗ 32,000ಕ್ಕೂ ಹೆಚ್ಚು ಐಸಿಯು ಬೆಡ್ ಗಳ ವ್ಯವಸ್ಥೆಯಿದೆ. ಇದು ನಮ್ಮ ವೈದ್ಯಕೀಯ ಕ್ಷೇತ್ರದ ಸಾಧನೆ ಯಾಗಿದೆ ಎಂದರು.

ನಾವು ಮಾತಾಡುವ ವಿಷಯವನ್ನು ರೋಗಿಗಳಿಗೆ ಅರ್ಥವಾಗುವಂತೆ ಹೇಳಬೇಕು. ಇದರಿಂದ ಅವರ ಮತ್ತು ನಮ್ಮ ಮಧ್ಯೆ ಸಂವಹನ ಸಾಧ್ಯವಾಗುತ್ತದೆ. ರೋಗಿಗಳಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಅವರು ಸೂಕ್ತ ಸಮಯದಲ್ಲಿ ಸರಿ ಯಾದ ಔಷಧಿ ತೆಗೆದುಕೊಳ್ಳಲು ಆರೋಗ್ಯ ಕಾಪಾಡಲು ವೈದ್ಯರುಗಳು ಸಹಕರಿಸಬೇಕು ಎಂದು ಅವರು ನುಡಿದರು.

ಭಾರತೀಯ ಜೈವಿಕ ವೈದ್ಯಕೀಯ ಸಂಘಟನೆ ಅಧ್ಯಕ್ಷೆ ಡಾ.ಪದ್ಮಿನಿ ಇ. ಮಾತಾಡಿ, ‘‘ಕ್ಯಾನ್ಸರ್ ಸೋಂಕಿತರು ಇಂದು ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಅವರಿಗೆ ದೀರ್ಘ ಕಾಲದ ಚಿಕಿತ್ಸೆ ಅಗತ್ಯವಿದೆ. ರೋಗಿಗಳಿಗೆ ಚಿಕಿತ್ಸೆ ನೀಡುವ ಜೊತೆಗೆ ಅವರನ್ನು ಮಾನಸಿಕವಾಗಿ ತಯಾರು ಮಾಡುವ ಕೆಲಸವನ್ನು ವೈದ್ಯರು ಮಾಡಬೇಕು. ಭಾರತೀಯ ವೈದ್ಯಕೀಯ ಕ್ಷೇತದಲ್ಲಿ ಬಹಳಷ್ಟು ಸವಾಲುಗಳಿವೆ. ರೀಸರ್ಚ್ ಎಜುಕೇಷನ್ ಮತ್ತು ಸಮೂಹ ಸಂವಹನದಿಂದ ನಾವು ಪ್ರಗತಿಯನ್ನು ಪಡೆಯಲು ಸಾಧ್ಯ’’ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಸಂಘಟನೆಯ ಕೋಶಾಧಿಕಾರಿ ಡಾ.ಜಿ.ಕುಲಂದೈವೆಲ್, ಸಂಘಟನೆ ಪ್ರಧಾನ ಕಾರ್ಯದರ್ಶಿ ಡಾ.ಹೇಮ ಮಾಲಿನಿ, ಡಾ. ಸುಶೀಲ್, ಡಾ.ಮಂಜುಳಾ ಶಾಂತಾರಾಮ್, ಡಾ ಸುಭ್ರತಾ ಘೋಷ್, ಡಾ ಗೌತಮ್ ಮತ್ತಿತರರು ಉಪಸ್ಥಿತರಿದ್ದರು.

ಶ್ರಾವಣಿ ಸ್ನೇಹ ಪ್ರಾರ್ಥಿಸಿದರು. ಎಜೆ ಆಸ್ಪತ್ರೆಯ ಡೀನ್ ಡಾ.ಅಶೋಕ್ ಹೆಗ್ಡೆ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಡಾ.ಮಂಜುಳಾ ಶಾಂತಾರಾಮ್ ವಂದಿಸಿದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X