Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಂಗ್ಲೆಂಡ್ ಸಂಸತ್ತಿನಲ್ಲಿ ಅನುಮೋದನೆ...

ಇಂಗ್ಲೆಂಡ್ ಸಂಸತ್ತಿನಲ್ಲಿ ಅನುಮೋದನೆ ನಿರೀಕ್ಷೆ: ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಚಂದ್ರು ಅಯ್ಯರ್

ವಾರ್ತಾಭಾರತಿವಾರ್ತಾಭಾರತಿ29 Jan 2026 10:23 PM IST
share
ಇಂಗ್ಲೆಂಡ್ ಸಂಸತ್ತಿನಲ್ಲಿ ಅನುಮೋದನೆ ನಿರೀಕ್ಷೆ: ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಚಂದ್ರು ಅಯ್ಯರ್
ಭಾರತ-ಯು.ಕೆ. ನಡುವಿನ ಆರ್ಥಿಕ ಮತ್ತು ವಾಣಿಜ್ಯ ಒಪ್ಪಂದ

ಮಂಗಳೂರು: ಭಾರತ ಮತ್ತು ಯು.ಕೆ. ನಡುವಿನ ಸಮಗ್ರ ಅರ್ಥಿಕ ಹಾಗೂ ವಾಣಿಜ್ಯ ಒಪ್ಪಂದ (ಸೀಟಾ)ವು ಶೀಘ್ರ ಇಂಗ್ಲೆಂಡ್‌ನ ಸಂಸತ್ತಿನಲ್ಲಿ ಅನುಮೋದನೆ ಪಡೆಯುವ ನಿರೀಕ್ಷೆ ಇದೆ. ಅದರ ಭಾಗವಾಗಿ ಕರ್ನಾಟಕದ ಉದ್ಯಮ ಗಳಿಗೂ ಇಂಗ್ಲಂಡ್‌ನಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ (ಕೇರಳ-ಕರ್ನಾಟಕ) ಚಂದ್ರು ಅಯ್ಯರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಒಪ್ಪಂದದ ಭಾಗವಾಗಿ ಎರಡೂ ದೇಶಗಳ ನಡುವೆ ವಾಣಿಜ್ಯ ಹಾಗೂ ವ್ಯಾಪಾರದಲ್ಲಿ ಸಾಕಷ್ಟು ಪ್ರಗತಿ ನಿರೀಕ್ಷಿಸಬಹುದು. ಕರಾವಳಿಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ, ಅಡಿಕೆ, ಗೋಡಂಬಿ, ಐಸ್‌ಕ್ರೀಂ ಕಂಪನಿಗಳಲ್ಲದೆ ಫಿನ್‌ಟೆಕ್, ಐಟಿಯಂತಹ ಕ್ಷೇತ್ರಗಳಿವೆ, ಇವುಗಳಿಗೆ ಇಂಗ್ಲಂಡ್‌ನಲ್ಲಿ ಅವಕಾಶ ಸಿಗಬಹುದಾಗಿದೆ ಎಂದರು.

*ಶಿಕ್ಷಣ/ಪ್ರವಾಸೋದ್ಯಮ ಅವಕಾಶ: ಇಲ್ಲಿನ ವಿದ್ಯಾರ್ಥಿಗಳಿಗೆ ಇಂಗ್ಲಂಡ್‌ನ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗಕ್ಕೆ ವಿದ್ಯಾರ್ಥಿ ವೀಸಾ ಕಲ್ಪಿಸಲಾಗುತ್ತಿದೆ. ಎರಡು ವರ್ಷದಿಂದ ಯುವ ವೃತ್ತಿಪರರಿಗೆ 3,000 ವೀಸಾ ಗಳನ್ನು ಒದಗಿಸಲಾಗಿದೆ. ಎನ್‌ಐಟಿಕೆ ಸುರತ್ಕಲ್, ನಿಟ್ಟೆ, ಸಹ್ಯಾದ್ರಿಯಂತಹ ಗುಣಮಟ್ಟದ ಶಿಕ್ಷಣ, ಆವಿಷ್ಕಾರಕ್ಕೆ ಉತ್ತೇಜನ ನೀಡುವ ಸಂಸ್ಥೆಗಳ ಬಗ್ಗೆ ಮಾಹಿತಿ ನೀಡುವ ಪ್ರಯತ್ನ ಮಾಡಲಾಗುವುದು ಎಂದರು.

