Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.23 ರಂದು ‘ಅಸ್ಮಿತಾ’ ಮಹಿಳೆಯರ ಕಿಕ್...

ನ.23 ರಂದು ‘ಅಸ್ಮಿತಾ’ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ21 Nov 2025 3:16 PM IST
share

ಮಂಗಳೂರು, ನ.21: ರಾಜ್ಯಮಟ್ಟದ ಖೇಲೋ ಇಂಡಿಯಾ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ ‘ಅಸ್ಮಿತಾ’ ನ.23ರಂದು ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟವನ್ನು ಬೆಳಗ್ಗೆ 9ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದು ಫಾದರ್ ಮುಲ್ಲರ್ ಸಂಸ್ಥೆಯ ಆಡಳಿತಾಧಿಕಾರಿ ವಂ.ಫಾ. ಮೈಕಲ್ ಸಾಂತುಮಯೋರ್ ಆಶೀರ್ವಚನ ನೀಡಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್‌ನ ಚೇರ್‌ಮೆನ್ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.

ದ.ಕ ಜಿಲ್ಲೆಯ 150 ಮಂದಿ ಸೇರಿದಂತೆ ಒಟ್ಟು 300 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಾಕ್ಸಿಂಗ್ ಮತ್ತು ಕರಾಟೆಯ ಸಮ್ಮಿಳಿತವನ್ನು ಒಳಗೊಂಡ ಕಿಕ್ ಬಾಕ್ಸಿಂಗ್ ಜಪಾನ್ ನಲ್ಲಿ ಉಗಮವಾಗಿ ಯುರೋಪ್ ಮತ್ತು ಅಮೆರಿಕಾದಲ್ಲಿ ಪ್ರಸಿದ್ದವಾಗಿದೆ. ಇದು ಅಂತಾರಾಷ್ಟ್ರೀಯ ಒಲಿಂಪಿಕ್ ಅಸೋಸಿಯೇಷನ್‌ನ ಮಾನ್ಯತೆ ಪಡೆದಿದೆ. ಭಾರತ ಸರಕಾರ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರ ಕೂಡ ಮಾನ್ಯತೆ ನೀಡಿವೆ. ಖೇಲೋ ಇಂಡಿಯಾದ ಮೂಲಕ ಭಾರತೀಯ ಕ್ರೀಡಾ ಪ್ರಾಧಿಕಾರ ಅಸ್ಮಿತಾ ಹೆಸರಿನಲ್ಲಿ ಹೆಣ್ಣು ಮಕ್ಕಳಿಗಾಗಿ ನಗರ/ ಜಿಲ್ಲಾ ಮಟ್ಟದಲ್ಲಿ, ಅನಂತರ ರಾಜ್ಯ, ವಲಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸ್ಪರ್ಧೆ ಆಯೋಜಿಸುತ್ತದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖೇಲೋ ಇಂಡಿಯಾದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆ ನಡೆಸುವ ಅವಕಾಶ ದ.ಕ ಸಂಸ್ಥೆಗೆ ದೊರೆತಿದೆ. ದ.ಕ ತಂಡ ರಾಜ್ಯದಲ್ಲಿ ಮುಂಚೂಣಿಯ ತಂಡವಾಗಿದೆ. ಕಳೆದ 5 ವರ್ಷಗಳಲ್ಲಿ ಜಿಲ್ಲೆಯ ಹಲವಾರು ಮಂದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ ಪದಕ ವಿಜೇತರಾಗಿದ್ದಾರೆ ಎಂದು ಸತ್ಯಜಿತ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಷನ್ ಅಧ್ಯಕ್ಷ ನಿತಿನ್ ಎನ್. ಸುವರ್ಣ, ಕಾರ್ಯದರ್ಶಿ ಸಂಪತ್ ಕುಮಾರ್, ಐಕೆಎಂಎ ಶಿಕ್ಷಕ ಶಿವಪ್ರಸಾದ್, ಸದಸ್ಯ ನಿರಂಜನ್ ಎಂ, ಅಂತಾರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಆಟಗಾರ ರಾಜೇಶ್ ಕೆ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X