Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ವಿಸ್ಡಮ್ ಆಂಗ್ಲ ಮಾಧ್ಯಮ...

ಬಂಟ್ವಾಳ: ವಿಸ್ಡಮ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ28 Dec 2025 12:26 AM IST
share
ಬಂಟ್ವಾಳ: ವಿಸ್ಡಮ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

ಬಂಟ್ವಾಳ: ಇಲ್ಲಿಗೆ ಸಮೀಪದ (ಬಂಟ್ವಾಳ ತಾಲೂಕಿನ) ಕಡೇಶಿವಾಲಯ ಗ್ರಾಮದಲ್ಲಿರುವ ವಿಸ್ಡಮ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಬುಡೋಳಿ (ಅಬುಧಾಬಿ) ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಶಾಲಾ ಆವರಣದಲ್ಲಿ ಆಚರಿಸಲಾಯಿತು.

ಡಿ. ವೈ. ಪಾಟೀಲ್ ಅಂತರ್ ರಾಷ್ಟ್ರೀಯ ವಿಶ್ವ ವಿದ್ಯಾನಿಲಯ ಪುಣೆ (ಮಹಾರಾಷ್ಟ್ರ ) ಕುಲಸಚಿವರಾದ ಡಾ. ಬೀರಾನ್ ಮೊಯ್ದಿನ್ ಹಾಗೂ ಸಮಾರಂಭದ ಉದ್ಘಾಟಕರಾಗಿ ಗ್ಲೋಬಲ್ ಗ್ಯಾನ್ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿರುವ ಡಾ. ರುಕ್ಸಾನಾ ಹಸನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂಧರ್ಭದಲ್ಲಿ, ಕಡೇಶಿವಾಲಯ ಗ್ರಾಮದ ಅಧ್ಯಕ್ಷೆ ಭಾರತಿ, ಉಪಾಧ್ಯಕ್ಷ ಸುರೇಶ್ ಪೂಜಾರಿ ಕನ್ನೋಟ್, ಗ್ರಾಮಾಭಿವೃದ್ಧಿ ಅಧಿಕಾರಿಯವರಾದ ಸುನಿಲ್ ಕುಮಾರ್, ವಿಸ್ಡಮ್ ಶಾಲಾ ಸಂಚಾಲಕರಾದ ಅಬ್ದುಲ್ ಖಾದರ್ ಕುಕ್ಕಾಜೆ, ಮುಖ್ಯ ಶಿಕ್ಷಕಿ ಆಮಿನಾ ಬಾನು, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆತಿ ರಾಜೇಶ್ವರಿ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ಮುರ್ಷಿದಾ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ರುಕ್ಸಾನಾ ಹಸನ್, ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವಂತಹ ಪ್ರತಿಭೆಯನ್ನು ಹೊರಹಾಕುವ ಸಂದರ್ಭ ಇದು ಎಂದು ಮಾರ್ಗದರ್ಶನವನ್ನು ನೀಡಿದರು. ಮಾತ್ರವಲ್ಲದೆ, ಅವರ ಪೋಷಕರಿಗೂ ತಮ್ಮ ಮಕ್ಕಳ ಪ್ರಗತಿಗೆ ಪೂರಕವಾದ ಕೆಲವೊಂದು ಹಿತವಚನಗಳನ್ನು ನುಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಡಾ. ಬೀರಾನ್ ಮೊಯ್ದಿನ್ ಬಿ.ಯಂ.ರವರು ಮಾತನಾಡಿ, ಈ ವಿದ್ಯಾ ಸಂಸ್ಥೆಯು ನೆಲೆಗೊಂಡಿರುವ 'ಗಡಿಯಾರ' ಎಂಬ ಪರಿಸರವು ತನ್ನ ತವರೂರು ಎಂಬುವುದನ್ನು ನೆನಪಿಸಿಕೊಂಡು. ಈ ಊರಿನ ಬಗೆಗಿನ ಪ್ರೀತಿ ಮತ್ತು ಆತ್ಮೀಯತೆ ಅಷ್ಟೊಂದು ದೂರದಿಂದ ಪ್ರಯಾಣ ಮಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಲ್ಲಿ ನನಗೆ ಪ್ರೇರಣೆಯಾಯಿತು ಎಂದರು.

