Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ : ಮನೆಗೆ ನುಗ್ಗಿ ನಗ-ನಗದು ಕಳವು

ಬಂಟ್ವಾಳ : ಮನೆಗೆ ನುಗ್ಗಿ ನಗ-ನಗದು ಕಳವು

ವಾರ್ತಾಭಾರತಿವಾರ್ತಾಭಾರತಿ24 Oct 2023 10:33 PM IST
share
ಬಂಟ್ವಾಳ : ಮನೆಗೆ ನುಗ್ಗಿ ನಗ-ನಗದು ಕಳವು

ಬಂಟ್ವಾಳ : ಬಿಲ್ಡರ್ ಓರ್ವರ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ನಗ ಹಾಗೂ ನಗದನ್ನು ಕೆಲಸಕ್ಕಿದ್ದ ವ್ಯಕ್ತಿ ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ.

ಪುದು ಗ್ರಾಮದ ಕೋಡಿಮಜಲು ನಿವಾಸಿ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರು ತನ್ನ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಸುಮಾರು 2,75,000 ರೂ ನಗದು ಹಾಗೂ 4,96,000 ಲಕ್ಷ ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು 8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಆತನಿಗೆ ಫರಂಗಿಪೇಟೆಯ ಹುಡುಗಿಯ ಜೊತೆ ವಿವಾಹವಾಗಿದ್ದು ಮಾಲಕರ ಜೊತೆ ಹೆಚ್ಚಿನ ವಿಶ್ವಾಸ ಹೊಂದಿದ್ದ. ಈ ಕಾರಣಕ್ಕಾಗಿ ಸಹಾಯಕನಾಗಿ ದುಡಿಯುತ್ತಿದ್ದ ಈತನೊಂದಿಗೆ ಮನೆಗೆ ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಡುತ್ತಿದ್ದರು. ಅ.18 ರಂದು ಮನೆ ಮಂದಿ ಎಲ್ಲರೂ ಮನೆಯಿಂದ ಹೊರಗಡೆ ಹೋಗಿದ್ದು ಮನೆಯ ಬೀಗದ ಕೀ ಯನ್ನು ಕೆಲಸದಾಳು ಆಲಿಗೆ ನೀಡಿದ್ದರು.

ಅ. 23 ರಂದು ಊರಿಗೆ ವಾಪಾಸು ಆದ ಇವರು ರಾತ್ರಿ ಸುಮಾರು 8 ಗಂಟೆಗೆ ಮನೆಗೆ ಬಂದಿದ್ದು, ಮನೆಯ ಬೀಗದ ಕೀಲಿಗಾಗಿ ಆಲಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು. ಸಂಶಯದಿಂದ ಮನೆಯ ಹಿಂಬದಿಯಿಂದ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿ ಇದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿತ್ತು.

ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸ್ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ಒಳಗೆ ಹೋಗಿ‌ ನೋಡಿದಾಗ ಲಕ್ಷಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್ ಹಾಗೂ ಬೆರಳಚ್ಚು ತಜ್ಞರು, ಶ್ವಾನದಳದವರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X