ಸೀಟಾ ಒಪ್ಪಂದಕ್ಕೆ ಭಾರತದ ಸಂಸತ್ತಿನ ಅನುಮೋದನೆ ಸಿಕ್ಕಿದೆ. ಮುಂದೆ ಇಂಗ್ಲಂಡ್‌ನ ಸಂಸತ್ತು ಅಂತಿಮ ಅನುಮೋದನೆ ನೀಡಿದ ಬಳಿಕ ಉಭಯ ರಾಷ್ಟ್ರಗಳ ವ್ಯಾಪಾರೋದ್ಯಮ ಅವಕಾಶಗಳು ಇನ್ನಷ್ಟು ಪ್ರಗತಿ ಕಾಣಲಿವೆ. ಒಪ್ಪಂದಕ್ಕೆ ಮೊದಲು ಉಭಯ ದೇಶಗಳ ನಡುವಿನ ವ್ಯಾಪಾರ 44 ಬಿಲಿಯನ್ ಡಾಲರ್ ಇದ್ದುದು ಇದೀಗ 47ಕ್ಕೇರಿದೆ. ಈ ವಾಣಿಜ್ಯ ಒಪ್ಪಂದವು ಎಐ, ಸೆಮಿಕಂಡಕ್ಟರ್ಸ್, ಕ್ರಿಟಿಕಲ್ ಮಿನರಲ್ಸ್, ಕ್ವಾಂಟಂ ಫಿಸಿಕ್ಸ್, ಬಯೋಟೆಕ್ನಾಲಜಿ, ಫ್ಯೂಚರ್ ಟೆಲಿಕಾಂ ಕ್ಷೇತ್ರಗಳಲ್ಲಿ ಸಹಕಾರಿಯಾಗಲಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಇಂಗ್ಲಂಡ್‌ನ ಶೈಕ್ಷಣಿಕ ಸಂಸ್ಥೆಗಳಿಗೆ ಭಾರತದಲ್ಲಿ ಅವಕಾಶ ಸಿಕ್ಕಿದೆ. ಅದರ ಅಂಗವಾಗಿ ಸೌದಾಂಪ್ಟನ್ ವಿವಿಯ ಕ್ಯಾಂಪಸ್ ಹೊಸದಿಲ್ಲಿಗೆ ಬಂದಿದೆ. ಬೆಂಗಳೂರಿನಲ್ಲಿ ಲಿವರ್‌ಪೂಲ್ ವಿವಿ ಕ್ಯಾಂಪಸ್ ಆರಂಭಗೊಂಡಿದೆ. ಮುಂದೆ ಲ್ಯಾಂಕೆಸ್ಟರ್ ವಿವಿ ಕ್ಯಾಂಪಸ್ ಬರಲಿದೆ ಎಂದು ಚಂದ್ರು ಅಯ್ಯರ್ ಹೇಳಿದರು.

ಈಗಾಗಲೇ ರೋಲ್ಸ್ ರಾಯ್ಸ್, ಆರ್ಮ್ ಹೋಲ್ಡಿಂಗ್ಸ್, ನಾಟ್ ವೆಸ್ಟ್ ಕಂಪನಿಗಳು ಬೆಂಗಳೂರಿನಲ್ಲಿ ಕಾರ್ಯಾ ಚರಿಸುತ್ತಿವೆ. ಭವಿಷ್ಯದಲ್ಲಿ ಬಿಯಾಂಡ್ ಬೆಂಗಳೂರು ಯೋಜನೆಯಡಿ ಮಂಗಳೂರಿನಲ್ಲೂ ಇಂತಹ ಸಂಸ್ಥೆಗಳ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಆರಂಭಿಸುವ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದರು.

Tags

ApprovalexpectedUKParliament
share
ವಾರ್ತಾಭಾರತಿ
ವಾರ್ತಾಭಾರತಿ
Next Story
X