ಆದಿವಾಸಿ ಆರೋಗ್ಯ ಕಾರ್ಯಕರ್ತೆ, ಸಂಯೋಜಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ Adivasi Health access ರಡಿ ಖ್ಟribal health Navigation Modal ಕಾರ್ಯಕ್ರಮದಡಿ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು ಹಾಗೂ ತಾಲೂಕು ಮಟ್ಟದಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆಯರನ್ನು ತಾತ್ಕಾಲಿಕವಾಗಿ ನೇಮಕ ಮಾಡಬೇಕಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡದ ಕೊರಗ ಮತ್ತು ಮಲೈಕುಡಿಯ ಸಮುದಾಯದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ಆದಿವಾಸಿ ಆರೋಗ್ಯ ಸಂಯೋಜಕರಿಗೆ ಪ್ರತಿ ತಿಂಗಳು 15,000 ರೂ. ಗೌರವಧನ ನೀಡಲಾಗುತ್ತದೆ. ಮಂಗಳೂರು ಮತ್ತು ಸುಳ್ಯ ತಾಲೂಕುಗಳಲ್ಲಿ ತಲಾ ಒಬ್ಬರಂತೆ ಆದಿವಾಸಿ ಆರೋಗ್ಯ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 12,000 ರೂ. ಗೌರವಧನ ನೀಡಲಾಗುತ್ತದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ನಗರದ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಚೇರಿಯಿಂದ ಪಡೆದುಕೊಂಡು ನ.15 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ (ದೂರವಾಣಿ ಸಂಖ್ಯೆ: 0824-2451269) ಸಂಪರ್ಕಿಸಬಹುದು ಎಂದು ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





