ಜು.5-6: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು, ಜೂ.29: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜು.5 ಮತ್ತು 6ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜು.5ರಂದು ಬೆಳಗ್ಗೆ 8:35ಕ್ಕೆ ಸರ್ಕ್ಯೂಟ್ ಹೌಸ್‌ಗೆ ಆಗಮಿಸುವ ಸಚಿವರು 10:30ಕ್ಕೆ ದ.ಕ.ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 4ಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.
ಜು.6ರಂದು ಬೆಳಗ್ಗೆ 10ಕ್ಕೆ ಸುಳ್ಯದಲ್ಲಿ ನಡೆಯುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿಎಂ ಶಹೀದ್ ತೆಕ್ಕಿಲ್ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 2:30ಕ್ಕೆ ಕಡಬದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 11:30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟನೆ ತಿಳಿಸಿದೆ.
Next Story





