ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಆರೋಪಿ ರಂಜಿತ್ ಸೆರೆ; ಬಂಧಿತರ ಸಂಖ್ಯೆ 13ಕ್ಕೆ ಏರಿಕೆ

ಅಬ್ದುಲ್ ರಹ್ಮಾನ್
ಮಂಗಳೂರು, ಆ.10: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಈಗಾಗಲೇ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಿರುವ ಪೊಲೀಸರು ಆ.10 ರಂದು ರಂಜಿತ್ ಯಾನೆ ರಂಜು (35) ಎಂಬಾತನನ್ನು ಬಂಧಿಸಿದ್ದಾರೆ.
ಮೇ 27ರಂದು ಆರೋಪಿಗಳು ಅಬ್ದುಲ್ ರಹ್ಮಾನ್ ಅವರನ್ನು ಹತ್ಯೆಗೈದು ಮತ್ತು ಅವರ ಸ್ನೇಹಿತ ಕಲಂದರ್ ಶಾಫಿ ಅವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





