Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೆನ್‌ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್...

ವೆನ್‌ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ಅಭಿವೃದ್ಧಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ3 Feb 2026 10:56 PM IST
share
ವೆನ್‌ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ಅಭಿವೃದ್ಧಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ
10 ಕೋಟಿ ರೂ. ವೆಚ್ಚದ ಯೋಜನೆ

ಮಂಗಳೂರು: ನಗರದ ವೆನ್‌ಲಾಕ್ ಸರಕಾರಿ ಜಿಲ್ಲಾ ಆಸ್ಪತ್ರೆಯ ಅಭಿವೃದ್ಧಿಗೆ ರಾಜ್ಯ ಸರಕಾರ ಹಸಿರು ನಿಶಾನೆ ನೀಡಿದ್ದು 10 ಕೋಟಿ ರೂ. ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ಕಟ್ಟಡದಲ್ಲಿ ಹೆಚ್ಚುವರಿಯಾಗಿ 4 ಮತ್ತು 5ನೇ ಮಹಡಿಗಳನ್ನು ನಿರ್ಮಿಸಲು ಸರಕಾರದಿಂದ ಅಧಿಕೃತವಾಗಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಈ ಯೋಜನೆಯು ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್ ) ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯ ಅಡಿಯಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ.

ಈ ನಿರ್ಮಾಣ ಕಾರ್ಯಕ್ಕಾಗಿ ಒಟ್ಟು 10 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಮತ್ತು ಆಸ್ಪತ್ರೆಯ ಸಾಮರ್ಥ್ಯ ವನ್ನು ವಿಸ್ತರಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಎಂಆರ್‌ಪಿಎಲ್ ಸಂಸ್ಥೆಯು ನೀಡಿರುವ ದೇಣಿಗೆಯಿಂದಾಗಿ ಕರಾವಳಿ ಭಾಗದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮತ್ತಷ್ಟು ಉತ್ತಮ ಗುಣಮಟ್ಟದ ಚಿಕಿತ್ಸೆ ವೆನ್‌ಲಾಕ್‌ನಲ್ಲಿ ಲಭ್ಯವಾಗಲಿದೆ. ಸರಕಾರದ ಈ ಆದೇಶದಿಂದಾಗಿ ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವುದರಿಂದ ಆಸ್ಪತ್ರೆಯ ಅಭಿವೃದ್ಧಿಗೆ ವೇಗ ದೊರೆತಿದೆ.

*ಹೈಟೆಕ್ ಸ್ಪರ್ಶ :ವೆನ್‌ಲಾಕ್ ಆಸ್ಪತ್ರೆ ಅಭಿವೃದ್ಧಿಗೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಕಂಪೆನಿಗಳು ಕೈ ಜೋಡಿಸುತ್ತಿದೆ. ಆಸ್ಪತ್ರೆಯು ಖಾಸಗಿ ಆಸ್ಪತ್ರೆಗೆ ಸರಿಸಾಟಿಯಾಗಿ ಬೆಳೆಯುತ್ತಿದೆ. ರೋಗಿಗಳ ಸಂಖ್ಯೆಯು ದಿನದಿಂದ ಜಾಸ್ತಿಯಾಗು ತ್ತಿದ್ದು, ಹೊರ ಜಿಲ್ಲೆಗಳ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಉತ್ತಮ ಚಿಕಿತ್ಸೆ ದೊರೆಯುವ ಕಾರಣದಿಂದಾಗಿ ಜನರು ಇಲ್ಲಿಗೆ ಆಗಮಿಸುತ್ತಿದ್ದಾರೆ.

ಮಂಗಳೂರಿನಲ್ಲಿ ಹಲವು ಆಸ್ಪತ್ರೆಗಳು ಇದ್ದರೂ ಅಲ್ಲಿ ಹೋಗಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲದವರು, ಜಿಲ್ಲೆಯ ವಿವಿಧ ತಾಲೂಕುಗಳ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಕೈ ಸುಟ್ಟುಕೊಂಡವರು ಅಂತಿಮವಾಗಿ ವೆನ್‌ಲಾಕ್‌ಗೆ ಆಗಮಿಸಿ ಉತ್ತಮ ಚಿಕಿತ್ಸೆ ಪಡೆದು ವಾಪಸಾಗುತ್ತಿರುವ ಪ್ರಕರಣಗಳು ಗುಟ್ಟಾಗಿ ಉಳಿದಿಲ್ಲ.

*ಒಪಿಡಿ ಕಟ್ಟಡಕ್ಕೆ 70 ಕೋಟಿ ರೂ: ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊರರೋಗಿಗಳ ವಿಭಾಗಕ್ಕೆ ಸುಮಾರು 70 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ 35 ಕೋಟಿ ರೂ ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿಗೆ ಸರಕಾರದಿಂದ ಆಡಳಿತಾತ್ಮಕ ಅನುಮತಿ ದೊರೆತಿದೆ.

ಜಯದೇವ, ಕಿದ್ವಾಯಿ ಘಟಕ ಸ್ಥಾಪನೆಗೆ ಬೇಡಿಕೆ: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಕಿದ್ವಾಯಿ ಸ್ನಾರಕ ಗೃಂಥಿ ಆಸ್ಪತ್ರೆಗಳ ಘಟಕಗಳನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕೆಂದು ಜನ ಸಾಮಾನ್ಯರು ಸರಕಾರವನ್ನು ಆಗ್ರಹಿಸಿದ್ದಾರೆ. ಈಗಾಗಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಕಿದ್ವಾಯಿ ಸ್ನಾರಕ ಗೃಂಥಿ ಆಸ್ಪತ್ರೆಗಳ ಘಟಕಗಳನ್ನು ಸ್ಥಾಪನೆಗೆ ವೆನ್‌ಲಾಕ್ ಆಸ್ಪತ್ರೆ ಬಳಿ ಮತ್ತು ಮೂಡುಶೆಡ್ಡೆ ಕ್ಷಯ ರೋಗ ಆಸ್ಪತ್ರೆಯ ಆವರಣಲ್ಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿದ ಜಾಗದಲ್ಲಿ ಈ ಘಟಕಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ತಿಳಿದು ಬಂದಿದೆ.

Tags

Administrativeapprovaldevelopmentwork
share
ವಾರ್ತಾಭಾರತಿ
ವಾರ್ತಾಭಾರತಿ
Next Story
X