Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಪತ್ರಕರ್ತರ ಸಂಘದ ಸದಸ್ಯರಿಗೆ...

ಬಂಟ್ವಾಳ: ಪತ್ರಕರ್ತರ ಸಂಘದ ಸದಸ್ಯರಿಗೆ ಆರೋಗ್ಯ ಕಾರ್ಡ್ ವಿತರಣೆ, ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ31 July 2023 10:56 PM IST
share
ಬಂಟ್ವಾಳ: ಪತ್ರಕರ್ತರ ಸಂಘದ ಸದಸ್ಯರಿಗೆ ಆರೋಗ್ಯ ಕಾರ್ಡ್ ವಿತರಣೆ, ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ

ವಿಟ್ಲ: ದೇಶದ ಸದ್ಯದ ಸ್ಥಿತಿಯಲ್ಲಿ ಎಲ್ಲಾ ಅಂಗಗಳೂ ಅಂಟಿಕೊಂಡು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಂಥಾಲಯಗಳ ಬಳಕೆಯನ್ನು ವಿದ್ಯಾರ್ಥಿಗಳು ಹೆಚ್ಚು ಬಳಕೆ ಮಾಡುವ ಮೂಲಕ ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳಬೇಕು. ಒಳ್ಳೆಯ ವಿಚಾರಗಳನ್ನು ಸಮಾಜ ಸ್ವೀಕರಿಸುವ ರೀತಿ ಬದಲಾಗುತ್ತಿದೆ. ಪತ್ರಕರ್ತರು ಸಮಾಜವನ್ನು ತಿದ್ದುವ ರೀತಿಗಳು ವಿದ್ಯಾರ್ಥಿಗಳಿಗೆ ತಿಳಿಯಬೇಕಾಗಿದೆ. ಪತ್ರಿಕಾ ರಂಗದಿಂದಾಗಿ ಸಮಾಜ ಸಮತೋಲನದಿಂದ ಸಾಗುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಸೋಮವಾರ ಬಸವನಗುಡಿ ವಿಠಲ ಜೇಸೀಸ್ ಆಂಗ್ಲ ಮಾಧ್ಯಮಶಾಲೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು, ಬಿಸಿರೋಡ್ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಸಂಘದ ಸದಸ್ಯರಿಗೆ ಮಣಿಪಾಲ್‌ ಆರೋಗ್ಯ ಕಾರ್ಡ್ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುತ್ತೂರು ಪತ್ರಕರ್ತ ಸುಧಾಕರ ಸುವರ್ಣ ಮಾತನಾಡಿ ತುಳುನಾಡಿ ಪ್ರಧಾನ ಸೀಮೆಗಳಲ್ಲಿ ಒಂದಾದ ವಿಟ್ಲ ರಾಜರ ಕಾಲದಿಂದಲೂ ವಿಶೇಷ ಸ್ಥಾನಮಾನವನ್ನು ಹೊಂದಿದೆ. ಧನಾತ್ಮಕ ಹಾಗೂ ಋಣಾತ್ಮಕವಾಗಿ ವಿಚಾರದಲ್ಲಿ ರಾಜ್ಯದ ಗಡಿಯಲ್ಲಿರುವ ವಿಟ್ಲದ ಜತೆಗೆ ಪೊಲೀಸರಿಗೆ ಹಾಗೂ ಪತ್ರಕರ್ತರಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ. ಸಮಾಜದ ಕನ್ನಡಿಯಂತಿರುವ ಪತ್ರಿಕೆ, ಜನರ ನಡುವಿನ ಕೊಂಡಿಯಾಗಿ ಕೆಲಸ ನಿರ್ವಹಿಸುತ್ತದೆ. ಒಳ್ಳೆಯ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಮಹತ್ವ ಹೆಚ್ಚಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕುಘಟಕದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ವಹಿಸಿದ್ದರು. ಪತ್ರಕರ್ತರಿಂದ ವಿವಿಧ ಬೇಡಿಕೆಗಳ ಮನವಿ ಹಾಗೂ ಶಾಲಾ ಆಡಳಿತ ಮಂಡಳಿಯ ಬೇಡಿಕೆಗಳ ಮನವಿಯನ್ನು ಈ ಸಂದರ್ಭದಲ್ಲಿ ನೀಡಲಾಯಿತು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ವಿಠಲಜೇಸೀಸ್ ಎಜುಕೇಶನಲ್ ಸೊಸೈಟಿ ಅಧ್ಯಕ್ಷ ಎಲ್. ಎನ್. ಕೂಡೂರು, ಶಾಲೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು, ಮಂಗಳೂರು ಕೆ.ಎಂ.ಸಿ. ಮಾರುಕಟ್ಟೆ ವಿಭಾಗದ ಮನಮೋಹನ, ಉದಯ, ಕಾರ್ತಿಕ್ ನಾಯಕ್ ಉಪಸ್ಥಿತರಿದ್ದರು.

ವಿಠಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಜಯರಾಮ ರೈ ಸ್ವಾಗತಿಸಿದರು. ಬಂಟ್ವಾಳ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಪ್ರಸ್ತಾವನೆಗೈದರು. ಪತ್ರಕರ್ತ ರಮೇಶ್ ಕೆ. ಪುಣಚ ವಂದಿಸಿದರು. ಪತ್ರಕರ್ತ ಉದಯಶಂಕರ ನೀರ್ಪಾಜೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X