ಅತ್ತಾವರ: ಮಳೆಗೆ ಧರೆಗುರುಳಿದ ಬೃಹತ್ ಮರ

ಮಂಗಳೂರು, ಜೂ. 26: ಭಾರೀ ಮಳೆಯ ಹಿನ್ನೆಲೆಯಲ್ಲಿ ಅತ್ತಾವರ ಕಾಪ್ರಿಗುಡ್ಡದ ಬ್ರಿಟ್ಟೋಲೇನ್ ಬಳಿ ವಾಣಿಜ್ಯ ಸಂಕೀರ್ಣದ ತಳಪಾಯದ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಮೇಲ್ಭಾಗದಲ್ಲಿದ್ದ ಬೃಹತ್ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ.
ಮಳೆಯ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕಾಮಗಾರಿ ನಿಲ್ಲಿಸಲಾಗಿದ್ದ ಕಾರಣ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story





