Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಕ್ಕು ಪತ್ರ ಪಡೆದವರಿಗೆ ನಿವೇಶನ ನೀಡದೆ...

ಹಕ್ಕು ಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ ಆರೋಪ : ಗುರುಪುರ ನಾಡ ಕಚೇರಿ ಮುಂಭಾಗ ಸಂತ್ರಸ್ತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 April 2025 1:31 PM IST
share
Photo of Protest

ಮಂಗಳೂರು : ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ಏಳು ವರ್ಷಗಳು ಕಳೆದರೂ ನಿವೇಶನ ಒದಗಿಸದೆ ವಂಚಿಸಲಾಗಿದೆ ಎಂದು ಆರೋಪಿಸಿ ಸಂತ್ರಸ್ತರು ಕುಪ್ಪೆಪದವು ನಿವೇಶನ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಗುರುಪುರ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

2018 ರಲ್ಲಿ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ತರಾತುರಿಯುಲ್ಲಿ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ನಿವೇಶನಗಳನ್ನು ಗುರುತು ಮಾಡಲಾಗಿತ್ತು. ನಿವೇಶನ ಒದಗಿಸದೆ ಬಡ ನಿವೇಶನ ರಹಿತರನ್ನು ಸತಾಯಿಸಲಾಗುತ್ತಿತ್ತು. ಕಳೆದ ಜನವರಿಯಲ್ಲಿ ಸಂತ್ರಸ್ತರು ಹೋರಾಟ ಸಮಿತಿ ರಚಿಸಿಕೊಂಡು ಜಮೀನು ಸ್ವಾಧೀನ ನೀಡುವಂತೆ ಹೋರಾಟ ಆರಂಭಿಸಿದ್ದರು. ಈ ಕುರಿತು ಜನವರಿಯಲ್ಲಿ ಕುಪ್ಪೆಪದವು ಪಂಚಾಯತ್ ಮುಂಭಾಗ ನಡೆದ ಧರಣಿಯಲ್ಲಿ ಮನವಿ ಸ್ವೀಕರಿಸಲು ಆಗಮಿಸಿದ ಡೆಪ್ಯುಟಿ ತಹಶೀಲ್ದಾರ್, ಫೆಬ್ರವರಿ ಕೊನೆಯಲ್ಲಿ ನಿವೇಶನ ಸ್ವಾಧೀನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಭರವಸೆ ಈಡೇರಿಲ್ಲ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್ ನಿವೇಶನ ಸ್ವಾಧೀನ ನೀಡಲು ತಾಂತ್ರಿಕ ಸಮಸ್ಯೆಗಳು ಇವೆ ಎಂದು ಹೇಳಿದಾಗ ಅಸಮಾಧಾನಗೊಂಡ ಪ್ರತಿಭಟನಾಕಾರರು ಗ್ರಾಮಪಂಚಾಯತ್ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸಿ, ಗುರುತಿಸಿರುವ ಜಮೀನನ್ನು ನೇರ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುವುದಾಗಿ ಹೇಳಿದರು.

ಪ್ರತಿಭಟನಾ ಪ್ರದರ್ಶನವನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಉದ್ಘಾಟಿಸಿದರು. ಕಾರ್ಮಿಕ ಮುಂದಾಳುಗಳಾದ ಸದಾಶಿವ ದಾಸ್, ನೋಣಯ್ಯ ಗೌಡ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಿವೇಶನ ರಹಿತರ ಹೋರಾಟ ಸಮಿತಿಯ ಸಂಚಾಲಕಿ ವಸಂತಿ ಕುಪ್ಪೆಪದವು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ವಲಯ ಅಧ್ಯಕ್ಷ ಬಾಬು ಸಾಲ್ಯಾನ್, ಗುರುಪುರ ವಲಯ ಬೀಡಿ ಕಾರ್ಮಿಕರ ಸಂಘದ ಮುಖಂಡರಾದ ಹೊನ್ನಯ್ಯ ಅಮೀನ್, ವಾರಿಜ ಕುಪ್ಪೆಪದವು, ಹೋರಾಟ ಸಮಿತಿಯ ಸದಾಶಿವ ಕಟ್ಟೆಮಾರ್, ಜಮೀಲಾ ಮಾಣಿಪಳ್ಳ, ಮಜೀದ್ ಕಲ್ಲಾಡಿ, ಕುಸುಮಾ ಕುಪ್ಪೆಪದವು, ರಜಿಯಾ ಮಾಣಿಪಳ್ಳ, ಬಾಲಕೃಷ್ಣ ಶೆಟ್ಟಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X