ಹಿರಾ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

ಮಂಗಳೂರು: ಹಿರಾ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಅತ್ಯಂತ ಉತ್ಸಾಹ ಹಾಗೂ ಶಿಸ್ತಿನಿಂದ ಆಯೋಜಿಸಲಾಯಿತು.
ಅಂತರ್‌ರಾಷ್ಟ್ರೀಯ ಕ್ರೀಡಾಪಟು ಅಬ್ದುಲ್ ರೆಹಮಾನ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಶಾಂತಿ ಎಜುಕೇಶನಲ್ ಟ್ರಸ್ಟಿನ ಉಪಾಧ್ಯಕ್ಷ ಕೆ. ಎಂ. ಅಶ್ರಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಮಾರ್ಚ್ ಫಾಸ್ಟ್ ನೊಂದಿಗೆ ಆರಂಭವಾಯಿತು. ವಿದ್ಯಾರ್ಥಿ ಯು.ಟಿ. ಇಶಾನ್ ಸ್ವಾಗತಿಸಿದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಸಮೂಹ ಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಮೆರುಗನ್ನು ತಂದರು.
ವಿದ್ಯಾರ್ಥಿನಿ ಖತಿಜ ಅಮ್ನ ಪ್ರತಿಜ್ಞಾವಚನವನ್ನು ನೆರವೇರಿಸಿದರು. ವಿದ್ಯಾರ್ಥಿನಿ ಮೈಮುನ ನುಝ ವಂದಿಸಿದರು. ವಿದ್ಯಾರ್ಥಿನಿ ಇಶಾಲ್ ತಮನ್ನ ಕಾರ್ಯಕ್ರಮವನ್ನು ನಿರೂಪಿಸಿದರು.
Next Story





