ಜು.9: ಗೃಹ ಸಚಿವ ಜಿ. ಪರಮೇಶ್ವರ್ ಮಂಗಳೂರಿಗೆ ಭೇಟಿ

ಮಂಗಳೂರು, ಜು.7: ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಜು.9ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 12ಕ್ಕೆ ಕೊಟ್ಟಾರದಲ್ಲಿರುವ ಜಿಪಂ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಮುದಾಯಗಳ ಮುಖಂಡರು, ಧಾರ್ಮಿಕ,ಶಿಕ್ಷಣ ಸಹಿತ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಆಯೋಜಿಸಿರುವ ಶಾಂತಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





