ಜು.5: ದ.ಕ.ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಮಂಗಳೂರು, ಜು.4: ದ.ಕ.ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಸಾರಲಾಗಿತ್ತು. ಶನಿವಾರ ದ.ಕ.ಜಿಲ್ಲೆಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ಶುಕ್ರವಾರ ಸಂಜೆಯ ವೇಳೆಗೆ ನಗರ ಮತ್ತು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಮಂಗಳೂರು ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿತ್ತು.
ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗಿನಿಂದ ಶುಕ್ರವಾರ ಬೆಳಗ್ಗಿನವರೆಗೆ 56 ಮಿಮೀ ಮಳೆ ದಾಖಲಾಗಿದೆ. ಜಿಲ್ಲೆಯಲ್ಲೆ ಅತೀ ಹೆಚ್ಚು ಬಂಟ್ವಾಳದಲ್ಲಿ 68.2 ಮಿಮೀ ಮಳೆಯಾಗಿದೆ. ಬೆಳ್ತಂಗಡಿ 62.6, ಮಂಗಳೂರು 49, ಪುತ್ತೂರು 49, ಸುಳ್ಯ 61, ಮೂಡುಬಿದಿರೆ 36, ಕಡಬ 648.4, ಮುಲ್ಕಿ 26.6, ಉಳ್ಳಾಲ 53.7 ಮಿಮೀ ಮಳೆಯಾಗಿದೆ.
ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ಗಂಟೆಗೆ 40 ಕಿ.ಮೀ.ನಿಂದ 45ಕಿ.ಮೀ.ವರೆಗೆ ಇತ್ತು. ಜಿಲ್ಲೆಯಲ್ಲಿ ಶುಕ್ರವಾರ ಗರಿಷ್ಠ 33.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.





