Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. “ಆಧಾರರಹಿತ ಮತ್ತು ಸುಳ್ಳು”:...

“ಆಧಾರರಹಿತ ಮತ್ತು ಸುಳ್ಳು”: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಕುರಿತ ಆರೋಪಗಳ ಬಗ್ಗೆ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ19 Aug 2025 4:08 PM IST
share
“ಆಧಾರರಹಿತ ಮತ್ತು ಸುಳ್ಳು”: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಕುರಿತ ಆರೋಪಗಳ ಬಗ್ಗೆ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ
ಎಸ್ಐಟಿ ತನಿಖೆಯನ್ನು ಸ್ವಾಗತಿಸಿದ ಧರ್ಮಾಧಿಕಾರಿ

ಬೆಂಗಳೂರು: ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಮೃತದೇಹಗಳು ಹೂತು ಹಾಕಿರುವ ಕುರಿತ ಆರೋಪಗಳ ಬಗ್ಗೆ ಇದೇ ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸಂಸದ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದಾರೆ. ಈ ಆರೋಪಗಳು ಆಧಾರರಹಿತ ಮತ್ತು ಸುಳ್ಳು ಎಂದು ಹೇಳಿದ್ದಾರೆ.

PTI ಸಂದರ್ಶನದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ, ಭಕ್ತರನ್ನು ದಾರಿ ತಪ್ಪಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಈ ಆರೋಪಗಳನ್ನು ಮಾಡಲಾಗಿದೆ. ಇದರಿಂದ ತೀವ್ರ ನೋವುಂಟಾಗಿದೆ ಎಂದು ಹೇಳಿದರು.

ಈ ಕುರಿತು ತನಿಖೆಗೆ ಕರ್ನಾಟಕ ಸರಕಾರ ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸಿರುವುದನ್ನು ಸ್ವಾಗತಿಸಿದ ಹೆಗ್ಗಡೆ, ಎಸ್ಐಟಿ ರಚಿಸಿರುವುದು ಒಳ್ಳೆಯದಾಗಿದೆ. ಸತ್ಯ ಎಲ್ಲರಿಗೂ ತಿಳಿಯಲು ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿ. ನಾವು ನಮ್ಮ ಎಲ್ಲಾ ದಾಖಲೆಗಳನ್ನು ತೆರೆದಿಟ್ಟಿದ್ದೇವೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯುತ್ತಿಲ್ಲ. ಎಲ್ಲಾ ಶೈಕ್ಷಣಿಕ ಮತ್ತು ಸಾಮಾಜಿಕ ಸಂಸ್ಥೆಗಳು ಟ್ರಸ್ಟ್ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. ನಮ್ಮ ಕುಟುಂಬದ ಒಡೆತನದ ಆಸ್ತಿ ಬಹಳ ಕಡಿಮೆಯಿದೆ. ಹೆಚ್ಚಿನ ಆಸ್ತಿಯು ಟ್ರಸ್ಟ್‌ನದ್ದಾಗಿದೆ ಮತ್ತು ಅದಕ್ಕೆ ದಾಖಲೆಗಳಿವೆ. ಕಳೆದ 14 ವರ್ಷಗಳಿಂದ ಧರ್ಮಸ್ಥಳದ ವಿರುದ್ಧ ಸುಳ್ಳು ಪ್ರಚಾರ ನಡೆಯುತ್ತಿದ್ದರೂ ನಾವು ಅಚಲವಾಗಿ ನಮ್ಮ ಸಮಾಜ ಸೇವೆಯನ್ನು ಮುಂದುವರಿಸಿದ್ದೇವೆ ಎಂದು ಹೆಗ್ಗಡೆ ಹೇಳಿದರು.

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಈ ಆರೋಪಗಳು ಸುಳ್ಳಾಗಿದೆ. ಧರ್ಮಸ್ಥಳದಲ್ಲಿ ನಿಧನ ಹೊಂದಿದವರು ಮೋಕ್ಷವನ್ನು ಪಡೆಯುತ್ತಾರೆ ಎಂಬ ಜನಪ್ರಿಯ ನಂಬಿಕೆ ಇದೆ. ಯಾರೇ ಮೃತಪಟ್ಟರೂ ನಾವು ಪಂಚಾಯತ್‌ಗೆ ತಿಳಿಸಿ ಕಾನೂನಿನಂತೆಯೇ ಮುಂದಿನ ಕಾರ್ಯವನ್ನು ನಡೆಸಿದ್ದೇವೆ. ಈಗ ಪ್ರಚಾರದಲ್ಲಿರುವ ಆರೋಪಗಳು ಕಟ್ಟುಕಥೆ ಎಂದು ಹೇಳಿದರು.

