Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾರಕ್ಕೆ 90 ಗಂಟೆಗಳ ಕೆಲಸ ಅವೈಜ್ಞಾನಿಕ...

ವಾರಕ್ಕೆ 90 ಗಂಟೆಗಳ ಕೆಲಸ ಅವೈಜ್ಞಾನಿಕ ಹಾಗೂ ಅಮಾನವೀಯ: ಸೈಯ್ಯದ್ ಮುಜೀಬ್

ವಾರ್ತಾಭಾರತಿವಾರ್ತಾಭಾರತಿ24 Jan 2025 2:47 PM IST
share
ವಾರಕ್ಕೆ 90 ಗಂಟೆಗಳ ಕೆಲಸ ಅವೈಜ್ಞಾನಿಕ ಹಾಗೂ ಅಮಾನವೀಯ: ಸೈಯ್ಯದ್ ಮುಜೀಬ್

ಮಂಗಳೂರು: ಇತ್ತೀಚಿಗೆ ಎಲ್ ಅಂಡ್ ಟಿ ಯ ಅಧ್ಯಕ್ಷರು ವಾರದಲ್ಲಿ 90 ಗಂಟೆಯ ಕೆಲಸ ಮಾಡಬೇಕೆಂದು ಹೊರಡಿಸಿರುವ ಫಾರ್ಮಾನು ಅವೈಜ್ಞಾನಿಕ, ಅಸಮರ್ಥನೀಯ ಹಾಗೂ ಅಮಾನವೀಯವಾಗಿದೆ. ಈಗಾಗಲೇ ನಿರುದ್ಯೋಗದಿಂದ ಬಳಲುತ್ತಿರುವ ದೇಶದಲ್ಲಿ ವಾರದಲ್ಲಿ 70 ಗಂಟೆ 90 ಗಂಟೆ ಕೆಲಸದ ಚರ್ಚೆಗಳು ಮತ್ತಷ್ಟು ನಿರುದ್ಯೋಗವನ್ನು ಹುಟ್ಟು ಹಾಕಲಿದೆ.ಮಾತ್ರವಲ್ಲದೆ ಅದು ಹಲವು ಸಾಮಾಜಿಕ ಸಮಸ್ಯೆಗಳನ್ನು ಹಾಗೂ ವಿವಿಧ ಆಯಾಮಗಳ ಸಮಸ್ಯೆಗಳನ್ನು ಉಲ್ಬಣಗೊಳಿಸಲಿದೆ. ಇದ್ಯಾವುದನ್ನು ಮುಂದಾಲೋಚಿಸದೆ ಕೇವಲ ತಮ್ಮ ಲಾಭಕಷ್ಟೇ ಸೀಮಿತವಾಗಿ ಬಂಡವಾಳಗಾರರು ಅಲೋಚಿಸುತ್ತಿರುವುದು ಸಮಾಜದ ಒಟ್ಟಾರೆ ಬೆಳವಣಿಗೆಗೆ ಪೂರಕವಲ್ಲ ಎಂದು CITU ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಸೈಯ್ಯದ್ ಮುಜೀಬ್ ರವರು ಅಭಿಪ್ರಾಯ ಪಟ್ಟರು.

ಅವರು ಎರಡು ದಿನಗಳ ಕಾಲ ಮಂಗಳೂರಿನ ಬೋಳಾರದಲ್ಲಿ CITU ನೇತ್ರತ್ವದಲ್ಲಿ ನಡೆಯುತ್ತಿರುವ ಹಾಸನ ವಿಭಾಗ ಮಟ್ಟದ ಸಂಘಟನಾ ಕಾರ್ಯಾಗಾರವನ್ನು ಉದ್ಘಾಟಿಸುತ್ತಾ ಈ ಮಾತುಗಳನ್ನು ಹೇಳಿದರು.

