ಆ.15: ದ.ಕ.ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಮಂಗಳೂರು, ಆ.14: ದ.ಕ.ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಗ್ರಾಮಾಂತರ ಪ್ರದೇಶಕ್ಕಿಂತ ನಗರದಲ್ಲೇ ದಿನವಿಡೀ ಬಿಡುವಿಲ್ಲದೆ ಮಳೆ ಸುರಿದಿದೆ. ಹವಾಮಾನ ಇಲಾಖೆಯು ಆ.15ರಂದು ದ.ಕ.ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗಿನವರೆಗೆ 57.1ಮಿಮಿ ಮಳೆ ದಾಖಲಾಗಿತ್ತು. ಆ.17ರಿಂದ 20ರವರೆಗೆ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಬಳಿಕ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Next Story





