Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ...

ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕತೆ ಬಲವರ್ಧನೆ

ವಾರ್ತಾಭಾರತಿವಾರ್ತಾಭಾರತಿ26 May 2025 10:52 PM IST
share
ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಒಳಗೊಂಡ ಸರ್ವಪಕ್ಷಗಳ ನಿಯೋಗ

ಮಂಗಳೂರು: ಭಯೋತ್ಪಾದನೆ ವಿರುದ್ಧ ಭಾರತದ ದೃಢ ಸಂಕಲ್ಪವನ್ನು ಜಾಗತಿಕವಾಗಿ ಎತ್ತಿ ಹಿಡಿಯುವ ಮೂಲಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಶ್ಯ ಭೇಟಿ ಬಳಿಕ ಇದೀಗ ಸ್ಲೊವೇನಿಯಾ ದೇಶದಲ್ಲಿದ್ದು, ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ಅಂತರ್‌ರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.

ಸ್ಲೊವೇನಿಯಾ ದೇಶಕ್ಕೆ ಆಗಮಿಸಿದ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿ ಅಮಿತ್ ನಾರಂಗ್ ಅವರು ಬರಮಾಡಿಕೊಂಡರು . ನಂತರ ಅವರು ಸರ್ವಪಕ್ಷಗಳ ಸಂಸದೀಯ ನಿಯೋಗದ ಜತೆಗೆ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಸ್ಲೊವೇನಿಯಾ ದೇಶವು ಭಾರತದೊಂದಿಗೆ ಬೆಂಬಲವಾಗಿ ನಿಂತಿದ್ದು, ಉಭಯ ದೇಶಗಳ ನಡುವೆ ವೃದ್ದಿಸುತ್ತಿರುವ ಬಾಂಧವ್ಯದ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.

ಇದಾದ ಬಳಿಕ ಸರ್ವಪಕ್ಷದ ನಿಯೋಗವು ರಾಷ್ಟ್ರೀಯ ಅಸೆಂಬ್ಲಿಯ ವಿದೇಶಾಂಗ ನೀತಿ ಸಮಿತಿಯ ಅಧ್ಯಕ್ಷ ಎಚ್.ಇ. ಪ್ರೆಡ್ರಾಗ್ ಬಕೋವಿಕ್ ಮತ್ತು ಭಾರತ-ಸ್ಲೊವೇನಿಯಾ ಪಾರ್ಲಿಮೆಂಟರಿ ಫ್ರೆಂಡ್‌ಶಿಪ್ ಗ್ರೂಪ್ ನ ಮಿರ್ಸ್ಲಾವ್ ಗ್ರೆಗೋರಿಕ್ ಅವರೊಂದಿಗೆ ಸಭೆ ನಡೆಸಿ ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಕುರಿತ ಭಾರತದ ಬಲವಾದ ಬದ್ಧತೆ ಕುರಿತು ಮನವರಿಕೆ ಮಾಡಿಕೊಟ್ಟಿದೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನದ ಇಬ್ಬಗೆಯ ನೀತಿಯ ಕುರಿತು ಭಾರತದ ಕಳವಳವನ್ನು ಸ್ಲೊವೇನಿಯಾದ ಜನಪ್ರತಿನಿಧಿಗಳು ಹಾಗೂ ಚಿಂತಕರಿಗೆ ಸ್ಪಷ್ಟವಾಗಿ ತಿಳಿಹೇಳಲಾಯಿತು.

ಇದಾದ ಬಳಿಕ ಸ್ಲೊವೇನಿಯಾದ ಪ್ರಧಾನ ಮಂತ್ರಿ ಕಚೇರಿಯ ರಾಷ್ಟ್ರೀಯ ಮತ್ತು ಅಂತರ್‌ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಸಂಯೋಜಕರಾದ ಎಚ್.ಇ. ವೋಜ್ಕೊ ವೋಲ್ಕ್ ಅವರೊಂದಿಗೆ ನಿಯೋಗವು ಮಹತ್ವದ ಸಭೆ ನಡೆಸಿದೆ. ನಂತರ ಸ್ಲೊವೇನಿಯಾದ ವಿದೇಶಾಂಗ ಮತ್ತು ಯುರೋಪಿಯನ್ ವ್ಯವಹಾರಗಳ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಬಾರ್ಬರಾ ಜ್ವೊಕೆಲ್ಜ್ ಅವರನ್ನು ನಿಯೋಗ ಭೇಟಿ ಮಾಡಿತು. ಈ ವೇಳೆ ಪಹಲ್ಗಾಮ್ ದಾಳಿಯನ್ನು ಸ್ಲೊವೇನಿಯಾ ಸ್ಪಷ್ಟವಾಗಿ ಖಂಡಿಸುವುದರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಭಾರತವು ಭಯೋತ್ಪಾದನೆ ವಿರುದ್ಧದ ತಳೆದಿರುವ ನಿಲುವಿಗೆ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಆ ಮೂಲಕ ಭಯೋತ್ಪಾದನೆ ವಿರುದ್ಧದ ಭಾರತದ ದಿಟ್ಟ ಹೋರಾಟದಲ್ಲಿ ಎಲ್ಲ ರೀತಿಯ ಸಹಕಾರದ ಭರವಸೆಯನ್ನು ನೀಡಿದೆ ಎಂದು ಚೌಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X