Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.1-2: 'ಆಳ್ವಾಸ್ ಪ್ರಗತಿ-2025' ಬೃಹತ್...

ಆ.1-2: 'ಆಳ್ವಾಸ್ ಪ್ರಗತಿ-2025' ಬೃಹತ್ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ25 July 2025 7:56 PM IST
share
ಆ.1-2: ಆಳ್ವಾಸ್ ಪ್ರಗತಿ-2025 ಬೃಹತ್ ಉದ್ಯೋಗ ಮೇಳ

ಮಂಗಳೂರು: ಆಳ್ವಾಸ್ ಪ್ರಗತಿ 2025ರ 15ನೇ ಆವೃತ್ತಿಯ ಉದ್ಘಾಟನೆಯು ಆಗಸ್ಟ್ 1 ಮತ್ತು 2ರಂದು ವಿದ್ಯಾಗಿರಿಯಲ್ಲಿ ಬೆಳಿಗ್ಗೆ 9.30 ಕ್ಕೆ ನಡೆಯಲಿದ್ದು, ಸಚಿವ ದಿನೇಶ್ ಗುಂಡುರಾವ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಮಂಗಳೂರು ವಿವಿಯ ಕುಲಪತಿ ಡಾ ಪಿಎಲ್ ಧರ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಶಾಸಕ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಜನಪ್ರತಿನಿಧಿಗಳ ಉಪಸ್ಥಿತಿ ಇರಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಆಳ್ವಾಸ್ ಪ್ರಗತಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ ಉದ್ಯೋಗಮೇಳವು ವೃತ್ತಿ ಆಕಾಂಕ್ಷಿಗಳಿಗೆ ಸದಾ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದೆ. ಈ ಮೇಳವು ವಿಶೇಷವಾಗಿ ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಉದ್ಯೋಗ ಅವಕಾಶಕೊಡಿಸುವ ಮಹತ್ತರ ಕಾರ್ಯ ವನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿದೆ. ಇಲ್ಲಿವರೆಗೆ ಆಳ್ವಾಸ್ ಉದ್ಯೋಗ ಮೇಳಗಳ ಮೂಲಕ ಒಟ್ಟು 36,151 ಉದ್ಯೋಗಗಳನ್ನು ನೀಡಲಾಗಿದೆ ಹಾಗೂ 61,517 ಅಭ್ಯರ್ಥಿಗಳನ್ನು ವಿವಿಧ ಕಂಪೆನಿಗಳು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ ಎಂದು ವಿವೇಕ್ ಆಳ್ವ ತಿಳಿಸಿದ್ದಾರೆ.

*ಆಳ್ವಾಸ್ ಸಂಸ್ಥೆಯ ವತಿಯಿಂದ ಸನ್ಮಾನ:-

ಅಲ್‌ಕಾರ್ಗೋ ಲಾಜಿಸ್ಟಿಕ್ಸ್ನ ಅಧ್ಯಕ್ಷರಾದ ಶಶಿಕಿರಣ್ ಶೆಟ್ಟಿ, ದುಬೈನ ಫಾರ್ಚುನ್ ಗ್ರೂಪ್ ಆಫ್ ಹೊಟೇಲ್ಸ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ, ಸೌದಿ ಅರೇಬಿಯದ ಎಕ್ಸಪರ್ಟೈಸ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆಎಸ್ ಶೇಖ್ ಕರ್ನಿರೆ, ಬಿಗ್ ಬ್ಯಾಗ್ಸ್ ಇಂಟರ್‌ನ್ಯಾಷನಲ್ ಪ್ರೈವೆಟ್ ಲಿಮಿಟೆಡ್‌ನ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಶ್ ಕಾಮತ್, ರೋಹನ್ ಕಾರ್ಪೋರೇಶನ್ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಹನ್ ಮೊಂತೇರೋ, ನೀವಿಯಸ್ ಸೊಲ್ಯೂಷನ್ಸ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಯೋಗ್ ಶೆಟ್ಟಿ ಇವರುಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದವರು ತಿಳಿಸಿದ್ದಾರೆ.