ಪಕ್ಷಾತೀತವಾಗಿ ರಾಜಕೀಯ ನಾಯಕರು ಧರ್ಮಸ್ಥಳಕ್ಕೆ ಬೆಂಬಲವಾಗಿ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಇದು ರಾಜಕೀಯ ವಿಷಯವಲ್ಲ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇಲ್ಲಿಗೆ ಬಂದಿದ್ದಾರೆ. ಕೆಲವರು ದೇವಾಲಯದ ಮಾನಹಾನಿ ಮಾಡಲು ಪ್ರಯತ್ನಿಸುತ್ತಿರುವುದರಿಂದ ಎಲ್ಲಾ ಪಕ್ಷಗಳು ದೇವಸ್ಥಾನದ ಪರವಾಗಿ ನಿಂತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕರಣದ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುತ್ತದೆ ಎಂದು ಹೇಳಿರುವುದನ್ನು ಹೆಗ್ಗಡೆ ಸ್ವಾಗತಿಸಿದರು. ಇದು ಪಕ್ಷಪಾತರಹಿತ ನಿಲುವು. ದೇವಾಲಯದ ಅಧಿಕಾರಿಗಳು ತಪ್ಪು ಮಾಡಿದ್ದರೆ, ಅವರು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಇತರರು ತಪ್ಪಿತಸ್ಥರಾಗಿದ್ದರೆ ಅವರಿಗೂ ಶಿಕ್ಷೆಯಾಗಬೇಕು ಎಂದು ಹೆಗ್ಡೆ ಹೇಳಿದರು.

ಸಾಮಾಜಿಕ ಮಾಧ್ಯಮದ ಪ್ರಭಾವ ಮತ್ತು ʼಕಾಂತಾರʼ ಚಲನಚಿತ್ರದಂತಹ ಜನಪ್ರಿಯ ಸಂಸ್ಕೃತಿಯಲ್ಲಿನ ಉಲ್ಲೇಖಗಳ ಬಗ್ಗೆ ಮಾತನಾಡಿದ ಅವರು, ವಿಷಯಗಳನ್ನು ಬಿಂಬಿಸುವ ರೀತಿ ನಮಗೆ ಆಘಾತವನ್ನುಂಟು ಮಾಡಿದೆ. ಸಾಮಾಜಿಕ ಮಾಧ್ಯಮವು ಪ್ರಬಲವಾಗಿದೆ ಮತ್ತು ದುರದೃಷ್ಟವಶಾತ್, ಕೆಲ ಸ್ವಾರ್ಥಿಗಳು ಯುವ ಮನಸ್ಸುಗಳನ್ನು ಕಲುಷಿತಗೊಳಿಸಲು ಅದನ್ನು ಬಳಸಿಕೊಂಡಿದ್ದಾರೆ. ನಾವು ನಮ್ಮ ಒಳ್ಳೆಯ ಕೆಲಸವನ್ನು ಎಂದಿಗೂ ಪ್ರಚಾರ ಮಾಡಿಲ್ಲ. ಆದರೆ ನಮ್ಮ ಸೇವೆ 55 ಲಕ್ಷ ಕುಟುಂಬಗಳನ್ನು ತಲುಪಿದೆ ಎಂದರು.

ಸತ್ಯವೇ ಗೆಲ್ಲುತ್ತದೆ, ಈ ಪಿತೂರಿಗಳು ಕೊನೆಗೊಳ್ಳುತ್ತವೆ ಎಂದು ಇದೇ ವೇಳೆ ವೀರೇಂದ್ರ ಹೆಗ್ಗಡೆ ವಿಶ್ವಾಸ ವ್ಯಕ್ತಪಡಿಸಿದರು. ಈ ಎಲ್ಲಾ ಆರೋಪಗಳು ಸುಳ್ಳು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಲೇ ಇದ್ದಾರೆ. ಪೂಜೆ, ಆಚರಣೆಗಳು ಮತ್ತು ಸಂಪ್ರದಾಯಗಳು ಎಂದಿನಂತೆ ನಡೆಯುತ್ತಿವೆ ಮತ್ತು ಧರ್ಮಸ್ಥಳದ ಮೇಲಿನ ನಂಬಿಕೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X