ಅ.9ರಂದು ಮಂಗಳೂರಿನಲ್ಲಿಅನಿವಾಸಿ ಕನ್ನಡಿಗರ ಸಮ್ಮೇಳನ

ಮಂಗಳೂರು: ಮಂಜುನಾಥ್ ಎಜುಕೇಷನ್ ಟ್ರಸ್ಟ್ ರಿ., ಎಸ್ ಕೆ ಮನ್ಸಿಪಲ್ ಎಂಪ್ಲಾಯಿಸ್ ಅಸೋಸಿಯೇಷನ್ ರಿ. ಮತ್ತು ಹೃದಯವಾಹಿನಿ ಕರ್ನಾಟಕ ಮಂಗಳೂರು ಇವರ ಸಂಯುಕ್ತ ಆಶಯದಲ್ಲಿ ಹೊರನಾಡ ಹಾಗೂ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನುನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅ.9ರಂದು ಹಮ್ಮಿಕೊಳ್ಳ ಲಾಗಿದೆ ಎಂದು ಮಂಜುನಾಥ್ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ಕೆ.ಪಿ.ಮಂಜು ನಾಥ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಆಯ್ಕೆ ಕುರಿತು ನಡೆದ ಪದಾಧಿಕಾರಗಳ ಸಭೆಯಲ್ಲಿ ದುಬೈ ಅನಿವಾಸಿ ಕನ್ನಡಿಗ ಯಶಸ್ವಿ ಉದ್ಯಮಿ ನಾಡು ನುಡಿಗೆ ಅನುಪಮ ಕೊಡುಗೆ ಸಲ್ಲಿಸಿದ ಲೆ.ಜ. ಅಂಬಾಸಿಡರ್ ಡಾ. ಡೇವಿಡ್ ಫ್ರಾಂಕ್ ಫೆರ್ನಾಂಡಿಸ್ ಅವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು ಎಂದು ಮಂಜುನಾಥ್ ತಿಳಿಸಿದ್ದಾರೆ.
ಸಮ್ಮೆಳನದ ಅಂಗವಾಗಿ ಅ.9ರಂದು ಬೆ.8ಗಂಟೆಗೆ ರಸಪ್ರಶ್ನೆ,10ಗಂಟೆಗೆ ಉದ್ಘಾಟನೆ, ಬಳಿಕ ಗೌರವ ಪುರಸ್ಕಾರ, ಕವಿಗೋಷ್ಠಿ,ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಂಜುನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ ಕೆ ಮುನ್ಸಿಪಲ್ ಅಸೋಸಿಯೇಷನ್ ಅಧ್ಯಕ್ಷ ಬಾಲರಾಜ್, ಪೂರ್ವಾಧ್ಯಕ್ಷ ಶಿವರಾಜ್ ಪಾಂಡೇಶ್ವರ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಹಾರಾಷ್ಟ್ರ ಘಟಕದ ರಾಜ್ಯಾಧ್ಯಕ್ಷ ರೋನ್ಸ್ ಬಂಟ್ವಾಳ, ಕಸಾಪ ದ.ಕ ಜಿಲ್ಲಾ ಅಧ್ಯಕ್ಷ ಮಂಜುನಾಥ್ ರೇವಣ್ಕರ್ ಮೊದಲಾದ ವರು ಉಪಸ್ಥಿತರಿದ್ದರು.







