Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಶೋಕ ಜನ-ಮನ ಕಾರ್ಯಕ್ರಮ :...

ಅಶೋಕ ಜನ-ಮನ ಕಾರ್ಯಕ್ರಮ : ನೆಕ್ಕಿಲಾಡಿಯಲ್ಲಿ ಆಮಂತ್ರಣ ಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ13 Oct 2025 9:57 PM IST
share
ಅಶೋಕ ಜನ-ಮನ ಕಾರ್ಯಕ್ರಮ : ನೆಕ್ಕಿಲಾಡಿಯಲ್ಲಿ ಆಮಂತ್ರಣ ಪತ್ರ ವಿತರಣೆ

ಉಪ್ಪಿನಂಗಡಿ : ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ದೀಪಾವಳಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವ ವಸ್ತ್ರ ವಿತರಣೆ ಕಾರ್ಯಕ್ರಮ, ʼಅಶೋಕ ಜನ- ಮನʼ ಕಾರ್ಯಕ್ರಮವು ಈ ಬಾರಿ ಅ.20ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ 34 ನೆಕ್ಕಿಲಾಡಿಯ ಮೈಂದಡ್ಕ ಮೈದಾನದಲ್ಲಿ ನಡೆಯಿತು.

ಆಮಂತ್ರಣ ಪತ್ರಿಕೆ ವಿತರಿಸಿ ಮಾತನಾಡಿದ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‍ನ ನಿಕಟಪೂರ್ವಾಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಈ ಬಾರಿ ಅ.20ರಂದು ಪುತ್ತೂರು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯಲಿದ್ದು, ಸಾಮೂಹಿಕ ಸಹಭೋಜನದೊಂದಿಗೆ ಮಕ್ಕಳಿಗೆ, ಮಾತೆಯರಿಗೆ, ಪುರುಷರಿಗೆ ದೀಪಾವಳಿಯ ಉಡುಗೊರೆಯಾಗಿ ಈ ಬಾರಿ ಒಬ್ಬರಿಗೆ ಸ್ಟೀಲ್ ತಟ್ಟೆ, ಲೋಟ ಹಾಗೂ ಪಿಂಗಾಣಿ, ಚಮಚ ಹಾಗೂ ಬಾತ್ ಟವೆಲ್ ಅನ್ನು ಹಂಚಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸೇರಿದಂತೆ ರಾಜಕೀಯ ನಾಯಕರು ಭಾಗವಹಿಸಲಿದ್ದು, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದರೊಂದಿಗೆ ಗೂಡು ದೀಪ ಸ್ಪರ್ಧೆಯೂ ನಡೆಯಲಿದೆ. ಆದ್ದರಿಂದ ಎಲ್ಲರೂ ಇದರಲ್ಲಿ ಭಾಗವಹಿಸಬೇಕು ಎಂದರು.

34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿ ಮಿನೇಜಸ್ ಮಾತನಾಡಿ, ಬಡವರ ಸೇವೆಗಾಗಿಯೇ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಈ ಟ್ರಸ್ಟ್ ನಿರ್ಮಾಣವಾಗಿದ್ದು, ಟ್ರಸ್ಟ್ ವತಿಯಿಂದ ಈಗಾಗಲೇ ಪಕ್ಷ, ಜಾತಿ, ಧರ್ಮ ನೋಡದೇ ಬಡವರಿಗಾಗಿ ಹಲವು ಸೇವೆಗಳನ್ನು ಮಾಡಲಾಗಿದೆ. ಈ ಕಾರ್ಯಕ್ರಮ ಕೂಡಾ ಪಕ್ಷಾತೀತ ಹಾಗೂ ಧರ್ಮಾತೀತ ಕಾರ್ಯಕ್ರಮವಾಗಿದ್ದು, ಈ ಬಾರಿ ಒಂದು ಲಕ್ಷ ಜನರನ್ನು ಸೇರಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದ್ದರಿಂದ ನಿಮ್ಮ ಮನೆ ಕಾರ್ಯಕ್ರಮವೆಂದೇ ತಿಳಿದು ಎಲ್ಲರೂ ಇದರಲ್ಲಿ ಭಾಗವಹಿಸಬೇಕು. ನಿಮ್ಮ ಹತ್ತಿರದ ಮನೆಯವರನ್ನು ಕರೆ ತರಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ರಾಧಾಕೃಷ್ಣ ನಾಯಕ್, ಪ್ರಮುಖರಾದ ಉದಯಕುಮಾರ್, ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಅಝೀಝ್ ಬಸ್ತಿಕ್ಕಾರ್, ಜತೀಂದ್ರ ಶೆಟ್ಟಿ, ಅಸ್ಕರ್ ಅಲಿ, ಅಬ್ದುರ್ರಹ್ಮಾನ್ ಯುನಿಕ್, ಹಮೀದ್ ಪಿ.ಟಿ., ಇಸಾಕ್, ಅಬ್ದುಲ್ ಖಾದರ್ ಆದರ್ಶನಗರ, ಬಾಬು ನಾಯ್ಕ, ಸುಹಾಸ್ ಕೊಳಕ್ಕೆ, ಗಣೇಶ್ ನಾಯಕ್, ಅಶೋಕ್ ನಾಯಕ್, ಜಯಶೀಲ ಶೆಟ್ಟಿ, ಸುರೇಶ್ ದರ್ಬೆ, ಬಬಿತಾ ಮಿನೇಜಸ್, ಅರುಣ್ ಬೀತಲಪ್ಪು, ಶಿವರಾಮ ಶೆಟ್ಟಿ, ಲೀಲಾ ಬೀತಲಪ್ಪು ಮತ್ತಿತ್ತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X