Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.5ರಂದು ಮಾಂಡ್ ಸೊಭಾಣ್ ನಿಂದ...

ಜ.5ರಂದು ಮಾಂಡ್ ಸೊಭಾಣ್ ನಿಂದ ಕಲಾಂಗಣದಲ್ಲಿ 'ಆಲನಿ ಮೆಲೊಡಿ ನೈಟ್'

ವಾರ್ತಾಭಾರತಿವಾರ್ತಾಭಾರತಿ2 Jan 2025 3:33 PM IST
share
ಜ.5ರಂದು ಮಾಂಡ್ ಸೊಭಾಣ್ ನಿಂದ ಕಲಾಂಗಣದಲ್ಲಿ ಆಲನಿ ಮೆಲೊಡಿ ನೈಟ್

ಮಂಗಳೂರು, ಜ.2: ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಕಾರ್ಯಕ್ರಮವು ಜ.5ರಂದು ಶಕ್ತಿನಗರದ ಕಲಾಂಗಣದಲ್ಲಿ 6:30ಕ್ಕೆ ನಡೆಯಲಿದೆ.

ಮೂಡುಬಿದಿರೆ ತಾಕೊಡೆಯ 9ರ ಹರೆಯದ ಬಾಲಕಿ ಆಲನಿ ಲಿಯೊರಾ ಡಿಸೋಜ ಈ ಕಾರ್ಯಕ್ರಮ ನೀಡಲಿದ್ದು, ಆಕೆ ತಿಂಗಳ ವೇದಿಕೆ ಮುನ್ನಡೆಸುವ ಅತೀ ಚಿಕ್ಕ ವಯಸ್ಸಿನ ಕಲಾವಿದೆಯಾಗಲಿದ್ದಾಳೆ ಎಂದು ಮಾಂಡ್ ಸೊಭಾಣ್ನ ಅಧ್ಯಕ್ಷ ಲುವಿ ಜೆ. ಪಿಂಟೋ ತಿಳಿಸಿದ್ದಾರೆ.

ನಗರದ ಪ್ರೆಸ್ಕ್ಲಬ್ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮೂಡುಬಿದಿರೆಯ ಕಾರ್ಮೆಲ್ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಬಹುಮುಖಿ ಪ್ರತಿಭಾವಂತೆ ಆಲನಿ ಕಲಿಕೆಯಲ್ಲಿ ಮುಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹಾಡುಗಾರಿಕೆಯ ಮೂಲಕ ಜನಮೆಚ್ಚುಗೆ ಗಳಿಸಿದ್ದಾಳೆ. ಪಿಯಾನೊ, ವಯೊಲಿನ್, ಗಿಟಾರ್, ಕೀಬೋರ್ಡ್, ಶಾಸ್ತ್ರೀಯ ಗಾಯನ ಹೀಗೆ ಹಲವು ಸ್ತರಗಳಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ದೈಜಿ ವರ್ಲ್ಡ್ ವಾಹಿನಿಯ ‘ಗಾಯಾನ್ ಆನಿ ಗಜಾಲಿ, 286ನೇ ವಿಲ್ಫಿ ನೈಟ್, ನಿಹಾಲ್ ತಾವ್ರೊ ಸಂಗೀತ ರಸಮಂಜರಿ ಇತ್ಯಾದಿ ಕಾರ್ಯಕ್ರಮಗಳಲ್ಲಿ ತನ್ನ ಗಾಯನ ಪ್ರತಿಭೆಯನ್ನು ತೋರಿಸಿದ್ದಾಳೆ. ಅವಳ ಪ್ರತಿಭೆಯನ್ನು ಗುರುತಿಸಿ ಮಾಂಡ್ ಸೊಭಾಣ್ ಈ ಅವಕಾಶ ನೀಡಿದೆ. ಕಾರ್ಯಕ್ರಮದಲ್ಲಿ ಆಕೆ ಚಾಫ್ರಾ ಡಿಕೋಸ್ತ, ವಿಲ್ಫಿ ರೆಬಿಂಬಸ್, ಕ್ಲೊಡ್ ಡಿಸೋಜ, ಕ್ರಿಸ್ ಪೆರಿ, ಎರಿಕ್ ಒಝೇರಿಯೊ, ಮೆಲ್ವಿನ್ ಪೆರಿಸ್ ಮತ್ತು ಲಾಯ್ಡ್ ರೇಗೊ ಹೀಗೆ ಕೊಂಕಣಿಯ ಮೇರು ಕವಿಗಳು ಹಾಗೂ ಸಂಗೀತಗಾರರ ರಚನೆಗಳನ್ನು ಹಾಡಲಿದ್ದಾಳೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ, ಕಲಾಂಗಣ್ ಚೆಯರ್ ಮ್ಯಾನ್ ರೊನಾಲ್ಡ್ ಮೆಂಡೊನ್ಸಾ ಮುಂಬೈ ಮತ್ತು ವಿಜಯ್ ಡಿಸೋಜ ದುಬೈ ಗೌರವ ಅತಿಥಿಗಳಾಗಿ ಹಾಗೂ ಮಾಂಡ್ ಸೊಭಾಣ್ ಸಂಸ್ಥೆಯ ಪರವಾಗಿ ಗುರಿಕಾರ ಎರಿಕ್ ಒಝೇರಿಯೊ ಭಾಗವಹಿಸಲಿದ್ದಾರೆ.

