ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಕೊಣಾಜೆ, ಎ.24: ನಡುಪದವಿನ ಪಿ.ಎ.ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಮಂಗಳವಾರ ಪಿ.ಎ. ಕಾಲೇಜಿನ ಮೈದಾನದಲ್ಲಿ ನಡೆಯಿತು.
ರಾಷ್ಟ್ರ ಮಟ್ಟದ ಅಥ್ಲೆಟಿಕ್ ಮತ್ತು ಪವರ್ ಲಿಫ್ಟರ್ ವಿನೋದ್ ಕುಮಾರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಇಂದಿನ ಯುವ ಪೀಳಿಗೆಯು ಕ್ರೀಡೆಯಲ್ಲಿ ಆಸಕ್ತಿ ಕಡಿಮೆಯಾಗುತ್ತಿರುವುದು ದುರದೃಷ್ಟಕರ. ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಸಾಧನೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಝ್ ಜೆ. ಹಾಶಿಂ ಮಾತನಾಡಿ, ವಿವಿಧ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡು ಆ ಮೂಲಕ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರತರಬೇಕು ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ.ಹರಿಕೃಷ್ಣನ್ ಜಿ., ಪಿ.ಎ. ಫಿಸಿಯೋಥೆರಫಿ ಕಾಲೇಜಿನ ಪ್ರಾಂಶುಪಾಲ ಡಾ.ಸಜೇಶ್ ರಘುನಾಥನ್, ಪಿ.ಎ. ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಇಸ್ಮಾಯೀಲ್ ಖಾನ್, ಪಿ.ಎ. ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥ ಡಾ.ಸಯ್ಯದ್ ಅಮೀನ್, ಮುಹಮ್ಮದ್ ಫೈಝಲ್, ಕ್ಯಾಂಪಸ್ ಸೂಪರ್ ವೈಸರ್ ಕ್ಯಾ.ರುದ್ರೇಶ್ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕರಾದ ಇಬ್ರಾಹೀಂ, ಡಾ.ಮುಹಮ್ಮದ್ ಇಕ್ಬಾಲ್ ಕಾರ್ಯಕ್ರಮ ಸಂಯೋಜಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಲಿಯಾ ತನಾಸ್ ವಂದಿಸಿದರು. ಹಿಯಾ ಅಶುಖ್, ಮುಹಮ್ಮದ್ ಸಫ್ವಾನ್ ಕಾರ್ಯಕ್ರಮ ನಿರೂಪಿಸಿದರು.







