ಆ.11: ಗೃಹ ಜ್ಯೋತಿ ಯೋಜನೆಗೆ ಚಾಲನೆ

ಮಂಗಳೂರು : ಉಚಿತ ಬೆಳಕು, ಸುಸ್ಥಿರ ಬದುಕಿಗಾಗಿ ಸರಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಗೆ ಆ.11ರ ಮಧ್ಯಾಹ್ನ 12ಕ್ಕೆ ಪುತ್ತೂರಿನ ಪುರಭವನದಲ್ಲಿ ಚಾಲನೆ ನೀಡಲಾಗುತ್ತಿದೆ.
ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಇಂಧನ ಸಚಿವ ಕೆ.ಜೆ.ಚಾರ್ಜ್ ಭಾಗವಹಿಸುವರು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





