Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎ.9ರಂದು ಮಂಗಳೂರಿಗೆ ಬಿಜೆಪಿಯ ಜನಾಕ್ರೋಶ...

ಎ.9ರಂದು ಮಂಗಳೂರಿಗೆ ಬಿಜೆಪಿಯ ಜನಾಕ್ರೋಶ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ1 April 2025 6:33 PM IST
share
ಎ.9ರಂದು ಮಂಗಳೂರಿಗೆ ಬಿಜೆಪಿಯ ಜನಾಕ್ರೋಶ ಯಾತ್ರೆ

ಮಂಗಳೂರು, ಎ.1: ರಾಜ್ಯ ಸರಕಾರದ ವೈಫಲ್ಯದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದು, ಎ.9ರಂದು ಜನಾಕ್ರೋಶ ಯಾತ್ರೆ ಮಂಗಳೂರಿಗೆ ಆಗಮಿಸಲಿದೆಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಾತ್ರೆಯ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು.

ರಾಜ್ಯದ ಜನತೆಗೆ ಯುಗಾದಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲು ರಾಜ್ಯ ಕಾಂಗ್ರೆಸ್ ಸರಕಾರ ಅವಕಾಶ ನೀಡಿಲ್ಲ. ಹಾಲು ಮತ್ತು ಮೊಸರಿನ ದರ ಲೀಟರ್‌ಗೆ ನಾಲ್ಕು ರೂ., ವಿದ್ಯುತ್ ದರ ಯೂನಿಟ್‌ಗೆ 36 ಪೈಸೆ ಹೆಚ್ಚಿಸಿ ಜನತೆಗೆ ಆಘಾತ ನೀಡಿದೆ. ವಾಹನ ಖರೀದಿ ತೆರಿಗೆ, ಮುದ್ರಾಂಕ ಶುಲ್ಕ ಸಹಿತ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುವ ಮೂಲಕ ದುಬಾರಿಯ ವಾತಾವರಣವನ್ನು ಕಾಂಗ್ರೆಸ್ ಸರಕಾರ ಸೃಷ್ಟಿಸಿದೆ. ಅಧಿಕಾರಕ್ಕೆ ಬಂದ ಬಳಿಕ ಒಟ್ಟು ಮೂರು ಬಾರಿ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸರಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ಚೀಟಿ ದರ ಏರಿಕೆ, ವೈದ್ಯಕೀಯ ಪ್ರಮಾಣ ಪತ್ರದ ದರ 250 ರೂ.ನಿಂದ 300 ರೂ.ಗೆ ಏರಿಕೆ , ಮುದ್ರಾಂಕ ಶುಲ್ಕ 50 ರೂ.ನಿಂದ 500 ರೂ.ಗೆ ಏರಿಸಲಾಗಿದೆ. ಬಿತ್ತನೆ ಬೀಜದ ದರ, ನೀರಿನ ಬಿಲ್, ಕಸ ವಿಲೇವಾರಿ ಸೆಸ್ ಏರಿಸುವ ಮೂಲಕ ಜನತೆಗೆ ಕಾಂಗ್ರೆಸ್ ಸರಕಾರ ಶಾಪಗ್ರಸ್ತ ಸರಕಾರವಾಗಿ ಪರಿಣಮಿಸಿದೆ ಎಂದು ಆರೋಪಿಸಿದರು.

ರಾಜ್ಯ ಕಾಂಗ್ರೆಸ್ ಸರಕಾರದಿಂದ ಇದೀಗ ಜನಸಾಮಾನ್ಯರಿಗೆ ಬದುಕೇ ಇಲ್ಲದಾಗುವ ಸ್ಥಿತಿ ಒದಗಿದೆ. ಮುಸಲ್ಮಾನರಿಗೆ ಪ್ರತ್ಯೇಕ ಬಜೆಟ್ ಮಂಡಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಜನತೆಗೆ ತಲುಪಿಸುವಲ್ಲಿ ಸರಕಾರ ವಿಫಲವಾಗಿದೆ. ಎಸ್‌ಸಿ ಎಸ್‌ಟಿ ನಿಧಿಯನ್ನು ಬೇರೆ ಉದ್ದೇಶಕ್ಕೆ ಬಳಸುವ ಮೂಲಕ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಅನ್ಯಾಯ ಎಸಗಲಾಗಿದೆ. ಹಿಂದು ಸಮಾಜಕ್ಕೆ ತೊಂದರೆ ನೀಡುವ ರೀತಿಯಲ್ಲಿ ಸರಕಾರ ಕಾರ್ಯವೆಸಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎ.2 ಮತ್ತು 3ರಂದು ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳು, ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಶಾಸಕರ ಅಮಾನತು ಖಂಡನೀಯ:

ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಶಾಸಕರ ಸಹಿತ ಬಿಜೆಪಿ 18 ಮಂದಿ ಶಾಸಕರನ್ನು 6 ತಿಂಗಳ ಕಾಲ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿರುವುದು ಖಂಡನೀಯ ಎಂದು ಸತೀಶ್ ಕುಂಪಲ ಹೇಳಿದರು.

ಶಾಸಕರನ್ನು ಆರು ತಿಂಗಳು ಅಮಾನತು ಮಾಡಿರುವುದು ಸರಿಯಲ್ಲ. ಯು.ಟಿ. ಖಾದರ್ ಅವರು ಸ್ಪೀಕರ್ ಆದಾಗ ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಎಂಬ ಆಶಾವಾದ ಹೊಂದಲಾಗಿತ್ತು. ಆದರೆ, ಜಿಲ್ಲೆ ಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಸ್ಪೀಕರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಕಾಂಗ್ರೆಸ್ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಏನು ತಪ್ಪು ಮಾಡಿದ್ದಾರೆ ಎಂಬ ಬಗ್ಗೆ ಅವರು ವಿಡೀಯೊ ತೋರಿಸಲಿ. ಶಾಸಕರ ಅಮಾನತಿ ನಿಂದ ಅವರ ಕ್ಷೇತ್ರಗಳಲ್ಲಿ ಮತದಾರರಿಗೆ ತೊಂದರೆಯಾಗುತ್ತಿದೆ. ತಕ್ಷಣ ಅಮಾನತನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ರಾವ್, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಎಸ್‌ಸಿ ಮೋರ್ಚಾ ಅಧ್ಯಕ್ಷ ಜಗನ್ನಾಥ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಜಿಲ್ಲಾ ವಕ್ತಾರ ಅರುಣ್ ಜಿ.ಶೇಟ್, ಮಾಧ್ಯಮ ಸಹ ಸಂಯೋಜಕ ಮನೋಹರ ಶೆಟ್ಟಿ, ಸಂಜಯ ಪ್ರಭು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X