ಜ.5-6ರಂದು ಮೂಡಬಿದಿರೆಯಲ್ಲಿ ‘ಪದವಿ ಪೂರ್ವ ಶಿಕ್ಷಣ-ಮುಕ್ತ ಸಮಾವೇಶ

ಮಂಗಳೂರು, ಜ.3: ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ(ಕುಪ್ಮ) ವತಿಯಿಂದ ರಾಜ್ಯಮಟ್ಟದ ‘ಪದವಿ ಪೂರ್ವ ಶಿಕ್ಷಣ-ಮುಕ್ತ ಸಮಾವೇಶ 2024’ ಜ. 5 ಮತ್ತು 6 ರಂದು ಆಳ್ವಾಸ್ ಕಾಲೇಜು, ವಿದ್ಯಾಗಿರಿ ಮೂಡಬಿದಿರೆಯಲ್ಲಿ ನಡೆಯಲಿದೆ.
ಈ ಎರಡು ದಿನಗಳ ರಾಜ್ಯಮಟ್ಟದ ‘ಪದವಿ ಪೂರ್ವ ಶಿಕ್ಷಣ- ಮುಕ್ತ ಸಮಾವೇಶ 2024’ವನ್ನು ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉದ್ಟಾಟಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬೆಂಗಳೂರಿನ ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್, ಎಂಎಲ್‌ಸಿ ಭೋಜೇಗೌಡ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ವಿಧಾನಪರಿಷತ್ ಸದಸ್ಯ ಅರುಣ ಶಹಾಪುರ, ಮಂಗಳೂರು ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಕಾರ್ಯದರ್ಶಿ ಫಾ.ರೇ.ಲಿಯೋ ಲಾಸ್ರಾಡೊ, ಕುಪ್ಮಾದ ಗೌರವ ಅಧ್ಯಕ್ಷರು ಕೆ.ಸಿ.ನಾಯಕ್, ಡಾ.ಎಂ.ಬಿ ಪುರಾಣಿಕ್ ಅವರು ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ ಎಂದು ಕುಪ್ಮಾದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಮತ್ತು ಕುಪ್ಮಾದ ಕಾರ್ಯದರ್ಶಿ ಪ್ರೊ.ನರೇಂದ್ರ ಎಲ್.ನಾಯಕ್ ತಿಳಿಸಿದ್ದಾರೆ.





