ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್, ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಆಯ್ಕೆ

ಕಡಬ, ಡಿ.25. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್. ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಲೋಕೇಶ್ ಬಿ.ಎನ್., ಕಾರ್ಯದರ್ಶಿಯಾಗಿ ಸುಧಾಕರ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರವೀಣ್ ರಾಜ್ ಅವರು ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿಜಯ ಕುಮಾರ್, ರತ್ನಾಕರ, ಹರೀಶ್ ಬಿ., ನಾಗರಾಜ್ ಎನ್.ಕೆ., ಸ್ವಾತಿ ಕೆ.ವಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Next Story





