Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡ್ಯಾರ್‌| ಬೃಹತ್ ಪ್ರತಿಭಟನೆ ವೇಳೆ...

ಅಡ್ಯಾರ್‌| ಬೃಹತ್ ಪ್ರತಿಭಟನೆ ವೇಳೆ ವಾಹನಗಳ ಸಂಚಾರಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ19 April 2025 8:09 PM IST
share
ಅಡ್ಯಾರ್‌| ಬೃಹತ್ ಪ್ರತಿಭಟನೆ ವೇಳೆ ವಾಹನಗಳ ಸಂಚಾರಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18ರಂದು ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದರೆಂಬ ಆರೋಪದಲ್ಲಿ ಮೂವರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷ್ಣಾಪುರದ ಜಲೀಲ್, ವಳಚ್ಚಿಲ್‌ನ ಫಝಲ್ ಮತ್ತು ಮೊಹಮ್ಮದ್ ಹನೀಫ್ ನೌಫಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೇರ ವೀಕ್ಷಣೆ ಹಾಗೂ ಆರಂಭಿಕ ವೀಡಿಯೊ ವಿಶ್ಲೇಷಣೆಯ ಆಧಾರದ ಮೇಲೆ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸರು ನೀಡಿರುವ ದೂರಿನಂತೆ ಮೂವರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 189(2), 126(2), 270, 324(4), 132, 285, 190ರಂತೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ವೀಡಿಯೊ ದೃಶ್ಯಗಳ ವಿವರವಾದ ವಿಶ್ಲೇಷಣೆಯ ಆಧಾರದ ಮೇಲೆ ಇತರ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

ಬೃಹತ್ ಪ್ರತಿಭಟನೆಯ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಸುಗಮ ಸಂಚಾರವನ್ನು ದೃಢಪಡಿಸಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಯೊಂದಿಗೆ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸಂಘಟಕರು ಸುಗಮ ಸಮನ್ವಯವನ್ನು ದೃಢಪಡಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯ ಸ್ವಯಂಸೇವಕರನ್ನು ನಿಯೋಜಿಸಲಾಗಿತ್ತು. ಅವರು ಪೊಲೀಸ್ ಸಿಬ್ಬಂದಿಗೆ ಸಹಾಯ ಮಾಡಿದ್ದರು.

ಆದಾಗ್ಯೂ ಸಂಜೆ 4:30ರ ಸುಮಾರಿಗೆ, ಪ್ರತಿಭಟನಾಕಾರರ ಗುಂಪೊಂದು ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಹೆದ್ದಾರಿ 73ರ ಬದಿಯಲ್ಲಿ ಮತ್ತು ಮಧ್ಯದಲ್ಲಿ ಜಮಾಯಿಸಿ, ವಾಹನಗಳ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿತು. ಪ್ರತಿಭಟನಾಕಾರರಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡುವಂತೆ ಪೊಲೀಸರು ಪದೇ ಪದೇ ಮನವಿ ಮಾಡಿದ್ದರೂ, ಪದೇ ಪದೇ ಸೂಚನೆಗಳನ್ನು ನೀಡಿದ್ದರೂ, ಕೆಲವು ಪ್ರತಿಭಟನಾಕಾರರು ಸಂಚಾರಕ್ಕೆ ಅಡ್ಡಿಪಡಿಸುವ, ತುರ್ತು ಸೇವೆಗಳಿಗೆ ಅಡ್ಡಿಪಡಿಸುವ ಮತ್ತು ಸಾರ್ವಜನಿಕ ಸೇವಕರು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಹಸ್ತಕ್ಷೇಪ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ಪ್ರಕಟಣೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X