Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊರಗ ಸಮುದಾಯದ ಮತ್ತೊಂದು ಅಧ್ಯಯನದ...

ಕೊರಗ ಸಮುದಾಯದ ಮತ್ತೊಂದು ಅಧ್ಯಯನದ ಅಗತ್ಯವಿದೆ: ದಿನೇಶ್ ಅಮೀನ್‌ಮಟ್ಟು

ವಾರ್ತಾಭಾರತಿವಾರ್ತಾಭಾರತಿ18 Aug 2025 8:09 PM IST
share
ಕೊರಗ ಸಮುದಾಯದ ಮತ್ತೊಂದು ಅಧ್ಯಯನದ ಅಗತ್ಯವಿದೆ: ದಿನೇಶ್ ಅಮೀನ್‌ಮಟ್ಟು
ಕೋಡಿಕಲ್‌ನಲ್ಲಿ ಕೊರಗರ ಭೂಮಿಹಬ್ಬ

ಮಂಗಳೂರು, ಆ. 18: ಕೊರಗರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಾ ಸಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ 30 ವರ್ಷಗಳಿಂದ ಸಮುದಾಯದಲ್ಲಿ ಆಗಿರುವ ಸಮಗ್ರ ಬದಲಾವಣೆಗಳ ಕುರಿತಂತೆ ಮತ್ತೊಂದು ಅಧ್ಯಯನದ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಅಭಿಪಾಯಿಸಿದ್ದಾರೆ.

ದ.ಕ. ಜಿಲ್ಲಾ ಕೊರಗರ ಸಂಘ, ಡಾ.ಬಿ.ಆರ್. ಅಂಬೇಡ್ಕರ್ ಯುವ ಮಂಡಲದ ವತಿಯಿಂದ ಕೋಡಿಕಲ್‌ನ ಕುದ್ಮುಲ್ ರಂಗರಾವ್ ಕೊರಗ ಸಮುದಾಯ ಭವವನದಲ್ಲಿ ಸೋಮವಾರ ಆಯೋಜಿಸಲಾದ ಕೊರಗರ ಭೂಮಿ ಹಬ್ಬದಲ್ಲಿ ಭೂಮಿ ಚಳವಳಿಯ ಸಾಕ್ಷ್ಯ ಚಿತ್ರ ಅನಾವರಣಗೊಳಿಸಿ ಮಾತನಾಡಿದರು.

ಕೊರಗ ಸಮುದಾಯದ ಬಗ್ಗೆ ಮುಹಮ್ಮದ್ ಪೀರ್ ಅವರು 1994ರಲ್ಲಿ ಮಂಡಿಸಿದ ಮುಹಮ್ಮದ್ ಪೀರ್ ವರದಿಯ ಬಳಿಕ ಕೊರಗ ಸಮುದಾಯದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಅಧ್ಯಯನದ ಅಗತ್ಯವಿದೆ. ಕೊರಗ ಸಮುದಾಯ ಇದನ್ನು ತಮ್ಮ ಪ್ರಮುಖ ಬೇಡಿಕೆಯಾಗಿಸಿ ಸರಕಾರದ ಮುಂದಿಡಬೇಕು ಎಂದು ಅವರು ಕರೆ ನೀಡಿದರು.

ಸಮುದಾಯದಲ್ಲಿ ಶಿಶು ಮರಣ ಯಾಕಿಷ್ಟು ಆಗುತ್ತಿದೆ ಎಂಬ ಬಗ್ಗೆ ವೈಜ್ಞಾನಿಕ ಕಾರಣವನ್ನು ತಿಳಿಯುವ ಅಗತ್ಯವಿದೆ. ಇದಕ್ಕೆ ವಂಶವಾಹಿನಿ ಅಥವಾ ಬೇರೆ ಕಾರಣಗಳಿವೇ ಎಂಬುದನ್ನು ನಿಖರವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿ ವರದಿ ತಯಾರಿಸಬೇಕು ಎಂದವರು ಹೇಳಿದರು.

ಉನ್ನತ ಶಿಕ್ಷಣಕ್ಕಾಗಿ ಮಕ್ಕಳಿಗೆ ಹಲವು ಯೋಜನೆಗಳ ಮೂಲಕ ಪ್ರಯೋಜನ ಸಿಗುತ್ತಿದೆ. ಆದರೆ ಪದವಿ, ಸ್ನಾತಕೋತ್ತರ ಪದವಿ ಆದವರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಶೇ. 2ರಷ್ಟು ಸಿಗುತ್ತಿರುವ ಸರಕಾರಿ ಉದ್ಯೋಗಕ್ಕೆ ಪೂರಕವಾಗಿ ತರಬೇತಿಯ ಅಗತ್ಯವಿದೆ. ಕೇವಲ ಶಿಕ್ಷಣ ದೊರೆತರೆ ಸಾಲದು, ಉದ್ಯೋಗ ತರಬೇತಿ ಯೋಜನೆಗಳು ಇಂದಿನ ಅಗತ್ಯವಾಗಿದೆ ಎಂದವರು ಹೇಳಿದರು.

