Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಸರ ಕಳ್ಳರ ಬಂಧನ; ತನಿಖಾ...

ಬಂಟ್ವಾಳ: ಸರ ಕಳ್ಳರ ಬಂಧನ; ತನಿಖಾ ತಂಡಕ್ಕೆ ಪೊಲೀಸ್ ಅಧೀಕ್ಷಕರಿಂದ ನಗದು ಬಹುಮಾನ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ23 Dec 2023 3:52 PM IST
share
ಬಂಟ್ವಾಳ: ಸರ ಕಳ್ಳರ ಬಂಧನ; ತನಿಖಾ ತಂಡಕ್ಕೆ ಪೊಲೀಸ್ ಅಧೀಕ್ಷಕರಿಂದ ನಗದು ಬಹುಮಾನ ಘೋಷಣೆ

ಬಂಟ್ವಾಳ : ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿಯ ಅಂಗಡಿಯೊಂದರಲ್ಲಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರು ‌ಬೈಕಂಪಾಡಿಯ ಅಶೋಕ, ಮಂಗಳೂರು ದಂಬೇಲ್ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದೂವರೆ ಪವನಿನ ಚಿನ್ನದ ಸರ ಮತ್ತು ಬೈಕನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿ.14 ರಂದು ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿರುವ ಅಂಗಡಿಯೊಂದಕ್ಕೆ ಬಂದ ಆರೋಪಿಗಳು ಅಂಗಡಿ ಮಾಲಕಿ ಸರೋಜಿನಿ ಅವರ ಕುತ್ತಿಗೆಯಿಂದ ಚೈನ್ ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ನಿರ್ದೇಶನದಂತೆ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರ ಮಾರ್ಗದರ್ಶನದಲ್ಲಿ‌ ಪಿ.ಎಸ್.ಐ ಗಳಾದ ರಾಮಕೃಷ್ಣ, ಕಲೈಮಾರ್ ಮತ್ತವರ ಸಿಬ್ಬಂದಿ ಇರ್ಷಾದ್, ರಾಜೇಶ್, ಗಣೇಶ್, ಮೋಹನ, ವಿವೇಕ್ ಅವರು ಬೆಂಜನಪದವಿನ ಕರಾವಳಿ ಸೈಟ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ‌ ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ಒಳಪಡಿಸಲಾಗಿದೆ.

ಈ ಕೃತ್ಯಕ್ಕೆ ಸಂಬಂಧಿಸಿ ಅರೋಪಿಗಳ ಯಾವುದೇ ಸುಳಿವು ಇರಲಿಲ್ಲ, ಘಟನಾ ಸ್ಥಳದಲ್ಲಿ ಸಿ.ಸಿ ಕ್ಯಾಮರ ಕೂಡ ಇರದಿದ್ದು, ವಾರದೊಳಗೆ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ ನಗರ ಠಾಣಾ ನಿರೀಕ್ಷಕ ಆನಂತ ಪದ್ಮನಾಭ ಹಾಗೂ ತಂಡಕ್ಕೆ ಪೊಲೀಸ್ ಅಧೀಕ್ಷಕರು ನಗದು ಬಹುಮಾನ ಘೋಷಿಸಿದ್ದಾರೆ.

Tags

Bantwala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X