ಬಂಟ್ವಾಳ: ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

ಬಂಟ್ವಾಳ: ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ. ರೋಡಿನ ರೈಲ್ವೇ ನಿಲ್ದಾಣದ ಬಳಿ ಗುರುವಾರ ನಡೆದಿದೆ.
ಮೃತಪಟ್ಟ ಯುವಕನಿಗೆ 35 ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ.
ಗುರುವಾರ ಬೆಳಿಗ್ಗೆ 11ಗಂಟೆ ಸುಮಾರಿಗೆ ಗೂಡ್ಸ್ ರೈಲು ಬಿ.ಸಿ.ರೋಡ್ ನಿಲ್ದಾಣದಲ್ಲಿ ಸಾಗುವ ವೇಳೆ ಆ ವ್ಯಕ್ತಿಯು ಹಳಿಯಲ್ಲಿ ಮಲಗಿದ್ದು ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಖದ ಭಾಗಕ್ಕೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಮೃತ ಯುವಕನ ವಿವರಗಳು ಇನ್ನೂ ಪತ್ತೆಯಾಗಿಲ್ಲ, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.
Next Story