ಕೊರಗ ಸಮುದಾಯದ ಮೂಲಕಸಬು ಬುಟ್ಟಿ ಹೆಣೆಯುವುದು. ಆದರೆ ಇಂದು ಆ ವಸ್ತುಗಳಿಗೆ ಬೇಡಿಕೆ ಇಲ್ಲವಾಗಿದೆ. ಹಾಗಾಗಿ ಇಂದಿನ ಪ್ರಚಲಿತ ಉದ್ಯಮದ ಬಗ್ಗೆಯೂ ಸಮುದಾಯದ ಯುವಕರು ಆಸಕ್ತಿ ತೋರಿಸಬೇಕು ಎಂದು ಅಮೀನ್‌ಮಟ್ಟು ಹೇಳಿದರು.

ಸದ್ಯ ನಿಷೇಧಿಸಲ್ಪಟ್ಟಿರುವ ಅಜಲು ಪದ್ಧತಿಯೂ ಹಿಂದೆ ಸಂಸ್ಕೃತಿಯ ಹೆಸರಿನಲ್ಲಿ ಆಚರಿಸಲ್ಪಡುತ್ತಿತ್ತು. ಹಾಗಾಗಿ ಸಮುದಾಯದ ಸಂಸ್ಕೃತಿ ರಕ್ಷಣೆಯ ಸಂದರ್ಭದಲ್ಲಿಯೂ ಯಾವುದು ಸಂಸ್ಕೃತಿ, ಯಾವುದು ಆಚರಣೆ ಎಂಬ ಬಗ್ಗೆಯೂ ಸ್ಪಷ್ಟತೆ ಇರಬೇಕು. ಇತರ ಬಲಿಷ್ಟ ಸಮುದಾಯಗಳಂತೆ ತಮ್ಮ ಜನಸಂಖ್ಯೆಯ ಆಧಾರದಲ್ಲಿ ಕೊರಗ ಸಮುದಾಯ ತನ್ನ ನಿಮ್ಮ ಪಾಲಿನ ಅಧಿಕಾರ, ಪ್ರಾತಿನಿಧ್ಯ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಇದಕ್ಕೆ ಇತರ ಹೋರಾಟ ಗಾರರು ಕೈಜೋಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಸಭಾ ಕಾರ್ಯವನ್ನುದ್ದೇಶಿಸಿ ಮಾತನಾಡಿದ ಕೊರಗ ಸಮುದಾಯದ ಮುಖಂಡ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಪಾಂಗಾಳ ಬಾಬು ಕೊರಗ, ಕೊರಗ ಸಮುದಾಯ ತಮ್ಮ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡುತ್ತಲೇ ಬಂದಿದೆ. 1990ರಿಂದ ಭೂಮಿಗಾಗಿ ಹೋರಾಟ ಹೆಚ್ಚು ಚುರುಕು ಪಡೆಯಿತು. ತಮ್ಮ ಭೂಮಿಯ ಹಕ್ಕಿಗಾಗಿ ಬೀದಿ ಗಿಳಿದು ಹೋರಾಟ ನಡೆಸುವ ಸ್ಥಿತಿ ಎದುರಾಗಿತ್ತು. ಈಗ ಕೊರಗ ಸಮುದಾಯ ಸಂಘಟಿತವಾಗಿದ್ದು, ಇದು ಮತ್ತಷ್ಟು ಬಲಯುತವಾಗುವುದರೊಂದಿಗೆ ಮುಂದುವರಿಯಬೇಕು. ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಮುಂದೆ ಕೊಂಡೊಯ್ಯಬೇಕಾದ ಗುರುತರ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಎಂ.ಸುಂದರ ಬೆಳುವಾಯಿ ಅಧ್ಯಕ್ಷತೆ ವಹಿಸಿದ್ದರು.

ಸಮುದಾಯದ ಮುಖಂಡರಾದ ಅಣ್ಣಿ ಕೊರಗ(ಸಂದೀಪ್) ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮುದಾಯದ ಮುಖಂಡ ಗಣೇಶ್ ಬಾರ್ಕೂರು ಧ್ವಜಾರೋಹಣ ನೆರವೇರಿಸಿದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಯೋಜನಾ ಸಮನ್ವಯ ಅಧಿಕಾರಿ (ಐಟಿಡಿಪಿ)ಬಸವರಾಜ್ ಎಚ್.ಸಿ., ಸಮುದಾಯದ ಮುಖಂಡ ಬಾಲರಾಜ್ ಕೋಡಿಕಲ್, ಉಡುಪಿ ಕೊರಗ ಸಂಘಟನೆಯ ಸದಸ್ಯೆ ಸುಮಂಗಳ ಮಧುವನ, ಪ್ರಮುಖರಾದ ಶಶಿಕಲಾ, ಸಂಜೀವ ಕೋಡಿಕಲ್, ರಾಮಚಂದ್ರ ನಾರ್ಣಕಜ್ಜೆ ಮತ್ತಿತರರು ಉಪಸ್ಥಿತರಿದ್ದರು. ರಮೇಶ್ ಗುಂಡಾವುಪಡವು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X