ಮುಂದುವರಿಸುತ್ತಾ ಅವರು, ಹತ್ತಾರು ಕಾನೂನುಗಳನ್ನು ಬದಲಾವಣೆ ಮಾಡುತ್ತಿರುವ ಕೇಂದ್ರ- ರಾಜ್ಯ ಸರ್ಕಾರಗಳು ಹೊಸ ಕಾಯ್ದೆಗಳ, ನಿಯಮಾವಳಿಗಳ ಹಾಗೂ ನೀತಿಗಳ ಮೂಲಕ ಜನರಿಗಿದ್ದ ಅಧಿಕಾರವನ್ನು ಕಸಿಯುತ್ತಿದ್ದು ಜನರನ್ನು ಮತ್ತೆ ಗುಲಾಮರನ್ನಾಗಿಸುತ್ತಿವೆ. ಮಂಗಳೂರಿನಲ್ಲಿ ಜನರ ಧ್ವನಿಗಳಾದ ಪ್ರತಿಭಟನೆಗಳನ್ನು ಹತ್ತಿಕ್ಕಲು ಪೊಲೀಸ್ ಸರ್ವಾಧಿಕಾರಿ ನೀತಿಯನ್ನು ಅನುಸರಿಸುತ್ತಿದೆ.ರಾಜ್ಯದ ರಾಜಧಾನಿಯಲ್ಲೂ ಪ್ರತಿಭಟನೆಗಳಿಗೆ ಅವಕಾಶವೇ ಇಲ್ಲದಂತಹ ವಾತಾವರಣ ನಿರ್ಮಾಣ ಮಾಡಿದೆ.ಇದು ಜನರ ಪ್ರತಿಭಟನೆಯ ಹಕ್ಕನ್ನು ಕಸಿಯುತ್ತಿರುವುದರ ಭಾಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜೆ. ಬಾಲಕೃಷ್ಣ ಶೆಟ್ಟಿಯವರು ಮಾತನಾಡುತ್ತಾ, ರಾಜ್ಯದ ಕಾಂಗ್ರೆಸ್ ಸರಕಾರ ಈಗಲೂ ಗ್ಯಾರಂಟಿ ಯೋಜನೆಗಳ ಅಮಲಿನಲ್ಲಿ ತೇಲಾಡುತ್ತಿದೆಯೇ ಹೊರತು ದುಡಿಯುವ ವರ್ಗದ ಪ್ರಶ್ನೆಗಳ ಬಗ್ಗೆ ಚಕಾರ ಶಬ್ದವೆತ್ತುತ್ತಿಲ್ಲ. ಮಾತ್ರವಲ್ಲದೆ ಕಳೆದ ಬಿಜೆಪಿ ಸರಕಾರ ಕೈಗೊಂಡ ಕಾರ್ಮಿಕ ವಿರೋಧಿ ನೀತಿಗಳನ್ನೇ ಮುಂದುವರಿಸುತ್ತಿದೆ.ಇಂತಹ ಸರಕಾರದ ವಿರುದ್ಧ ಧ್ರಢವಾದ ಹೋರಾಟವನ್ನು ನಡೆಸಲು ಕಾರ್ಮಿಕ ವರ್ಗವನ್ನು ಸಜ್ಜುಗೊಳಿಸಲು ನಡೆಯುವ ಈ ಕಾರ್ಯಾಗಾರವು ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ಕಾರ್ಮಿಕ ವರ್ಗದ ಹಕ್ಕುಗಳನ್ನು ರಕ್ಷಿಸಲು ದುಡಿಯುವ ವರ್ಗದ ಚಳುವಳಿಯನ್ನು ಬಲಿಷ್ಠಗೊಳಿಸಬೇಕೆಂದು ಹೇಳಿದರು.

ವೇದಿಕೆಯಲ್ಲಿ CITU ರಾಜ್ಯ ಉಪಾಧ್ಯಕ್ಷರುಗಳಾದ ವಸಂತ ಆಚಾರಿ,ಮಾಲಿನಿ ಮೇಸ್ತಾ, ರಾಧಾ ಮೂಡಬಿದ್ರೆ,ಧರ್ಮೇಶ್ ರವರು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಹಾಸನ ವಿಭಾಗ ಮಟ್ಟದ ದ.ಕ., ಉಡುಪಿ,ಹಾಸನ,ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಆಯ್ದ 120ರಷ್ಟು ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಿದ್ದು,ಈ ಶಿಬಿರದಲ್ಲಿ CITU ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ,ರಾಜ್ಯ ಉಪಾಧ್ಯಕ್ಷ ರಾದ ಡಾ.ಕೆ ಪ್ರಕಾಶ್, ಧರ್ಮೇಶ್, ಮಾಲಿನಿ ಮೇಸ್ತಾರವರು ತರಗತಿಗಳನ್ನು ನಡೆಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X