ಆಳ್ವಾಸ್ ಪ್ರಗತಿ 2025:-‌ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಈ ಬಾರಿ 15ನೇ ಆವೃತ್ತಿಯದ್ದಾಗಿದ್ದು, ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಇಎಸ್, ಹೆಲ್ತ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟ್ಯಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ.

ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಯಾವುದೇ ಕೋರ್ಸಗಳನ್ನು 2025ರ ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವವರು ಹಾಗೂ ಅನುಭವವಿರುವ ಅಭ್ಯರ್ಥಿಗಳು ಈ ಮೇಳದಲ್ಲಿ ಮುಕ್ತವಾಗಿ ಭಾಗವಹಿಸಬಹುದು.

ವೆಬ್ ಸೈಟ್ ನಲ್ಲಿ ಉಚಿತವಾಗಿ ನೋಂದಾವಣೆ ಮಾಡಬಹುದಾಗಿದೆ.

ಆಳ್ವಾಸ್ ಪ್ರಗತಿ - 2025ರ ವಿಶೇಷತೆಗಳು:

* ಈ ಬಾರಿಯ ಆಳ್ವಾಸ್ ಪ್ರಗತಿಯಲ್ಲಿ ಈಗಾಗಲೇ 285 ಕಂಪೆನಿಗಳ ನೋಂದಾವಣೆಯನ್ನು ಖಾತ್ರಿಪಡಿಸಲಾಗಿದೆ.

* 15930+ ಉದ್ಯೋಗ ಅವಕಾಶಗಳು ಇರಲಿವೆ.ಮುಂಬೈ, ಚೆನ್ನೈ, ಹೈದರಾಬಾದ್, ಕೇರಳ, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಮತ್ತು ಶಿವಮೊಗ್ಗ ಮುಂತಾದ ಮಹಾನಗರಗಳಲ್ಲಿ ಹಾಗೂ ಮಂಗಳೂರು, ಉಡುಪಿ, ಬೆಳ್ತಂಗಡಿ, ಪುತ್ತೂರು ಮುಂತಾದ ಸ್ಥಳೀಯ ಪ್ರದೇಶ ಗಳಲ್ಲಿ ಉದ್ಯೋಗ ಅವಕಾಶಗಳು ಇರಲಿವೆ.

* ಹೂರ ರಾಜ್ಯದ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸುವ ಆಕಾಂಕ್ಷಿಗಳಿಗೆ ಜುಲೈ 31ರಿಂದ ಉಚಿತ ವಾಸ್ತವ್ಯ ವ್ಯವಸ್ಥೆ ಕಲ್ಪಿಸಲಾಗುವುದು

* ಐಟಿಐ/ ಡಿಪ್ಲೋಮಾ ಅಭ್ಯರ್ಥಿಗಳಿಗೆ ಉಚಿತ ಬಸ್‌ನ ವ್ಯವಸ್ಥೆ ಮಾಡಲಾಗಿದೆ

* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9741440490 / 7975223865/ 9611750531

ಸೂಚನೆ: ಐಟಿಐ, ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಮತ್ತು ಅದಕ್ಕಿಂತ ಕಡಿಮೆ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ಹೊರತು ಪಡಿಸಿ, ಎಲ್ಲರಿಗೂ ನೋಂದಣಿ ಕಡ್ಡಾಯವಾಗಿದೆ ಎಂದು ವಿವೇಕ್ ಆಳ್ವ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದತರಬೇತಿ ಮತ್ತು ನಿಯೋಜನೆ, ಮುಖ್ಯಸ್ಥ ರಾದ ರಂಜಿತಾ ಆಚಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಆಳ್ವಾಸ್ ಕಾಲೇಜು ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪೆನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್‌ಸೈಟ್‌ WWW.alvas pragati.com ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ htt://alvaspragati.com/ Candidate Registration ವೆಬ್ಸೈಟ್ ನಲ್ಲಿ ಉಚಿತವಾಗಿ ನೋಂದಾವಣೆ ಮಾಡಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X