ಕಡೇಶಿವಾಲಯ ಗ್ರಾಮದ ಪಂಚಾಯತ್ ಅಧ್ಯ ಭಾರತಿಯವರು ಮಾತನಾಡಿ, ಕಡೇಶಿವಾಲಯ ಗ್ರಾಮದ ಏಕೈಕ ಆಂಗ್ಲ ಮಾಧ್ಯಮ ಶಾಲೆಯಾಗಿರುವ ವಿಸ್ಡಮ್ ವಿದ್ಯಾಸಂಸ್ಥೆಯ ಬೆಳವಣಿಗೆ ಹಾಗೂ ಅದಕ್ಕಾಗಿ ಆಡಳಿತ ಮಂಡಳಿಯ ಶ್ರಮವನ್ನು ಶ್ಲಾಘಿಸಿದರು. ಸಂಸ್ಥೆಗೆ, ಸ್ಥಳೀಯಾಡಳಿತ ಪಂಚಾಯತ್ ವತಿಯಿಂದ ಸರ್ವ ರೀತಿಯ ಸಹಕಾರವನ್ನು ಒದಗಿಸುವ ಭರವಸೆಯನ್ನು ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಸುನಿಲ್ ಕುಮಾರ್ ಈ ಶಾಲೆಯ ಹೆಸರನ್ನು ಇನ್ನಷ್ಟು ಎತ್ತರಕ್ಕೆ ತಲುಪಲೆಂದು ಶುಭ ಹಾರೈಸಿದರು. ಅಲ್ಲದೆ ಶೈಕ್ಷಣಿಕ ರಂಗಕ್ಕೆ ನೀಡುವ ಸರಕಾರದ ಯಾವುದೇ ಯೋಜನೆಗಳನ್ನು ಕ್ಷಿಪ್ರವಾಗಿ ಸದುಪಯೋಗವಾಗಿಸಲು ಸಹಕರಿಸುವ ವಾಗ್ದಾನವನ್ನು ಆಡಳಿತ ಮಂಡಳಿಗೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ಅಬ್ದುಲ್ ಖಾದರ್ ಕುಕ್ಕಾಜೆ ಅವರು ಸಂಸ್ಥೆಯ ಬೆಳವಣಿಗೆಯಲ್ಲಿ ಅನುಭವಿಸಿರುವ ಎಡರು-ತೊಡರುಗಳ ಬಗ್ಗೆ ಹೇಳುತ್ತಾ, ಇವೆಲ್ಲವುಗಳನ್ನು ಅನಿವಾಸಿ ಮಿತ್ರರ ಬಲಿಷ್ಠವಾದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಮೆಟ್ಟಿ ನಿಂತು, ಇಂದು ಈ ಮಟ್ಟಕ್ಕೆ ತಲುಪುವಲ್ಲಿ ಸಹಕರಿಸಿದ ವಿದ್ಯಾರ್ಥಿಗಳ ಪೋಷಕರು, ಸ್ಥಳೀಯ ನಾಗರಿಕರು ಮತ್ತು ಸ್ಥಳೀಯಾಡಳಿತದ ಮಹತ್ತರ ಪಾತ್ರವನ್ನು ವಿವರಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಆಮಿನಾ ಬಾನು 2025-26ನೇ ಶೈಕ್ಷಣಿಕ ವರ್ಷದ ಪ್ರಗತಿ ಮತ್ತು ಸಾಧನೆಗಳ ಬಗ್ಗೆ ವಿಸ್ತಾರವಾದ ವರದಿಯನ್ನು ಮಂಡಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ಜಬ್ಬಾರ್ , ಬುಡೋಳಿ (ಅಬುಧಾಬಿ) ಮಾತನಾಡಿ, ವಿದ್ಯಾರ್ಥಿಗಳ ಕಲಿಕಾ ವಿಷಯದಲ್ಲಿ ಸಂಸ್ಥೆಯು ಯಾವುದೇ ರಾಜಿಗೆ ಸಿದ್ಧವಿಲ್ಲ. ಅವರ ಯಾವುದೇ ಅವಶ್ಯಕತೆಗಳನ್ನು ಪೂರೈಸಲು ಆಡಳಿತ ಮಂಡಳಿ ಬದ್ಧವಾಗಿದೆ ಎಂದರು.

