ಅಂಬ್ಲಮೊಗರು: ಶತಮಾನೋತ್ಸವ ಪ್ರಯುಕ್ತ ಪೂರ್ವ ಭಾವಿ ಸಭೆ

ಉಳ್ಳಾಲ: ಅಂಬ್ಲಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಪೂರ್ವಭಾವಿ ಸಭೆ ಗುರುವಾರ ಅಂಬ್ಲಮೊಗರು ಶಾಲೆಯಲ್ಲಿ ನಡೆಸಲಾಯಿತು.
ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಸಭೆಯಲ್ಲಿ ಭಾಗವಹಿಸಿ ಮುಂದಿನ ಕಾರ್ಯ ಯೋಜನೆಯ ಬಗ್ಗೆ ಸಲಹೆ ಸೂಚನೆ ನೀಡುವುದರೊಂದಿಗೆ ಶಾಲೆಗೆ ವಿಶೇಷ ಅನುದಾನವನ್ನು ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮದ್ ಇಕ್ಬಾಲ್ ವಹಿಸಿದ್ದರು. ಸಮಾರಂಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಸುದರ್ಶನ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸಂಜೀವ ಶೆಟ್ಟಿ , ವಿಠಲಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಹಮ್ಮದ್ ರಫೀಕ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ್, ಕ್ಷೇತ್ರ ಸಮನ್ವಯ ಅಧಿಕಾರಿ ಡಾ. ಪ್ರಶಾಂತ್ ಕುಮಾರ್, ಎಸ್ ಡಿ ಎಂ ಸಿ ಅಧ್ಯಕ್ಷ ಅಬುಸಾಲಿ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರುಗಳಾದ ನರಸಿಂಹ ಆಳ್ವ, ಜಯಶೀಲಶೆಟ್ಟಿ, ಕರುಣಾಕರ ಪೂಜಾರಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮುಮ್ತಾಜ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬ್ದುಲ್ ಖಾದರ್, ಸಿ ಆರ್ ಪಿ ರೆಹನಾ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸವಿತಾ ಶೆಟ್ಟಿ, ಕುಂಡೂರು ಜುಮ್ಮಾ ಮಸೀದಿ ಸಮಿತಿ ಅಧ್ಯಕ್ಷ ಮಹಮ್ಮದ್ ಶರೀಫ್ ,ಶ್ರೀ ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆ ಒಕ್ಕೂಟದ ಸ್ಥಳೀಯ ಘಟಕದ ಅಧ್ಯಕ್ಷ ಮಂಜುನಾಥ ಆಚಾರ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸರಕಾರದ ವತಿಯಿಂದ ಉಚಿತವಾಗಿ ನೀಡಲಾದ ಶೂ ಸಾಕ್ಸ್ ಮಕ್ಕಳಿಗೆ ವಿತರಣೆ ಮಾಡಲಾಯಿತು.
ಹಳೆ ವಿದ್ಯಾರ್ಥಿಗಳು, ಶಿಕ್ಷಕವೃಂದ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು,ಪೋಷಕವೃಂದ, ಸಂಘ-ಸಂಸ್ಥೆಗಳ ಅಧ್ಯಕ್ಷರುಗಳು, ಊರಿನ ನಾಗರಿಕರು ಭಾಗವಹಿಸಿದ್ದ ಈ ಸಭೆಯಲ್ಲಿ ಸರ್ವರ ಮಾರ್ಗದರ್ಶನದಂತೆ ಶತಮಾನೋತ್ಸವ ಸಮಿತಿ ರಚನೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ ಯವರು ಸ್ವಾಗತಿಸಿ ಶತಮಾನೋತ್ಸವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ವಿವರವನ್ನು ಮಂಡಿಸಿದರು. ಶಿಕ್ಷಕಿ ಶ್ರೀಮತಿ ಗೀತಾ ಕೆ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶ್ರೀಮತಿ ನಳಿನಾಕ್ಷಿಯವರು ಕೃತಜ್ಞತೆ ಸಲ್ಲಿಸಿದರು.







