ಬಿ ಸಿ ರೋಡ್: ಬೈಕ್ ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

ಬಂಟ್ವಾಳ: ರಾಂಗ್ ಸೈಡ್ ನಿಂದ ಬಂದ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡ್ ಸಮೀಪದ ತಲಪಾಡಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿರುವುದಾಗಿ ವರದಿಯಾಗಿದೆ.
ವಿಟ್ಲ ಮೂಲದ ನಿವಾಸಿ, ಮಿಫ್ಸ್ ಸಂಸ್ಥೆಯ ವಿದ್ಯಾರ್ಥಿ ಮಿದ್ಲಾಜ್ ಗಂಭೀರ ಗಾಯಗೊಂಡ ಬೈಕ್ ಸವಾರ. ಬೈಕ್ ನಲ್ಲಿದ್ದ ಸಹ ಸವಾರನೂ ಗಾಯಗೊಂಡಿದ್ದು, ಹೆಸರು ತಿಳಿದುಬಂದಿಲ್ಲ.
ಇವರಿಬ್ಬರೂ ಅಡ್ಯಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಮಿಫ್ಸ್ ಸಂಸ್ಥೆಯಲ್ಲಿ ಫೈರ್ ಅಂಡ್ ಸೇಫ್ಟಿ ಕೋರ್ಸ್ ಕಲಿಯುತ್ತಿದ್ದರು. ಎಂದಿನಂತೆ ಕೋರ್ಸ್ ಮುಗಿಸಿ ಅಡ್ಯಾರ್ ನಿಂದ ವಿಟ್ಲದತ್ತ ಬೈಕ್ ನಲ್ಲಿ ತೆರಳುತ್ತಿದ್ದಾಗ ತಲಪಾಡಿಯಲ್ಲಿ ರಾಂಗ್ ಸೈಡ್ ನಲ್ಲಿ ಅತೀ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಘಟನೆಯಿಂದ ಹೊಸ ಬೈಕ್ ನಜ್ಜುಗುಜ್ಜಾಗಿದೆ.
ಘಟನೆಯಿಂದ ರಾಷ್ಟ್ರಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ತಪ್ಪಿಸುವ ನಿಟ್ಟಿನಲ್ಲಿ ತಲಪಾಡಿಯ ಸರ್ವಿಸ್ ರಸ್ತೆಗೆ ವಾಹನಗಳು ಹೋಗುವಾಗ ಇಂತಹ ಅವಘಡ ಸಂಭವಿಸುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.





