Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿ.ಸಿ.ರೋಡ್ : ರಾಜ್ಯಪಾಲರ ಹುದ್ದೆಯನ್ನು...

ಬಿ.ಸಿ.ರೋಡ್ : ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Aug 2024 10:31 PM IST
share
ಬಿ.ಸಿ.ರೋಡ್ : ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಬಂಟ್ವಾಳ : ಭಾರತದ ಒಕ್ಕೂಟ ವ್ಯವಸ್ಥೆಯನ್ನು ಅಸ್ಥಿರಗೊಳಿಸಲು ರಾಜಕೀಯವಾಗಿ ದುರ್ಬಳಕೆ ಯಾಗುತ್ತಿರುವ ಹಾಗೂ ಪ್ರಜಾತಂತ್ರಕ್ಕೆ ಮಾರಕವಾಗಿರುವ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಲು ಸಂವಿಧಾನಾತ್ಮಕವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷ (ಸಿಪಿಐ) ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್‌ ಕುಮಾರ್‌ ಬಂಟ್ವಾಳ್‌ ಮಾತನಾಡಿ, ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಜನತಂತ್ರ ವ್ಯವಸ್ಥೆಯಲ್ಲಿ ಜನ ರಿಂದ ಬಹುಮತ ಪಡೆದು ಆಯ್ಕೆಯಾದ ಒಂದು ಚುನಾಯಿತ ರಾಜ್ಯ ಸಕಾ೯ರವನ್ನುಕೇಂದ್ರ ಸರ್ಕಾರದಿಂದ ನೇಮಕ ಮಾಡಲ್ಪಟ್ಟ ರಾಜ್ಯಪಾಲರ ಮೂಲಕ ಅಸ್ಥಿರಗಳಿಸಲು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕುಟಿಲ ರಾಜಕೀಯ ನೀತಿಯಿಂದ ಸಾಬೀತಾಗುತ್ತಿದೆ ಎಂದರು.

ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮೈಸೂರು ಅಭಿವ್ರದ್ದಿ ಪ್ರಾಧಿಕಾರ (ಮೂಡ) ದ ಬದಲಿ ನಿವೇಶನ ಹಂಚಿಕೆ ಪ್ರಕರಣ ವಾಗಲಿ ಹಾಗೂ ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರ ಪ್ರಕರಣವಾಗಲಿ ಇವುಗಳ ಕುರಿತು ನ್ಯಾಯಾಂಗದ ಚೌಕಟ್ಟಿ ನಲ್ಲಿ ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಹ ಭಾರತ ಕಮ್ಯುನಿಸ್ಟ್‌ ಪಕ್ಷ (ಸಿಪಿಐ) ಆಗ್ರಹಿಸುತ್ತದೆ ಎಂದ ಅವರು ಮೂಡಾ ಪ್ರಕರಣದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂ಼ಶನ್‌ ಗೆ ಅನುಮತಿ ನೀಡುವ ಸಂದರ್ಭ ರಾಜ್ಯಪಾಲರ ಕಚೇರಿಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಸ್ವಷ್ಟವಾಗಿ ಕಂಡುಬರುತ್ತಿದೆ. ಈ ಹಿಂದೆ ರಾಜ್ಯದ ಹಲವು ಭ್ರಷ್ಟಚಾರಗಳ ಕುರಿತಾದ ಪ್ರಕರಣಗಳ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿ ಪ್ರಕರಣಗಳ ತನಿಖೆಗೆ ಅನುಮತಿ ನೀಡುವಂತೆ ಕೋರಿ ಹಲವು ವರ್ಷಗಳು ಕಳೆದರೂ ಇಂದಿನ ಯಾವುದೇ ದೂರುಗಳ ಬಗ್ಗೆಯೂ ಕ್ರಮ ಕೈಗೊಳ್ಳದೆ ಇರುವ ರಾಜ್ಯಪಾಲರು ಕೇವಲ ಒಬ್ಬ ವ್ಯಕ್ತಿ ನೀಡಿದ ದೂರನ್ನು ಆಧರಿಸಿ ದೂರು ಸ್ವೀಕರಿಸಿದ ದಿನವೇ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಮುಖ್ಯಮಂತ್ತಿಗಳಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿ, ತದನಂತರ ಮುಖ್ಯಮಂತ್ರಿಗಳ ವಿರುದ್ದ ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿರುವು ದನ್ನು ಗಮನಿಸಿದರೆ ರಾಜ್ಯಪಾಲರ ತೀರ್ಮಾನ ಸಂಪೂಣವಾಗಿ ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್‌ ಮಾತನಾಡಿ, ಸಂಸದೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಕೇಂದ್ರ ಸರಕಾರದ ಸೂಚನೆಯಂತೆ ಕೇವಲ ರಾಷ್ಟ್ರಪತಿಗಳಿಂದ ನೇಮಿಸಲ್ಪಟ್ಟು ಸೀಮಿತ ಅಧಿಕಾರ ಹೊಂದಿದ್ದರೂ ಸಹ ರಾಜ್ಯ ಪಾಲರು ತಮ್ಮನ್ನು ನೇಮಕ ಮಾಡಿದ ರಾಜಕೀಯ ಪಕ್ಷದ ಹಿತಾಸಕ್ತಿ, ನಿರ್ದೇಶನಕ್ಕೆ ಅನುಗುಣವಾಗಿಯೇ ಕೆಲಸ ಮಾಡುತ್ತಾರೆ. ಭಾರತದ ಪ್ರಜಾಸತ್ತೆಯ ಇತಿಹಾಸವನ್ನು ಗಮನಿಸಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಸರಕಾರವು ತನಗಾಗದೇ ಇರುವ ರಾಜ್ಯದಲ್ಲಿ ಆಡಳಿತ ನಡೆಸುವ ಮತ್ತೊಂದು ಪಕ್ಷದ ಸರಕಾರಗಳನ್ನು ವಜಾಗೊಳಿಸಿರುವ ಉದಾಹ ರಣೆಗಳು ಇದೆ. 1959 ರಲ್ಲಿ ಕೇರಳ ರಾಜ್ಯ ಸರಕಾರವನ್ನು ವಜಾಗೊಳಿಸಿರುವುದರಿಂದ ಹಿಡಿದು ಹಲವು ಸಂದರ್ಭಗಳಲ್ಲಿ ಸಂವಿಂಧಾನದ 356 ಕಲಂ ಬಳಸಿ ವಿವಿಧ ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತವನ್ನು ಜ್ಯಾರಿಗೊಳಿಸಲಾಗಿದೆ ರಾಜ್ಯ ಪಾಲರ ಹುದ್ದೆ ಅನಾವಶ್ಯಕವಾಗಿದ್ದು ಈ ಹುದ್ದೆಗಾಗಿ ಜನರಿಂದ ಸಂಗ್ರಹಿಸಿದ ಅಪಾರ ಹಣವು ಅನಾವಶ್ಯಕವಾಗಿಯೇ ವ್ಯಯವಾಗು ತ್ತಿದೆ ಎಂದು ಟೀಕಿಸಿದರು.

ಪ್ರತಿಭಟನೆಗೂ ಮುನ್ನ ಪಕ್ಷದ ಬಿ.ಸಿ.ರೋಡು ಕಚೇರಿಯಿಂದ ಮೆರವಣಿಗೆ ನಡೆಸಲಾಯಿತು. ಸೇತೃತ್ವವನ್ನು ಸಿಪಿಐ ತಾಲೂಕು ಸಮಿತಿ ಸದಸ್ಯ ಎಂ ರಾಮ ಮುಗೇರ, ಉಮಾಮತಿ ಕುರ್ನಾಡು, ಶಮಿತ, ಸರೋಜಿನಿ ಕುರಿಯಾಳ, ಭಾರತೀಯ ಮಹಿಳಾ ಒಕ್ಕೂಟದ ನಾಯಕಿ ಕೇಶವತಿ, ರೇವತಿ ಎಸ್‌, ಮೋಹಿನಿ, ನಯನ ಕೆ, ಭೋಜ ಕರಂಬೇರ, ಎಂ.ಬಿ.ಬಾಸ್ಕರ, ಯುವಜನ ಫೆಡರೇಶನ್‌ (ಎಐವೈಎಫ್)‌ ನ ಹರ್ಷಿತ್‌, ಮೋಹನ ಅರಳ, ಸೀತರಾಮ ವಿಟ್ಲ. ಓ.ಕೃಷ್ಣ, ಮುಂತಾದವರು ವಹಿಸಿದ್ದರು.

ಸಿಪಿಐ ಬಂಟ್ವಾಳ ತಾಲೂಕು ಸಹ ಕಾರ್ಯದರ್ಶಿ ಪ್ರೇಮನಾಥ ಕೆ ಸ್ವಾಗತಿಸಿ, ಭಾರತಿ ಪ್ರಶಾಂತ್‌ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X