ಯುವ ಸಂಗೀತಗಾರ ಮೇವಿಶ್ ಇವರ ಸಂಗೀತ ನಿರ್ದೇಶನದಲ್ಲಿ ಸಚಿನ್ ಸಿಕ್ವೇರ (ಡ್ರಮ್ಸ್), ಜೇಸನ್ ಡಿಸೋಜ (ಲೀಡ್ ಗಿಟಾರ್), ಆಶ್ವಿನ್ ಕೊರೆಯಾ (ಬೇಸ್ ಗಿಟಾರ್), ಶೊನ್ ಬ್ರಾಸ್ಲಿನ್ (ವಯೊಲಿನ್), ಅಶ್ವಿಲ್ ಕುಲಾಸೊ (ಕೀಬೋರ್ಡ್) ಸಂಗೀತ ನೀಡಲಿದ್ದಾರೆ.

ಖ್ಯಾತ ಹಿಂದೂಸ್ತಾನಿ ಗಾಯನ ತರಬೇತುದಾರರಾದ ಶಿಲ್ಪಾ ಕುಟಿನ್ಹಾ ತರಬೇತಿ ನೀಡಿದ್ದು, ಬ್ಲೂ ಏಂಜಲ್ಸ್ ಕೊಯರ್ ತಂಡ ಮತ್ತು ಆರ್ವಿನ್ ಡಿಕುನ್ಹಾ ಹಿನ್ನೆಲೆಯಲ್ಲಿ ಸಹಕರಿಸಲಿದ್ದಾರೆ.

ಆಲನಿಯ ಗಾಯನಕ್ಕಾಗಿ ಪಾರಿತೋಷಕ ನೀಡಿ ಪ್ರೋತ್ಸಾಹಿಸಿದ ನೋರಿನ್ ಮೆಂಡೋನ್ಸಾರ ಸ್ಮರಣಾರ್ಥ ಈ ಸಂಗೀತ ಸಂಜೆ ಆಯೋಜಿಸಲಾಗಿದೆ. ಕೊಂಕಣಿ ಪ್ರದರ್ಶನ ಕಲೆಗಳಿಗೆ ವೇದಿಕೆ ನೀಡುವ ಉದ್ದೇಶದಿಂದ 2002 ಜನವರಿ 06ರಿಂದ ಆರಂಭವಾದ ತಿಂಗಳ ವೇದಿಕೆಯಲ್ಲಿ, ಕಳೆದ 23 ವರ್ಷಗಳಲ್ಲಿ ಕೊಂಕಣಿ ಸಂಗೀತ, ಗಾಯನ, ನಾಟಕ, ನೃತ್ಯ, ಯಕ್ಷಗಾನ, ಹಾಸ್ಯ ಮತ್ತು ವಿವಿಧ ಜನಪದ ಕಲೆಗಳು ಹೀಗೆ ಎಲ್ಲಾ ರೀತಿಯ ಕಲಾವಿದರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಾಲ ಕಲಾವಿದೆ ಆಲನಿ ಲಿಯೋರಾ ಡಿಸೋಜ, ತರಬೇತುದಾರರಾದ ಶಿಲ್ಪಾ ಕುಟಿನ್ಹಾ, ಸಂಗೀತ ನಿರ್ದೇಶಕ ಮೇವಿಶ್, ಕಾರ್ಯಕ್ರಮ ವ್ಯವಸ್ಥಾಪಕ ಹಾಗೂ ಆಲನಿ ತಂದೆ ಅಜಯ್ ಡಿಸೋಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X