Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ...

ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ ಸಮುದಾಯದ ಮೇಲಿನ ದಾಳಿ ಖಂಡನೀಯ : ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ

ವಾರ್ತಾಭಾರತಿವಾರ್ತಾಭಾರತಿ27 Dec 2025 2:44 PM IST
share
ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ ಸಮುದಾಯದ ಮೇಲಿನ ದಾಳಿ ಖಂಡನೀಯ : ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ

ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶಾದ್ಯಂತ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಮತ್ತು ಸಂಬಂಧಪಟ್ಟ ಸರಕಾರಗಳು ಸಮುದಾಯದ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ ಪ್ರಕಟನೆ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂ. ಜೆ. ಬಿ. ಸಲ್ಡಾನಾ ಮತ್ತು ರೋಯ್ ಕ್ಯಾಸ್ತಲಿನೋ, ಕೇರಳದ ಪಾಲಕ್ಕಾಡ್‌ನಲ್ಲಿ ಕ್ರಿಸ್ಮಸ್ ಕ್ಯಾರಲ್ಸ್ ತಂಡದ ಮೇಲೆ ಮತಿಯವಾದಿಗಳು ಹಲ್ಲೆ ನಡೆಸಿದ್ದು, ಇನ್ನು ಕೆಲವೆಡೆ ಕ್ರಿಸ್ಮಸ್ ಸಂಬಂಧಿತ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರಿಗೆ ತಡೆಯೊಡ್ಡಿ ಹಿಂಸೆ ನೀಡಲಾಗಿದೆ. ನವದೆಹಲಿಯಲ್ಲಿ ಸಾಂತಾಕ್ಲಾಸ್ ಟೋಪಿ ಧರಿಸಿದ್ದ ಕ್ರಿಶ್ಚಿಯನ್ ಮಹಿಳೆಯರು ಮತ್ತು ಮಕ್ಕಳ ಗುಂಪಿನ ವಿರುದ್ದ ಮತಾಂತರದ ಆರೋಪ ಹೊರಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಅನುಚಿತವಾಗಿ ವರ್ತನೆ ನಡೆಸಿದ್ದಾರೆ. ಬೆಂಗಳೂರಿನ

ಕಾರ್ಯಕ್ರಮವೊಂದಕ್ಕೆ ಉದ್ದೇಶಪೂರ್ವಕವಾಗಿ ಪ್ರವೇಶ ಮಾಡಿ ಸತ್ಯ ನಿಷ್ಠ ಆರ್ಯ ಮತ್ತು ಆತನ ಬೆಂಬಲಿಗರು ಚರ್ಚಿನ ಪಾದ್ರಿಯೋರ್ವರಿಗೆ ಬೆದರಿಕೆ ಹಾಕಿರುವುದು ಸಂವಿಧಾನದ ಆಶಯಗಳ ವಿರುದ್ದ ನಡೆಯುತ್ತಿರುವ ಹಲ್ಲೆಯಾಗಿದೆ. ದೇಶದ ಪ್ರಧಾನಿ ದೆಹಲಿ ಚರ್ಚಿಗೆ ಹೋಗಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಿದ್ದರೆ ಅದೇ ಸಮಯದಲ್ಲಿ ಹೊರಗಡೆ ದೇಶದ ವಿವಿಧ ರಾಜ್ಯಗಳಲ್ಲಿ ಮತಾಂಧ ಶಕ್ತಿಗಳು ಕ್ರಿಸ್ಮಸ್ ಆಚರಣೆಯನ್ನು ಧ್ವಂಸಗೊಳಿಸುತ್ತಿರುವುದು ಖಂಡನೀಯ. ಇತ್ತೀಚಿನ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಕೇರಳ, ನವದೆಹಲಿ, ಉತ್ತರಪ್ರದೇಶ, ರಾಜಸ್ಥಾನ, ಉತ್ತರಾಖಂಡ ಹಾಗೂ ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತಾಂಧ ಶಕ್ತಿಗಳಿಂದ ಹಲ್ಲೆ, ಗಲಾಟೆ ಹಾಗೂ ಹಬ್ಬದ ಸಂಭ್ರಮವನ್ನು ಹಾಳು ಮಾಡುವ ಘಟನೆಗಳು ನಡೆದಿರುವುದು ಸಂವಿಧಾನಾತ್ಮಕ ಮೌಲ್ಯಗಳಲ್ಲಿ ನಂಬಿಕೆ ಇಟ್ಟು

ಬದುಕುತ್ತಿರುವ ಕ್ರೈಸ್ತ ಸಮುದಾಯಕ್ಕೆ ತೀವ್ರ ನೋವು ತಂದಿದೆ. ಕ್ರೈಸ್ತರ ಸಂಪ್ರದಾಯಗಳ ಮೇಲೆ ಇತ್ತೀಚೆಗೆ ನಡೆದ ದಾಳಿಗಳು ಕೇವಲ ಒಂದು ಸಮುದಾಯದ ಮೇಲಿನ ಹಲ್ಲೆಯಲ್ಲ, ಬದಲಾಗಿ ಭಾರತದ ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿಗಳಾಗಿವೆ. ಆರಾಧನೆಯ ಸ್ವಾತಂತ್ರ್ಯಕ್ಕೆ ಬೆದರಿಕೆ ಹಾಕುವುದು ಸಂವಿಧಾನ ವಿರೋಧಿ ಕೃತ್ಯವಾಗಿದ್ದು, ಇದು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಧಕ್ಕೆ ತರುವಂತಹದ್ದು.

ಈ ದೇಶದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಪಾಲನೆ ಮಾಡಲು ಸಂವಿಧಾನ ಸೂಕ್ತ ಅವಕಾಶ ನೀಡಿದ್ದು ಜಾತ್ಯಾತೀತ ರಾಷ್ಟ್ರದಲ್ಲಿ ನಡೆಯುತ್ತಿರುವ ಇಂತಹ ದೌರ್ಜನ್ಯಗಳು ಖಂಡನೀಯವಾಗಿದೆ. ಹಬ್ಬದ ಆಚರಣೆಯ ಸಂದರ್ಭದಲ್ಲಿ ಅಶಾಂತಿಯನ್ನು ಸೃಷ್ಠಿಸುವ ಹುನ್ನಾರ ಮೂಲಭೂತವಾದಿ ಗುಂಪುಗಳು ಹೊಂದಿದ್ದು ಇಂತಹವರ ವಿರುದ್ದ ಸರಕಾರಗಳು ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ಮೂಲಕ ದೇಶದಲ್ಲಿ ಕ್ರೈಸ್ತ ಬಾಂಧವರು ಶಾಂತಿಯುತವಾಗಿ ನೆಮ್ಮದಿಯಿಂದ ಬದುಕು ಸಾಗಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕ್ರಮವಹಿಸಬೇಕು ಎಂದು ಅವರು ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X