ಈ ಕಾರ್ಯಕ್ರಮವು ವಿದ್ಯಾರ್ಥಿನಿಗಳಾದ ಝಿಯಾನಾ, ಹಿಬಾ, ಫಿದಾ, ರಿಝಾ, ಧನ್ಯಶ್ರೀ ಮತ್ತು ಆರಿಫಾ ರವರ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು. ಬಳಿಕ ಸಹ ಶಿಕ್ಷಕಿ ಅಲಿಮತ್ ಸಅದಿಯಾ ಅವರು ಅತಿಥಿ ಗಣ್ಯರು ಹಾಗೂ ಸಭಿಕರನ್ನು ಸ್ವಾಗತಿಸಿದರು.

ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿಜೇತ ವಿದ್ಯಾರ್ಥಿಗಳ ಹೆಸರುಗಳನ್ನು ಕ್ರಮವಾಗಿ, ಸಹಶಿಕ್ಷಕಿಯರುಗಳಾದ ಆಬಿದಾ ಬೇಗಂ, ತಸ್ಮಿನಾ ಹಾಗೂ ಸಹ ಶಿಕ್ಷಕರಾದ ಹೈದರ್ ಮತ್ತು ಕ್ರೀಡಾ ಸ್ಪರ್ಧೆಯಲ್ಲಿನ ಬಹುಮಾನ ವಿಜೇತರ ಹೆಸರುಗಳನ್ನು ಸಹ ಶಿಕ್ಷಕ ಫಝಲ್ ರವರು ವಾಚಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಜಾನಪದ, ದೇಶಭಕ್ತಿ ಹಾಗೂ ಆಧುನಿಕ ನೃತ್ಯಗಳು ನೆರೆದಿದ್ದ ಪೋಷಕರ ಹಾಗೂ ಪ್ರೇಕ್ಷಕರ ಮನಸೂರೆಗೊಂಡವು. ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳಿಂದ ಕರಾಟೆ ಶಿಕ್ಷಕ ಅಬ್ದುಲ್ ರಹಮಾನ್ ನಿರ್ದೇಶನದಲ್ಲಿ ಆತ್ಮ ರಕ್ಷಣಾ ಕಲಾ ಮನೋರಂಜನೆಯ ಪ್ರದರ್ಶನಗಳನ್ನು ನೀಡಲಾಯಿತು.

ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉಸ್ತುವಾರಿಯನ್ನು ಸಹ ಶಿಕ್ಷಕಿಯರುಗಳಾದ ಮುಬೀನಾ ಶುಭಾನ್ , ಸಮ್ರೀನಾ, ಆಶಿಕಾ, ಮುಬೀನಾ ಹಾಗೂ ಅಶ್ಫಿಯಾರವರು ನಿರ್ವಹಿಸಿದರು.

ಸಹ ಶಿಕ್ಷಕಿ ಫಾತಿಮತ್ ಸಿನಾನರವರು ಕಾರ್ಯಕ್ರಮವನ್ನು ನಿರೂಪಣೆಗೈದರು ಮತ್ತು ಸಹ ಶಿಕ್ಷಕಿ ಮೀನಾಕ್ಷಿಯವರು ಧನ್ಯವಾದವಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X