ಅನುಗ್ರಹ ಮಹಿಳಾ ಕಾಲೇಜಿಗೆ ಶೇಕಡಾ 100 ಫಲಿತಾಂಶಕ್ಕಾಗಿ ಗೌರವ ಸ್ಮರಣಿಕೆ

ಮಂಗಳೂರು: 2023-24ನೇ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 100 ಫಲಿತಾಂಶ ಸಾಧಿಸಿದ ಗೌರವಾರ್ಥ ಪದವಿ ಪೂರ್ವ ಕಾಲೇಜುಗಳಿಗೆ ಗೌರವ ಸಲ್ಲಿಸುವ ಸ್ಮರಣಿಕೆ ವಿತರಣಾ ಕಾರ್ಯಕ್ರಮ ಜು. 16 ರಂದು ನಡೆಯಿತು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ದಕ್ಷಿಣ ಕನ್ನಡ ಜಿಲ್ಲಾ ಪಿಯು ಕಾಲೇಜುಗಳ ಪ್ರಾಚಾರ್ಯರ ಸಂಘ ಜಂಟಿಯಾಗಿ ಆಯೋಜಿಸಿತ್ತು.
ಈ ಸಂದರ್ಭದಲ್ಲಿ ಶೇಕಡಾ 100 ಫಲಿತಾಂಶ ಸಾಧಿಸಿದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು, ಕಲ್ಲಡ್ಕ ಸಂಸ್ಥೆಯ ಪ್ರಾಂಶುಪಾಲೆಯಾದ ಡಾ. ಹೇಮಲತ ಬಿ ಡಿ ಇವರಿಗೆ ಗೌರವ ಸ್ಮರಣಿಕೆ ನೀಡಲಾಯಿತು.
ಅನುಗ್ರಹ ಎಜ್ಯುಕೇಷನಲ್ ಟ್ರಸ್ಟ್ ಅನ್ನು 2010ರಲ್ಲಿ ಬಂಟ್ವಾಳ ತಾಲ್ಲೂಕಿನ ಕೆಲ ಜವಾಬ್ದಾರಿಯುತ ವ್ಯಕ್ತಿಗಳ ಆಶಯದಂತೆ ಸ್ಥಾಪಿಸಲಾಗಿದ್ದು ,ಈ ಸಂಸ್ಥೆ ಗ್ರಾಮೀಣ ಭಾಗದ ಹೆಣ್ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣದ ಅವಕಾಶವನ್ನು ಕಲ್ಪಿಸುವ ದಿಕ್ಕಿನಲ್ಲಿ ಶ್ಲಾಘನೀಯ ಸೇವೆ ಸಲ್ಲಿಸುತ್ತಿದೆ.
ಸಂಸ್ಥೆಯ ಭಾಗವಾಗಿ 2011-12ನೇ ಸಾಲಿನಲ್ಲಿ ಅನುಗ್ರಹ ಮಹಿಳಾ ಪಿಯು ಕಾಲೇಜು ಸ್ಥಾಪನೆಯಾಗಿದ್ದು, ಪ್ರಸ್ತುತ ಅನುಗ್ರಹ ಮಹಿಳಾ ಕಾಲೇಜು ಪಿಯು ಹಂತದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ .2013-14ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಯಡಿ ಪ್ರಾರಂಭವಾದ ಅನುಗ್ರಹ ಮಹಿಳಾ ಪದವಿ ಕಾಲೇಜು ಪ್ರಸ್ತುತ BA , B COM ಮತ್ತು BCA ಕೋರ್ಸ್‌ಗಳನ್ನು ನಿರ್ವಹಿಸುತ್ತಿದೆ.
ಅನುಗ್ರಹ ವಿದ್ಯಾಸಂಸ್ಥೆಯು ಶೈಕ್ಷಣಿಕ ಶಿಸ್ತು, ನೈತಿಕತೆ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಮೇಲೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಮಾನವೀಯತೆಯ ಬೆಳೆವಣಿಗೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಮರುಶಿಕ್ಷಣದ ಅವಕಾಶ ನೀಡುವುದು, ಸಮುದಾಯ ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ಭಾಗವಹಿಸುವುದು ಈ ಸಂಸ್ಥೆಯ ಸಮಾಜಪರ ಬದ್ಧತೆಯ ಸಂಕೇತವಾಗಿದೆ. ಕಲ್ಲಡ್ಕವನ್ನು ಸಂಸ್ಥೆಯ ಕೇಂದ್ರವಾಗಿ ಆಯ್ಕೆ ಮಾಡಿರುವುದರಿಂದ ಇಡೀ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಸುಲಭವಾಗಿ ಲಭ್ಯವಾಗುವಂತಾಗಿದೆ.







