Mangaluru | ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಸಿಐಟಿಯು ಅಗ್ರಹ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಬಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಡೆದ ಜನಾಂಗೀಯ ಹಲ್ಲೆಯನ್ನು ಸಿಐಟಿಯು ದ.ಕ ಜಿಲ್ಲಾ ಸಮಿತಿ ಖಂಡಿಸಿದೆ.
ಸಂಘ ಪರಿವಾರ ದೇಶದಲ್ಲಿ ಹಬ್ಬಿಸುವ ಸುಳ್ಳು ಸುದ್ದಿಗಳನ್ನು ಸಂಘಿ ಮನಸ್ಥಿತಿಯ ತಳಮಟ್ಟದ ಕಾರ್ಯಕರ್ತರು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎಂಬುದಕ್ಕೆ ಕೂಳೂರಿನ ಈ ಘಟನೆ ಸಾಕ್ಷಿಯಾಗಿದೆ. ತಕ್ಷಣ ಪೊಲೀಸ್ ಇಲಾಖೆಯು ಜನಾಂಗೀಯ ದಾಳಿ ನಡೆಸಿದ ಹಲ್ಲೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಸರಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಲಸೆ ಕಾರ್ಮಿಕರನ್ನು ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಒತ್ತಾಯಿಸಿದ್ದಾರೆ.
Next Story





